ಕನಕದಾಸರ ಆದರ್ಶಗಳು ಇಂದಿಗೂ ಪ್ರಸ್ತುತ: ಶರವಣ
ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಇಂದು 536ನೇ ಕನಕದಾಸರ ಜಯಂತ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ವಿಧಾನ ಪರಿಷತ್ ಶಾಸಕರಾದ ಟಿ. ಎ.ಶರವಣ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶರವಣ ಅವರು ದಾಸಶ್ರೇಷ್ಠ ಕನಕದಾಸರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಕನಕದಾಸರ ಚಿಂತನೆಗಳು ಅನುಕರಣೀಯವಾಗಿವೆ. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಜಾತಿ ಭೇದ ಭಾವ ಇರಬಾರದು. ಜಾತಿ ವ್ಯವಸ್ಥೆ ಅಳಿಯಬೇಕು. ಮಾನವೀಯತೆ ಉಳಿಯಬೇಕು ಎಂದು ಪ್ರತಿಪಾದಿಸಿದ್ದಾರೆ.
ಇಂತಹ ದಾರ್ಶನಿಕರ ಆದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅವಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಎಂ.ಎಲ್.ಸಿ. ತಿಪ್ಪೇಸ್ವಾಮಿ, ಜೆಡಿಎಸ್ ಮುಖಂಡರಾದ ಸಿ.ಎಂ. ನಾಗರಾಜ್, ಬಿ.ಮುನೇಗೌಡ, ಶೀಲಾನಾಯಕ್, ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.