126
ಬೆಂಗಳೂರು: ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ನಿಮಿತ್ತ ಪುಣ್ಯಸ್ಮರಣೆ ಕಾರ್ಯಕ್ರಮಮವನ್ನು ಸರಳವಾಗಿ ಆಚರಿಸಲಾಯಿತು.
ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್ ಗೌಡ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಾರ್ಪಣೆ ಮಾಡಿದರು.
ಬೆಂಗಳೂರು ನಗರ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ವೈ ತಿಮ್ಮಯ್ಯ, ಬೆಂಗಳೂರು ನಗರ ಎಂ. ನಾಗರಾಜ, ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎ.ಎಸ್. ಗೋವಿಂದೇಗೌಡ, ಪದಾಧಿಕಾರಿಗಳಾದ ಪಿ ಮುನಿರಾಜು, ಎನ್.ಎ. ಷಣ್ಮುಗಂ, ಬಿ.ವಿ.ವೆಂಕಟೇಶ್, ಸ್ನೇಹ, ಶ್ರೀಪ್ರಿಯ, ಮುನಿ ವೆಂಕಟಪ್ಪ ಮುಂತಾದವರು ಭಾಗವಹಿಸಿದ್ದರು.
