21
ಡಿ.ಕೆ.ಶಿವಕುಮಾರ್ ಗೆ ಉಸ್ತುವಾರಿ
ಬೆಂಗಳೂರು: ತೆಲಂಗಾಣದಲ್ಲಿ ಅಧಿಕಾರ ಹಿಡಿಯತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಅಲ್ಲಿಯ ಉಸ್ತುವಾರಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿ ವರಿಷ್ಠರು ನಿಯೋಜಿಸಿದ್ದಾರೆ.
ವರಿಷ್ಠರ ಆದೇಶದ ಮೇರೆಗೆ ಶಿವಕುಮಾರ್ ಹೈದರಾಬಾದ್‌ಗೆ ತೆರಳಲಿದ್ದಾರೆ. ಪಂಚರಾಜ್ಯಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಪಕ್ಷದ ಜಯಶೀಲ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸುವ ಹೊಣೆಯನ್ನು ಉಪಮುಖ್ಯಮಂತ್ರಿ ಅವರಿಗೆ ನೀಡಲಾಗಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಸಮಬಲದ ಪೈಪೋಟಿ ನೀಡಿದ್ದರೂ ಹಸ್ತವೇ ಮುಂದಿದೆ ಎನ್ನಾಲಾಗಿದೆ. ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹಿಡಿದಿಡುವುದು ಮತ್ತು ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ರಚನೆಗೆ ತಂತ್ರಗಾರಿಕೆ ಹೊಣೆಯನ್ನೂ ಇವರಿಗೇ ವಹಿಸಲಾಗಿದೆ.