Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಳಕ್ಕೆ ಎನ್ ಇ ಪಿ ಪೂರಕ

by KM Shivaraju November 29, 2023
written by KM Shivaraju November 29, 2023 0 comments 1 minutes read
6FacebookTwitterPinterestEmail
154
ಬೆಂಗಳೂರು ಟೆಕ್ ಮೇಳದಲ್ಲಿ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅಭಿಮತ

ಬೆಂಗಳೂರು: ಯುವಜನರು ಮತ್ತು ವಿದ್ಯಾರ್ಥಿಗಳ ಸಬಲೀಕರಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇ ಪಿ 2020) ಪೂರಕ ಮತ್ತು ಸಮರ್ಪಕವಾಗಿದೆ ಎಂದು ಹೆಸರಾಂತ ಉದ್ಯಮಿ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಬುಧವಾರ ಅಭಿಪ್ರಾಯಪಟ್ಟರು.

ʼಬೆಂಗಳೂರು ಟೆಕ್ ಸಮ್ಮಿಟ್ʼನಲ್ಲಿ ವಿಶೇಷ ಸಂವಾದದಲ್ಲಿ ಭಾಗವಹಿಸಿದ ಅವರು, ವಿದ್ಯಾರ್ಥಿಗಳು ಹೆಚ್ಚು ಸಮರ್ಥರಾಗಲು ಎನ್ ಇ ಪಿ ನೆರವಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ ಇ ಪಿ ಕರಡು ರಚನೆ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರು ಅಭಿನಂದನಾರ್ಹರು ಎಂದರು.

ಎನ್ ಇ ಪಿ ಸಕಾರಾತ್ಮಕ ಹೆಜ್ಜೆ

ವಿದ್ಯಾರ್ಥಿಗಳು ಸ್ವತಂತ್ರವಾಗಿ ಚಿಂತನೆ ಮಾಡುವುದು, ಕ್ರಿಯಾತ್ಮಕವಾಗಿ ಆಲಿಸುವುದು, ವಿಶ್ಲೇಷಣಾ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ. ಅಂತರಶಿಸ್ತೀಯ ವಿಷಯಗಳನ್ನು ಕಲಿಯುವುದು ಪ್ರಸಕ್ತ ಕಾಲಕ್ಕೆ ಮಹತ್ವದ್ದು. ಈ ನಿಟ್ಟಿನಲ್ಲಿ ಎನ್ ಇ ಪಿ ಸಕಾರಾತ್ಮಕ ಹೆಜ್ಜೆಯಾಗಿದೆ ಎಂದರು.

ಭಾರತದಂತಹ ರಾಷ್ಟ್ರ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಸಹಾನುಕಂಪದಿಂದ ಕೂಡಿದ ಬಂಡವಾಳಶಾಹಿ ವ್ಯವಸ್ಥೆಯೇ ಅತ್ಯಂತ ಸೂಕ್ತ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನನ್ನ ವಿದ್ಯಾರ್ಥಿದೆಸೆ ಹಾಗೂ ಯೌವನದಲ್ಲಿ ನಾನು ಕೂಡಾ ಬೇರೆ ನಿಲುವುಗಳನ್ನು ಹೊಂದಿದ್ದೆ. ಆದರೆ, ಕಾಲಾನಂತರದಲ್ಲಿ ಇತರ ದೇಶಗಳ ಅಭಿವೃದ್ಧಿ ಹಾದಿ ಗಮನಿಸಿದ ಮೇಲೆ ಸಹಾನುಕಂಪದಿಂದ ಕೂಡಿದ ಬಂಡವಾಳಶಾಹಿಯಾಗಿ ಬದಲಾದೆ. ಫ್ರಾನ್ಸ್ ನಲ್ಲಿ ನಾನು ಕಳೆದ ದಿನಗಳು ನನ್ನ ಚಿಂತನೆಯನ್ನು ಬದಲಾಯಿಸಿತು ಎಂದು ನಾರಾಯಣ ಮೂರ್ತಿ ತಮ್ಮ ಅನುಭವ ಹಂಚಿಕೊಂಡರು.

ಉದ್ಯಮಿಗೆ ನಾಲ್ಕು ಅಂಶಗಳು ಬಹುಮುಖ್ಯ

ಪ್ರತಿ ಉದ್ಯಮಿಯೂ ಕೆಲವು ನಿಯಮಗಳನ್ನು ಅನುಸರಿಸಬೇಕು. ಸಮಾಜದ ಹಿತಾಸಕ್ತಿಯಲ್ಲಿ ಯಾವುದೇ ರಾಜಿ ಇಲ್ಲ. ಆಡಳಿತದ ಎಲ್ಲ ನಿಯಮಗಳ ಪಾಲನೆ, ನಿಯಮಿತ ತೆರಿಗೆ ಪಾವತಿ, ಉತ್ತಮ ನಾಗರಿಕ ಆಗುವುದು. ಈ ನಾಲ್ಕು ಅಂಶಗಳು ಬಹುಮುಖ್ಯ ಎಂದರು.

ನಾಗರಿಕರಿಗೆ ಉಚಿತ ಕೊಡುಗೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಯಾವುದೇ ಸರಕು ಉಚಿತವಾಗಿ ದೊರಕಬಾರದು. ಪ್ರತಿಯೊಂದಕ್ಕೂ ಒಂದು ಮೌಲ್ಯವಿದೆ. ಹಾಗಂತ ನಾನು ಬಡಜನರಿಗೆ ಉಚಿತ ಕೊಡುಗೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ನಾನು ಕೂಡಾ ಬಡತನದ ಹಿನ್ನೆಲೆಯಿಂದಲೇ ಬಂದವನು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ ಯೋಜನೆಯನ್ನು ಇನ್ನೂ 5 ವರ್ಷ ವಿಸ್ತರಿಸಿದ್ದಾರೆ. ಇಂತಹ ಕ್ರಮಗಳು ಬಡಜನರಿಗೆ ಆಹಾರ ಖಾತ್ರಿಪಡಿಸುತ್ತವೆ ಎಂದು ಹೇಳಿದರು.

ಭವಿಷ್ಯದ ತಲೆಮಾರಿಗಾಗಿ ಕೊಡುಗೆ ನೀಡಬೇಕು

ಉಚಿತ ಕೊಡುಗೆಗಳನ್ನು ಪಡೆದ ಜನರು ಸಮಾಜಕ್ಕೆ ಮರುಕೊಡುಗೆ ನೀಡುವ ತಮ್ಮ ಜವಾಬ್ದಾರಿ ಅರಿಯಬೇಕು. ಭವಿಷ್ಯದ ತಲೆಮಾರಿಗಾಗಿ ಕೊಡುಗೆ ನೀಡಬೇಕು ಎಂದು ನುಡಿದರು.

 ದೇಶ ಮೊದಲು, ನಂತರ ಪಕ್ಷ

ಆರ್ಥಿಕ ಮತ್ತು ಔದ್ಯಮಿಕ ಅಭಿವೃದ್ಧಿಯಲ್ಲಿ ಚೀನಾ ಉತ್ತಮ ಸಾಧನೆ ಮಾಡಿದ್ದು, ಭಾರತ ಅದರಿಂದ ಕಲಿಯುವುದು ಸಾಕಷ್ಟಿದೆ. ಈ ಬಗ್ಗೆ ನಮ್ಮ ರಾಜಕೀಯ ನೇತಾರರು ಅಧ್ಯಯನ ಮಾಡಬೇಕು. ಯಾವುದೇ ಪಕ್ಷ ಅಧಿಕಾರ ವಹಿಸಿಕೊಂಡರೂ ದೇಶದ ಅಭಿವೃದ್ಧಿ ಮೊದಲ ಆದ್ಯತೆಯಾಗಬೇಕು. “ದೇಶ ಮೊದಲು, ನಂತರ ಪಕ್ಷ” ಎಂಬ ಮನೋಭಾವ ಬೆಳೆಯಬೇಕು ಎಂದು ನಾರಾಯಣಮೂರ್ತಿ ಹೇಳಿದರು.

ಉದ್ಯಮಿ ನಿಖಿಲ್ ಕಾಮತ್ ಸಂವಾದ ನಡೆಸಿಕೊಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
increase students' potentialinfosys founderkmskmskannadanarayan murthynep positive step
6 FacebookTwitterPinterestEmail
KM Shivaraju

previous post
ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಪ್ ಪ್ರಮಾಣಪತ್ರ
next post
ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ