Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ರೈತರಿಗೆ ಮೊದಲ ಬರ ಪರಿಹಾರ

by KM Shivaraju December 6, 2023
written by KM Shivaraju December 6, 2023 0 comments 2 minutes read
0FacebookTwitterPinterestEmail
87
ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ  ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. 

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು. ನಿಗದಿತವಾಗಿ ತಮಗೆ ನಿಗಧಿ ಆಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಧಿಕಾರಿಗಳುಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ

ಸರ್ಕಾರ ಸಮರ್ಪಕವಾಗಿ ನಡೆಯಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು- ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ  ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು ಎಂದು ತಿಳಿಸಿದರು.

ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳ ಹಾಜರಿ ಕಡ್ಡಾಯ

ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು.

 ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಹೆಸರು ಬರುತ್ತದೆ ಎಂದು ತಿಳಿಸಿದರು.

ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ

ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ ಎಂದು ತಿಳಿಸಿದರು.

ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕುರಿತು ಆದ್ಯತೆ ನೀಡಲು ಸಲಹೆ ನೀಡಿದ ಮುಖ್ಯಮಂತ್ರಿಗಳು ಟೆಂಡರ್‌ ಅಂದಾಜು ಸಿದ್ಧಪಡಿಸುವಾಗಲೇ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜನ್ನು ಸಿದ್ಧಪಡಿಸಬೇಕು.

ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ಘರ್ಷಣೆ; ಸದನ ಕೋಲಾಹಲ

ಇದಕ್ಕೆ ಸಂಬಂಧಿಸಿದಂತೆ  ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ  ಕಾರ್ಯದರ್ಶಿ ಎಲ್.ಕೆ. ಅತೀಕ್‌ ತಿಳಿಸಿದರು.

ತೆರಿಗೆ ಸಂಗ್ರಹ ಇನ್ನಷ್ಟು ಚುರುಕಾಗಬೇಕು

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡುವಂತೆ ಸೂಚಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief Ministerdistributefirst droughtinstructsnext weekrelief to farmerstake action
0 FacebookTwitterPinterestEmail
KM Shivaraju

previous post
ಅನುದಾನ ಘರ್ಷಣೆ; ಸದನ ಕೋಲಾಹಲ
next post
ಸ್ಥಳೀಯ ವಿದ್ಯಾರ್ಥಿಗಳಿಗೆ 60 % ಸ್ಥಾನ ಮೀಸಲು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ