42
ವಿಮಾನ ನಿಲ್ದಾಣದಿಂದ ಬೃಹತ್ ರೋಡ್ ಶೋ
ಬೆಳಗಾವಿ:ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ವಿಜಯೇಂದ್ರ ಅವರನ್ನು ವಿಮಾನ ನಿಲ್ದಾಣದಿಂದ ಬೃಹತ್ ರೋಡ್ ಶೋ ಕರೆ ತರಲಾಯಿತು.
ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಯಿಂದ ಪಕ್ಷದ ಕಾರ್ಯಕರ್ತರಲ್ಲಿ ವಿಶ್ವಾಸ ಹಾಗೂ ಉತ್ಸಾಹ ಇಮ್ಮಡಿಸಿರುವುದು ಕಂಡುಬಂದಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಪ್ರಚಂಡ ವಿಜಯ ಸಾಧಿಸುವ ಹುಮ್ಮಸ್ಸು ಕಾರ್ಯಕರ್ತರಲ್ಲಿ ಎದ್ದುಕಾಣುತ್ತಿತ್ತು.