Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೈತರಿಗೆ  2 ಸಾವಿರ ರೂ. ಬೆಳೆ ಪರಿಹಾರ

by KM Shivaraju November 30, 2023
written by KM Shivaraju November 30, 2023 0 comments 2 minutes read
6FacebookTwitterPinterestEmail
129
ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಹಣ ಬಿಡುಗಡೆ: ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದಲ್ಲಿ ತೀವ್ರ ಸ್ವರೂಪದ ಬರವಿದ್ದರೂ ಕೇಂದ್ರ ಸರ್ಕಾರ ಬೆಳೆ ಪರಿಹಾರ ನೀಡಲು ಮೀನಾಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಅರ್ಹ ರೈತರಿಗೆ ತಲಾ ಎರಡು ಸಾವಿರ ರೂ. ಬೆಳೆ ಪರಿಹಾರ ಘೋಷಣೆ ಮಾಡಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ಅವರು, ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರವೇ ಮೊದಲ ಕಂತು ಬಿಡುಗಡೆ ಮಾಡಿದೆ.

ಇದನ್ನು ಹೆಕ್ಟೇರ್ ಲೆಕ್ಕದಲ್ಲಿ ನೀಡುತ್ತಿಲ್ಲ. ಬೆಳೆ ಕಳೆದುಕೊಂಡ ಎಲ್ಲಾ ಅರ್ಹ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ.  ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದರು.

ರಾಜ್ಯದ 223 ತಾಲ್ಲೂಕು ಬರಪೀಡಿತ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಅದಕ್ಕೂ ಕೇಂದ್ರ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ ಎಂದರು.

18171.44 ಕೋಟಿ ರೂ. ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು . ಸೆ. 21ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಅಧಿಕಾರಿಗಳ ನೇತೃತ್ವದ ಅಧ್ಯಯನ ತಂಡ ಅ.4 ರಿಂದ ಅ. 9ರವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ.

4663 ಕೋಟಿ ರೂ.ಬೆಳೆ ನಷ್ಟ  ಪರಿಹಾರಕ್ಕಾಗಿ ಕೇಂದ್ರಕ್ಕೆ ಮೊರೆ

ದೇಶದ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4663 ಕೋಟಿ ರೂ.ಬೆಳೆ ನಷ್ಟ  ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ. ಕೇಂದ್ರ ಹಣಕಾಸು ಸಚಿವರನ್ನು ನಮ್ಮ ಸಚಿವರು ಭೇಟಿ ಮಾಡಿದ್ದಾರೆ .

ಭೇಟಿಗೆ ಸಮಯ ಕೊಡದ ಕೇಂದ್ರ ಸರ್ಕಾರ

ಆದರೂ ಕೇಂದ್ರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ. ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ನಾನೇ ಭೇಟಿ ಮಾಡಲು ಸಮಯ ಕೊಡಿ ಎಂದು  ಪತ್ರ ಬರೆದಿದ್ದರೂ ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ರೂ. ಬಿಡುಗಡೆ ಮಾಡಿದೆ. ಕುಡಿಯುವ ನೀರು , ಮೇವಿಗೆ 327 ಕೋಟಿ ರೂ. ಬಿಡುಗಡೆ, 780 ಕೋಟಿ ರೂ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ.

60 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ

ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ. ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ.

 ಈಗ ಮೊದಲ ಕಂತ್ತಿನಲ್ಲಿ ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ. ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎನ್ನುವ ಕಾರಣದಿಂದ ರಾಜ್ಯ ಸರ್ಕಾರ ಮೊದಲ ಕಂತು ಬಿಡುಗಡೆ ಮಾಡಿದೆ ಎಂದು ಸಿದ್ದರಾಮುಯ್ಯ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2 thousand to farmers. crop compensationcmfirst installmentkmskmskannadreleased by state governmentSiddaramaiah
6 FacebookTwitterPinterestEmail
KM Shivaraju

previous post
ಜೆಪಿ ಭವನದಲ್ಲಿ ಕನಕದಾಸರ ಜಯಂತ್ಯೋತ್ಸವ
next post
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಗೆಲುವು ಸಿಗಲಿದೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ