Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಗೆಲುವು ಸಿಗಲಿದೆ

by KM Shivaraju November 30, 2023
written by KM Shivaraju November 30, 2023 0 comments 2 minutes read
3FacebookTwitterPinterestEmail
125
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ

ಬೆಳಗಾವಿ:   ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ತಿಳಿಸಿದ್ದಾರೆ.

ಸಭೆ ನಡೆಸುವ ವಿಷಯವನ್ನು ಶನಿವಾರ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಗುರುವಾರ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹೋರಾಟದಿಂದ ಹಿಂದೆ ಸರಿಯುವುದು ಬೇಡ

ಪಂಚಮಸಾಲಿ ಮೀಸಲಾತಿ ಕುರಿತು ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ. ಹಾಗಾಗಿ ಅದನ್ನು ಈಡೇರಿಸಲು ನಾವು ಬದ್ದರಾಗಿದ್ದೇವೆ. ಹೋರಾಟ ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಯಾರೂ ಹೋರಾಟದಿಂದ ಹಿಂದೆ ಸರಿಯುವುದು ಬೇಡ. ಸಮಾಜಕ್ಕೆ ನಾನು ನ್ಯಾಯ ಕೊಡಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

ನಮ್ಮ ಮುಂದಿನ ಪೀಳಿಗೆಯ ಉಜ್ವಲ ಜೀವನಕ್ಕೆ ಮೀಸಲಾತಿ ಅಗತ್ಯ. ಅದಕ್ಕಾಗಿ ಹೋರಾಟ ಅನಿವಾರ್ಯ. ಬೇರೆಯವರಿಗೆ ಮೀಸಲಾತಿ ಕೊಟ್ಟಾಗ ನಾವು ಹೊಟ್ಟೆಕಿಚ್ಚು ಮಾಡಿಲ್ಲ. ಯಾರ ತುತ್ತನ್ನೂ ನಾವು ಕಸಿಯುವುದಿಲ್ಲ. ಬೇರೆಯವರಿಗೆ 4 ತುತ್ತು ಕೊಟ್ಟು ಒಂದು ತುತ್ತು ತಿನ್ನುವವರು ನಾವು.

ನಾನು ಹೊರಗಿದ್ದರೂ ಹೋರಾಟ ಮಾಡುತ್ತೇನೆ, ಒಳಗಿದ್ದರೂ ಹೋರಾಟ ಮಾಡುತ್ತೇನೆ. ನಾವು ಪಂಚಮಸಾಲಿ ಸಮಾಜದ ಶಾಸಕರಷ್ಟೇ ಸಭೆ ನಡೆಸುವುದು ಬೇಡ. ನಮ್ಮ ಬೆಂಬಲದಿಂದ ಇನ್ನೂ ಹಲವಾರು ಶಾಸಕರು ಆಯ್ಕೆಯಾಗಿದ್ದಾರೆ. ಹೋರಾಟಕ್ಕೆ ಅವರೆಲ್ಲರ ಬೆಂಬಲ ಪಡೆಯೋಣ ಎಂದು ಹೆಬ್ಬಾಳಕರ್ ತಿಳಿಸಿದರು.

ಬಸವಣ್ಣ ಇರಲಿ, ಅಂಬೇಡ್ಕರ್ ಇರಲಿ, ಕನಕದಾಸರಿರಲಿ, ಏಸುಕ್ರಿಸ್ತ, ಪೈಗಂಬರ ಸೇರಿದಂತೆ ಎಲ್ಲರೂ ಸಮಾನತೆಯ ಸಂದೇಶ ಸಾರಿದ್ದಾರೆ. ನಮಗೂ ಸಮಾನತೆ ಬೇಕು. ಹಾಗಾಗಿ ಹೋರಾಟ ನಿರಂತರವಾಗಿರಲಿ. ಹೋರಾಟ ಮಾಡಿ ಹಕ್ಕು ಪಡೆಯೋಣ. ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.

ಡಿ.5ರಂದು ಪಂಚಮಸಾಲಿ ಶಾಸಕರ ಸಭೆ

ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಹಿಂದೆ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕರು ಈಗ ಬರುತ್ತಿಲ್ಲ ಎಂದು ಜನರು ನನ್ನ ಬಳಿ ಆಕ್ಷೇಪಿಸಿದ್ದಾರೆ. ಆದರೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರದಲ್ಲಿದ್ದರೂ ನಮ್ಮ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಹಿಂದಿನಿಂದಲೂ ಅವರು ನಮ್ಮ ಸಮಾಜದ ಜತೆಗಿದ್ದಾರೆ. ಅವರು ನಮಗೆ ನ್ಯಾಯ ಕೊಡಿಸುತ್ತಾರೆ ಎನ್ನುವ ವಿಶ್ವಾಸವಿದೆ. ನಮ್ಮ ಹೋರಾಟವನ್ನು ಮುಂದುವರಿಸೋಣ. ಡಿ.5ರಂದು ಪಂಚಮಸಾಲಿ ಶಾಸಕರ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ನಿರ್ಧರಿಸೋಣ. ಈ ಸಭೆಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೂ ಬರಲಿ ಎಂದರು.

ಲೋಕಸಭಾ ಚುನಾವಣೆ ಮುಗಿಯುವುದರೊಳಗೆ ಮೀಸಲಾತಿ

 ಬಿಜೆಪಿ ಸರಕಾರ ನಮಗೆ ಮಾತು ಕೊಟ್ಟು ಮೋಸ ಮಾಡಿದ್ದರಿಂದ ನಮ್ಮ ಸಮಾಜದ ಅರ್ಧಕ್ಕಿಂತ ಹೆಚ್ಚು ಜನರು ಕಾಂಗ್ರೆಸ್ ಗೆ  ಬೆಂಬಲ ನೀಡಿದ್ದಾರೆ. ಯಾವುದೇ ಸರಕಾರ ಬಂದರೂ ಬೇಡಿಕೆ ಈಡೇರುವವರೆಗೂ ಹೋರಾಟ ಮಾಡಲಾಗುವುದು. ಲೋಕಸಭಾ ಚುನಾವಣೆ ಮುಗಿದರೆ ನಮ್ಮನ್ನು ಕೇಳುವುದಿಲ್ಲ. ಹಾಗಾಗಿ ಅಷ್ಟರೊಳಗೆ ಮೀಸಲಾತಿ ಕಲ್ಪಿಸುವಂತೆ ಗಡುವು ನೀಡಬೇಕಿದೆ ಎಂದು ಅವರು ಹೇಳಿದರು.

ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರದಲ್ಲಿದ್ದರೂ ನಮ್ಮ ಜೊತೆ ನಿಂತಿದ್ದಾರೆ. ಅವರ ಸಮಾಜ ನಿಷ್ಠೆಗೆ ನಾವೆಲ್ಲ ಮೆಚ್ಚಲೇ ಬೇಕು. ಅವರು ಒಬ್ಬ ಪ್ರಭಾವಿ ಮಂತ್ರಿ ಎನಿಸಿದ್ದಾರೆ. ಹಾಗಾಗಿ ಸಮಾಜದ ಕೆಲಸದಲ್ಲಿ ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲಬೇಕಿದೆ ಎಂದರು.

ಮಾಜಿ ಸಚಿವರಾದ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ,  ಅಡಿವೇಶ ಇಟಗಿ. ಆರ್.ಕೆ.ಪಾಟೀಲ, ರುದ್ರಗೌಡ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basava jaya mrityunjaya swamijikmskmskannadalakshmi hebbalkarmeeting of mlas on 5th decemberpanchmasalireservation struggle
3 FacebookTwitterPinterestEmail
KM Shivaraju

previous post
ರೈತರಿಗೆ  2 ಸಾವಿರ ರೂ. ಬೆಳೆ ಪರಿಹಾರ
next post
ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ