Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸರ್ಕಾರ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ

by KM Shivaraju December 2, 2023
written by KM Shivaraju December 2, 2023 0 comments 2 minutes read
2FacebookTwitterPinterestEmail
81
ವಾಸ್ತವದಲ್ಲಿ ಜನರಿಗೆ ಗ್ಯಾರೆಂಟಿ ಯೋಜನೆಗಳು ತಲುಪುತ್ತಿಲ್ಲ

ಬೆಂಗಳೂರು:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್‌ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂಬ ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ. ಇವರು ಪದೇ ಪದೇ ಗ್ಯಾರೆಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಜನರಿಗೆ ಗ್ಯಾರೆಂಟಿ ಯೋಜನೆಗಳು ತಲುಪುತ್ತಿಲ್ಲ ಎಂದರು.

ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ

ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ಕೊಡುವ ಬದಲು ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಕಾಳಸಂತೆಯಲ್ಲಿ ಅಕ್ಕಿಯನ್ನು ಮುಕ್ತವಾಗಿ ಮಾರಾಟವಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಸರ್ಕಾರ ಈ ಕೃತ್ಯದಲ್ಲಿ ಶಾಮೀಲಾಗಿದೆ ಎಂಬ ಅನುಮಾನ ಬರುತ್ತಿದೆ.

ಗೃಹಲಕ್ಷ್ಮೀ ಯೋಜನೆಯಡಿ ಮೊದಲ ತಿಂಗಳು ಕೇವಲ ಶೇ.35ರಷ್ಟು ಜನರಿಗೆ ಹಣ ತಲುಪಿದೆ. ನಂತರದ ಕಂತುಗಳು ತಲುಪಿಲ್ಲ. ಗೃಹಲಕ್ಷ್ಮೀಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ.

ವಿದ್ಯುತ್ ವಿಚಾರದಲ್ಲಂತೂ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ, ಮುಖ್ಯಮಂತ್ರಿ ಅವರು ಐದು ಗಂಟೆ ನಿರಂತರ ವಿದ್ಯುತ್ ಕೊಡುವುದಾಗಿ ಹೇಳಿದ್ದಾರೆ. ಆದರೆ, ರೈತರಿಗೆ ಕೇವಲ 3 ಗಂಟೆ ಮಾತ್ರ ವಿದ್ಯುತ್ ಸಿಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸುಮ್ಮನೆ ತೆಲಂಗಾಣಕ್ಕೆ ಹೋಗಿ ಗ್ಯಾರೆಂಟಿಗಳ ಬಗ್ಗೆ ಪುಕ್ಕಟೆ ಪ್ರಚಾರ ಪಡೆದರು.ಆರ್ಥಿಕವಾಗಿ ಸಬಲವಾಗಿರುವ ಕರ್ನಾಟಕವನ್ನು ಯಾವುದೇ ಯೋಜನೆಗಳನ್ನು ಜಾರಿಗೆ ತರದ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ.

ಹಿಂದಿನ ಸರ್ಕಾರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿದ್ದು, ಅದರ ಲಾಭ ಪಡೆದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗೆ ಎಸ್ಸಿಪಿ, ಟಿಎಸ್ ಪಿ ಯೋಜನೆಗಳ 11 ಸಾವಿರ ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ.

ರಾಜ್ಯದ ಸಾಲ ಪ್ರಮಾಣ ಹೆಚ್ಚಾಗಿದೆ

ರಾಜ್ಯದ ಸಾಲ ಪ್ರಮಾಣ ಹೆಚ್ಚಾಗಿದೆ, ಸಾಲದ ಸುಳಿಗೆ ಸಿಲುಕಿರುವ ರಾಜಸ್ತಾನ, ಪಂಜಾಬ್ ಸೇರಿದಂತೆ ಮೂರು ರಾಜ್ಯಗಳಿಗೆ ರಿಸರ್ವ್ ಬ್ಯಾಂಕ್ ಎಚ್ಚರಿಕೆ ಕೊಟ್ಟಿದೆ. ನಮ್ಮ ರಾಜ್ಯವನ್ನು ಆ ಪರಿಸ್ಥಿತಿಗೆ ತೆಗೆದುಕೊಂಡು ಹೋಗಬೇಡಿ ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಎಲ್ಲ ಹಂತದಲ್ಲೂ ನಡೆಯುತ್ತಿದೆ. ಸಣ್ಣ-ಪುಟ್ಟ ಕೆಲಸ ಮಾಡಿಕೊಡುವಲ್ಲಿಯೂ ವಸೂಲಿ ನಡೆಯುತ್ತಿದೆ. ವರ್ಗಾವಣೆ ನಿರಂತರವಾಗಿ ನಡೆಯುತ್ತಿದೆ. ನಮ್ಮ ಮೇಲೆ 40% ಆರೋಪ ಮಾಡಿದ್ದರು. ಈಗ 50% ಕಮಿಷನ್ ನೇರವಾಗಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಕಮಿಷನ್ ಆರೋಪದ ಬಗ್ಗೆ ತನಿಖೆ ನಡೆಸಲು ಸರ್ಕಾರ ಆಯೋಗ ರಚನೆ ಮಾಡಿದೆ. ಆ ಆಯೋಗ ಪ್ರಾಮಾಣಿಕವಾಗಿ ಎಲ್ಲ ಪ್ರಕರಣಗಳ ತನಿಖೆ ನಡೆಸಲಿ ಎಂದರು.

ಬರ ನಿರ್ವಹಣೆ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲ

ಬರ ನಿರ್ವಹಣೆ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರಿಗೆ ಬರ ಪರಿಹಾರಕ್ಕೆ ಒಂದು ಸಾವಿರ ರೂ. ನೀಡುತ್ತೇನೆ ಎನ್ನುವುದು ನಾಚಿಕೆಗೇಡು, ಇದು ರೈತರಿಗೆ ಮಾಡುವ ಅವಮಾನ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ನಾವು ಮೊದಲು ಪರಿಹಾರ ನೀಡಿ ನಂತರ ಕೇಂದ್ರದ ಅನುದಾನ ಪಡೆದಿದ್ದೆವು. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ.

ರಾಜ್ಯ ಸರ್ಕಾರದ ಎನ್‌ಡಿಆರ್‌ಎಫ್ ನಿಧಿಯಲ್ಲಿ ಎಷ್ಟು ಹಣ ಇದೆ, ಅದನ್ನು ಮೊದಲು ರೈತರಿಗೆ ನೀಡಲಿ. ಅನಗತ್ಯವಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ.

ನಾವು ಕೊಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆ ೪೦೦೦ ರೂ.ಗಳನ್ನು ನಿಲ್ಲಿಸಲಾಗಿದೆ. ರೈತರಿಗೆ ಡಿಸೇಲ್ ಸಬ್ಸಿಡಿ ಕೊಡುವುದನ್ನು ನಿಲ್ಲಿಸಲಾಗಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಿರುವುದನ್ನು ನಿಲ್ಲಿಸಲಾಗಿದೆ.

ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರ ನೆರವಿಗೆ ಬರಬೇಕು. ಇಲ್ಲದಿದ್ದರೆ ಅದು ಜೀವಂತ ಸರ್ಕಾರ ಅನಿಸುವುದಿಲ್ಲ ಎಂದರು.
ಪ್ರತಿಪಕ್ಷದ ನಾಯಕ ಆರ್. ಅಶೋಕ್ ಏಳು ಬಾರಿ ಶಾಸಕರಾಗಿ ಗೃಹ, ಆರೋಗ್ಯ, ಸಾರಿಗೆ ಕಂದಾಯ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಉಪಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. ಈ ಸದನದಲ್ಲಿ ಅವರ ಸಾಮರ್ಥ್ಯ ತೋರಿಸಲಿದ್ದಾರೆ ಎಂದರು.

ಪಕ್ಷದಲ್ಲಿ ಯಾವುದೇ ಆಂತರಿಕ ಸಮಸ್ಯೆ ಇಲ್ಲ

ಪಕ್ಷದಲ್ಲಿ ಯಾವುದೇ ಆಂತರಿಕ ಸಮಸ್ಯೆ ಇಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಅನೇಕ ಬಾರಿ ಯಡಿಯೂರಪ್ಪ ಅವರ ಬಗ್ಗೆ ಮಾತನಾಡಿದ್ದಾರೆ. ಸರ್ಕಾರದ ಸ್ವಜನಪಕ್ಷ ಪಾತದ ವಿರುದ್ಧ ಅವರೂ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ.

ನಾನು ರಾಜ್ಯದಲ್ಲಿಯೇ ರಾಜಕಾರಣ ಮಾಡಲು ಇಚ್ಚೆ ಪಡುತ್ತೇನೆ. ರಾಷ್ಟ್ರ ರಾಜಕಾರಣಕ್ಕೆ ಹೋಗುವ ಬಗ್ಗೆ ಯಾವುದೇ ಅಲೋಚನೆ ಇಲ್ಲ. ರಾಜ್ಯ ರಾಜಕಾರಣದಲ್ಲಿದ್ದುಕೊಂಡೆ ಜನರ ಸೇವೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavaraja bommaibelagavi sessionbengalurukarnatakakmskmskannadapolitics
2 FacebookTwitterPinterestEmail
KM Shivaraju

previous post
ಜಾತಿ ಗಣತಿ ವರದಿ ಬಂದ ನಂತರ ತೀರ್ಮಾನ
next post
ಬೆಳಗಾವಿಯ ಚಳಿಗಾಲದ ಅಧಿವೇಶನ:ಆಡಳಿತ-ಪ್ರತಿಪಕ್ಷಗಳ ನಡುವೆ ಭಾರೀ ಸಂಘರ್ಷ ಸಾಧ್ಯತೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ