Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು

by KM Shivaraju November 30, 2023
written by KM Shivaraju November 30, 2023 0 comments 2 minutes read
2FacebookTwitterPinterestEmail
77
ಆಹಾರ ಖಾತೆ ಸಚಿವ ಕೆ.ಹೆಚ್ ಮುನಿಯಪ್ಪ

  ಬೆಂಗಳೂರು: ಹನ್ನೆರಡನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ  ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ದೇವನಹಳ್ಳಿ ಟೌನ್ನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ “ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರು ಸಮಾಜದ ಸುಧಾರಣೆಗಾಗಿ ರಚಿಸಿದ  ಕೀರ್ತನೆಗಳು ಇಂದಿಗೂ ಪ್ರಸ್ತುತ ವಾಗಿವೆ.  ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ದಾರ್ಶನಿಕರು ಕನಕದಾಸರು. ಮಾನವ ಕುಲವೊಂದೇ ಎಂದು ಸಮಾಜದ ಸಮಾನತೆಗಾಗಿ ಶ್ರಮಿಸಿದರು.

ಇತಿಹಾಸ ಕಂಡ ಮಹಾನ್ ವ್ಯಕ್ತಿಗಳು

ಬುದ್ಧ, ಬಸವಣ್ಣ, ಸಂತ ತುಕರಾಂ, ಪುರಂದರದಾಸರು ಇವರೆಲ್ಲರೂ ಇತಿಹಾಸ ಕಂಡ ಮಹಾನ್ ವ್ಯಕ್ತಿಗಳು ಅವರ ಸಾಲಿನಲ್ಲಿ ಕನಕದಾಸರು ಸೇರುತ್ತಾರೆ. ಕನಕದಾಸರು ಉಡುಪಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದಿರುವ ರೀತಿ, ದೇವರ ಇರುವುದಕ್ಕೆ ಪ್ರತ್ಯಕ್ಷ ಸಾಕ್ಷಿ, ಹಾಗಾಗಿ ಕನಕದಾಸರನ್ನು ದಾಸಶ್ರೇಷ್ಠರು ಎಂದು ಕರೆಯುತ್ತಾರೆ. ಆ ಸ್ಥಳ ಇಂದಿಗೂ ಕನಕನ ಕಿಂಡಿ ಎಂದು ಪ್ರಸಿದ್ಧಿ ಪಡೆದಿದೆ ಎಂದು ಸಚಿವರು ಹೇಳಿದರು.

ಸಮುದಾಯದ ಮನವಿಗಳಿಗೆ ಸ್ಪಂದಿಸಿದ ಸಚಿವರು ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಮಾಡಲು ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಟ್ಟಿಸಿಲು ಸೂಕ್ತ ಜಾಗ ಗುರ್ತಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.

 ರಾಜ್ಯದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅವರು ಮಾತನಾಡಿ ಮನುಕುಲದ ಶ್ರೇಷ್ಠರು, ಮಹಾನ್ ಕವಿಗಳು, ಜಾತಿ ಎಲ್ಲೆ ಮೀರಿ, ಕುಲ-ಕುಲವೆಂದು ಹೊಡೆದಾಡದಿರಿ ಎಂದು ಹೇಳಿದವರು ಕನಕದಾಸರು. ಅವರ ಮಾರ್ಗದರ್ಶನಗಳು ನಮ್ಮೆಲ್ಲರಿಗೂ ಸ್ಪೂರ್ತಿ, 15-16ನೇ ಶತಮಾನದಲ್ಲಿ ಸಮಾನತೆಯ ದಾರಿ ತೋರಿದವರು, ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಂಡು ಜೀವನ ನಡೆಸಬೇಕು ಎಂದು ಹೇಳಿದವರು ಕನಕದಾಸರು, ಅವರ ಕೀರ್ತನೆಗಳು ಇಂದಿಗೂ ಪ್ರಸ್ತುತ ಎಂದು ಅವರು ಹೇಳಿದರು.

ದಾಸ ಶ್ರೇಷ್ಠ ಕನಕದಾಸರ ಬಗ್ಗೆ ಹೇಳಿದ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು, 15 ನೇ ಶತಮಾನದ ದಾಸಶ್ರೇಷ್ಠರು, ಮೊದಲು ದಂಡನಾಯಕರಾಗಿದ್ದು ಹಿಂಸೆಯ ಜೀವನ ಬೇಡ ಎಂಬ ಭಾವನೆಯೊಂದಿಗೆ, ಸಮಾಜಕ್ಕೆ ಒಳಿತನ್ನು ಮಾಡಲು ಸಂತರಾಗಿ ಬದಲಾದವರು ಕನಕದಾಸರು.

ಸಮಾಜಕ್ಕೆ  ಒಳ್ಳೆಯ ಸಂದೇಶವನ್ನು ನೀಡಲು, ಬಹಳಷ್ಟು ಅಧ್ಯಯನವನ್ನು ಮಾಡಿ ಸರಳವಾಗಿ ಅರ್ಥವಾಗುವಂತಹ ಸಾಕಷ್ಟು ಕೀರ್ತನೆಗಳನ್ನು ರಚಿಸಿದ್ದಾರೆ. ಸಮಾಜದ ಮುನ್ನಡೆಗಾಗಿ, ಜಾತಿ ಪದ್ಧತಿಯ ನಿರ್ಮೂಲನೆಗಾಗಿ ಮತ್ತು ಮೂಢನಂಬಿಕೆಯ ವಿರುದ್ಧವಾಗಿ ಬಹಳಷ್ಟು ಹೋರಾಟವನ್ನು ನಡೆಸಿ ನಾವೆಲ್ಲರೂ ಒಂದೇ ಎಂಬುದನ್ನು ಪ್ರತಿಪಾದಿಸಿದವರು ಕನಕದಾಸರು  ಎಂದು ಜಿಲ್ಲಾಧಿಕಾರಿಗಳು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ದೇವನಹಳ್ಳಿ ತಾಲ್ಲೂಕಿನ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀರಾಮಯ್ಯ ಅವರು ಸಂತಕವಿ ಕನಕದಾಸರ ಜೀವನ, ತತ್ವಾದರ್ಶಗಳ ಕುರಿತು ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಎಂಬಿಬಿಎಸ್ ನಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನ ಮಾಡಲಾಯಿತು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರಕ ಪಠ್ಯ ಬೆಳಗು ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ದೇವನಹಳ್ಳಿ ಟೌನ್ ನ ಬೈಪಾಸ್ ನಲ್ಲಿರುವ ಕನಕದಾಸರ ವೃತ್ತದಿಂದ ಡಾ.ಬಿ‌.ಆರ್.ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳೊಂದಿಗೆ ದಾಸ ಶ್ರೇಷ್ಠ ಕನಕದಾಸರ ಉತ್ಸವ, ಪಲ್ಲಕ್ಕಿಗಳ ಮೆರವಣಿಗೆ ನಡೆಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಡಾ. ಕೆ ಎನ್ ಅನುರಾಧ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ ಬಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ದೇವನಹಳ್ಳಿ ವಿಭಾಗದ ಡಿ.ವೈ.ಎಸ್.ಪಿ ರವಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ. ರಾಜಣ್ಣ, ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಎಂ ಕೃಷ್ಣಮೂರ್ತಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ರಮೇಶ್, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಸಮುದಾಯದ ಮುಖಂಡರು, ಕಾರ್ಯಕರ್ತರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
food ministerkanakadasakh muniappakmskmskannadarevolutionarysocial reformer
2 FacebookTwitterPinterestEmail
KM Shivaraju

previous post
ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ
next post
ನಿಗಮ-ಮಂಡಳಿ ನೇಮಕಕ್ಕೆ ಸರ್ಕಾರ ಮೀನಾ-ಮೇಷ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ