Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸೋಲಿನಿಂದ ಕುಗ್ಗುವುದಿಲ್ಲ

by KM Shivaraju December 3, 2023
written by KM Shivaraju December 3, 2023 0 comments 1 minutes read
3FacebookTwitterPinterestEmail
225
ಚುನಾವಣಾ ಫಲಿತಾಂಶ: ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ  ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ ಎಂದು ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ  ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು  ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆ ಪ್ರಭಾವ ಬೀರಿದೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ . ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು.

 ಬಿಜೆಪಿ ಬಿಆರ್ ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ  ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ  ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ.

ಸೋಲಿಗೆ ಆಡಳಿತ ವಿರೋಧಿ ಅಲೆ ಕಾರಣ

ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ  ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ.

ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ  ಎಂದು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4th statedefeatElection resultNot shrinkingSiddaramaiah's reactiontelangana victory
3 FacebookTwitterPinterestEmail
KM Shivaraju

previous post
ನೆಲಮಂಗಲಕ್ಕೂ ಮೆಟ್ರೋ ಸಂಪರ್ಕ
next post
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ