Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ

by KM Shivaraju December 3, 2023
written by KM Shivaraju December 3, 2023 0 comments 2 minutes read
3FacebookTwitterPinterestEmail
112
ಉತ್ತರ ಕರ್ನಾಟಕ ಚರ್ಚೆಗೆ ಹೆಚ್ಚಿನ ಆದ್ಯತೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

ಬೆಳಗಾವಿ:16ನೇ ವಿಧಾನಸಭೆಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.4ರಿಂದ 15ರವರೆಗೆ ನಡೆಯಲಿದೆ. ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಎಲ್ಲ ಭಾಗಗಳ ವಿಷಯಗಳ ಜೊತೆಗೆ ಉತ್ತರ ಕರ್ನಾಟಕ ಭಾಗಕ್ಕೆ ಪ್ರಯೋಜನವಾಗುವ ಚರ್ಚೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದ ಕಲಾಪಗಳಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ವಿಷಯಗಳೊಂದಿಗೆ ಉತ್ತರ ಕರ್ನಾಟಕದ ಪ್ರಗತಿಯ ಕುರಿತ ಚರ್ಚೆಗನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಿದ್ಯುತ್‌ದೀಪ ಅಲಂಕಾರ

ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳಿಗೆ ಆಹಾರ, ವಸತಿ ಸೇರಿದಂತೆ ಎಲ್ಲ ರೀತಿಯ ಉತ್ತಮ ಗುಣಮಟ್ಟದ ಸೌಕರ್ಯಗಳನ್ನು ಒದಗಿಸಲಾಗಿದೆ.

ಸುವರ್ಣಸೌಧಕ್ಕೆ ಕಾಯಂ ಎಲ್‌ಇಡಿ ವಿದ್ಯುತ್ ದೀಪ

ಸುವರ್ಣಸೌಧದ ಸೌಂದರ್ಯೀಕರಣ ಹೆಚ್ಚಿಸಲು ಈ ವೈಭವಯುತ ಕಟ್ಟಡಕ್ಕೆ ಕಾಯಂ ಎಲ್‌ಇಡಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು, ಮುಂದಿನ 10 ವರ್ಷಗಳ ಕಾಲ ನಿರ್ವಹಣೆಗೆ ಕ್ರಮವಹಿಸಲಾಗಿದೆ. ಈ ಮುಂಚೆ ಅಧಿವೇಶನದ ಸಂದರ್ಭದಲ್ಲಿ ಮಾತ್ರ ವಿದ್ಯುತ್‌ದೀಪ ಅಲಂಕಾರ ಮಾಡಲಾಗುತ್ತಿತ್ತು.

ಇನ್ಮುಂದೆ ಅಧಿವೇಶನದ ಜೊತೆಗೆ ಶನಿವಾರ, ಭಾನುವಾರ ಮತ್ತು ರಾಷ್ಟ್ರೀಯ ಹಬ್ಬಗಳ ದಿನಗಳಂದು ವಿದ್ಯುತ್‌ ದೀಪಗಳ ಅಲಂಕಾರ ಮಾಡುವ ಮುಖಾಂತರ ವಿದ್ಯಾರ್ಥಿಗಳು, ಪ್ರವಾಸಿಗರನ್ನು ಆಕರ್ಷಿಸಲಾಗುವುದು ಎಂದರು.

ಕಲಾಪಗಳ ವೀಕ್ಷಣೆ ವಿದ್ಯಾರ್ಥಿಗಳ ಅವಧಿ ಹೆಚ್ಚಳ

 ಈ ಹಿಂದೆ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ವೀಕ್ಷಣೆಗೆ ವಿದ್ಯಾರ್ಥಿಗಳಿಗೆ ಕೇವಲ 10 ನಿಮಿಷಗಳ ಅವಧಿ ನೀಡಲಾಗಿತ್ತು. ಈ ಬಾರಿ ಈ ಅವಧಿಯನ್ನು 20ರಿಂದ 30 ನಿಮಿಷಗಳಿಗೆ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕಲಾಪಗಳ ವೀಕ್ಷಣೆಗೆ ಆಗಮಿಸುವ ವೀಕ್ಷಕರಿಗೆ ಕಲಾಪಗಳ ವೀಕ್ಷಣೆಗೂ ಮುನ್ನ ಆಡಿಟೋರಿಯಂನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ವ್ಯವಸ್ಥೆ ಕುರಿತು ತಿಳಿಸಿಕೊಡಲಾಗುವುದು ಮತ್ತು ಸಾಕ್ಷ್ಯ ಚಿತ್ರದ ಮೂಲಕ ಅವರಿಗೆ ಅರಿವು ಮೂಡಿಸಲಾಗುವುದು. ಈ ಸಂದರ್ಭದಲ್ಲಿ ಮಕ್ಕಳಿಗೆ ತಂಪುಪಾನೀಯ ಮತ್ತು ಚಾಕ್‌ಲೇಟ್‌ಗಳನ್ನು ನೀಡಿ ಜನತಂತ್ರ ವ್ಯವಸ್ಥೆಯ ಬಗ್ಗೆ ಮಕ್ಕಳಲ್ಲಿ ಪ್ರೀತಿ ಹೆಚ್ಚಿಸಲಾಗುವುದು ಎಂದರು.

ಬೇಗ ಬರುವ ಶಾಸಕರಿಗೆ ಟೀ ಕಪ್ ಮತ್ತು ಸಾಸರ್‌ ಗಿಫ್ಟ್!

 ವಿಧಾನಸಭಾ ಕಲಾಪಕ್ಕೆ ಅಗತ್ಯವಿರುವ ಕೋರಂ ಹಾಜರಾತಿಯನ್ನು ನಿಗದಿತ ಸಮಯದೊಳಗೆ ಸೇರುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೊದಲು ಬರುವ 25 ಶಾಸಕರಿಗೆ ಅವರು ಬೇಗ ಬಂದ ದಿನಗಳ ಹಾಜರಾತಿ ಆಧರಿಸಿ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರದ ಲಾಂಛನಗಳಿರುವ ಟೀ ಕಪ್ ಮತ್ತು ಸಾಸರ್‌ಗಳನ್ನು ನೀಡಲಾಗುವುದು.

ವಿದ್ಯುತ್‌ದೀಪ ಅಲಂಕಾರ

ಈ ಬಾರಿಯ ಚಳಿಗಾಲದ ಅಧಿವೇಶನಕ್ಕೆ ಇದುವರೆಗೆ 2512 ಪ್ರಶ್ನೆಗಳು ಮತ್ತು ಗಮನಸೆಳೆಯುವ ಸೂಚನೆಗಳು ಸ್ವೀಕೃತವಾಗಿವೆ. 3 ಸುಗ್ರೀವಾಜ್ಞೆಗಳು ಮಸೂದೆ ರೂಪದಲ್ಲಿ ಮಂಡನೆಯಾಗಲಿವೆ. ಕಲಾಪ ಸಲಹಾ ಸಮಿತಿ ಸಭೆಯ ಮುಂದೆ ಹೆಚ್ಚಿನ ಮಸೂದೆಗಳು ಬರುವ ನಿರೀಕ್ಷೆ ಇದೆ ಎಂದು ಸಭಾಧ್ಯಕ್ಷ ಖಾದರ್ ಅವರು ಹೇಳಿದರು.

ಸಾಂಸ್ಕೃತಿಕ ಕಲೆಗಳ ಪ್ರದರ್ಶನ

 ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾಗಿ 50 ವರ್ಷಗಳಾಗಿರುವ ಈ ಸುವರ್ಣ ಸಂಭ್ರಮದ ಆಚರಣೆಯ ಭಾಗವಾಗಿ ಸುವರ್ಣಸೌಧದ ವೈಭವೋಪೇತ ಮೆಟ್ಟಿಲುಗಳ ಮುಂಭಾಗದಲ್ಲಿ ಈ ಬಾರಿ ಪ್ರತಿದಿನ ಬೆಳಗ್ಗೆ 9ರಿಂದ 11 ರವರೆಗೆ ವಿದ್ಯಾರ್ಥಿಗಳಿಂದ ರಾಜ್ಯದ ವಿವಿಧಭಾಗಗಳ ಸಾಂಸ್ಕೃತಿಕ ಕಲೆಗಳ ಬಿಂಬಿಸುವ ಪ್ರದರ್ಶನ ನಡೆಯಲಿದೆ.

 ಡಿ.12ರಂದು ಆಳ್ವಾಸ್ ಸಂಸ್ಥೆಯ ಕಲಾತಂಡಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಲೆಗಳ ಅನಾವರಣಗೊಳ್ಳಲಿವೆ ಎಂದು ಸಭಾಧ್ಯಕ್ಷರು ಮಾಹಿತಿ ನೀಡಿದರು.

ಮಾಧ್ಯಮ ಕೇಂದ್ರಕ್ಕೆ ಭೇಟಿ

 ಸುವರ್ಣಸೌಧದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕೇಂದ್ರಕ್ಕೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾನುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಧ್ಯಮ ಕೇಂದ್ರದಲ್ಲಿ ಅಳವಡಿಸಲಾಗಿರುವ ಕಂಪ್ಯೂಟರ್, ಇಂಟರ್‌ನೆಟ್ ವ್ಯವಸ್ಥೆ, ನೇರ ಪ್ರಸಾರ ವೀಕ್ಷಣೆಗೆ ಕಲ್ಪಿಸಲಾಗಿರುವ ವ್ಯವಸ್ಥೆ ಸೇರಿ ಇನ್ನೀತರ ಸೌಕರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯುತ್‌ದೀಪ ಅಲಂಕಾರ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
debateHigh prioritylegislative assemblyNorth KarnatakaPreparations completeSpeakerUT Khaderwinter session
3 FacebookTwitterPinterestEmail
KM Shivaraju

previous post
3 ರಾಜ್ಯದಲ್ಲಿ ಕಾಂಗ್ರೆಸ್ ಗರ್ವಭಂಗ
next post
ಪರಿಷತ್‌ನಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆಚರ್ಚೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ