Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ನೂತನ ಹೆಲ್ತ್ ಕಾರ್ಡ್ ಗೆ ಚಾಲನೆ

by KM Shivaraju December 6, 2023
written by KM Shivaraju December 6, 2023 0 comments 2 minutes read
3FacebookTwitterPinterestEmail
607
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗೆ  ಹೊಸ ರೂಪ

ಬೆಳಗಾವಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರು ನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನು ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಸಲಾಗಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ಗಳನ್ನು ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌

ನೂತನ ಕಾರ್ಡ್ ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದರು.

ಯೋಜನೆಯ ಮುಖ್ಯಾಂಶಗಳು

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನು  ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

ರಾಜ್ಯದಲ್ಲಿರುವ ಒಟ್ಟು5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ”  ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ 66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ.

ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆ

ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

ಎಪಿಎಲ್ ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಪಿಎಲ್ ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡು ದಾರರು ಶೇ 70 ರಷ್ಟು ಚಿಕಿತ್ಸಾ ವೆಚ್ಚವನ್ನು ಪಾವತಿಸಿದರೆ, ಶೇ 30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು“ಆಯುಷ್ಮಾನ್‌ ಭಾರತ್-“ಪ್ರಧಾನ ಮಂತ್ರಿ ಜನಾರೋಗ್ಯ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ.

1650 ಚಿಕಿತ್ಸಾ ಪ್ಯಾಕೇಜ್‌ಗಳು

ದಸರಾ ಅಂಬಾರಿ ಆನೆ ಅರ್ಜುನನ ಸಾವಿನ ಸಮಗ್ರ ತನಿಖೆ

ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ.

ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ.  ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ.  ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

ಗುರುತಿನ ಚೀಟಿಗಳನ್ನು ಉಚಿತ

ಎಲ್ಲಾ ತಾಂಡಾ-ಗೊಲ್ಲರಹಟ್ಟಿ ಕಂದಾಯ ಗ್ರಾಮ

ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌

ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Ayushman BharatBelagavidineshgunduraoHealth CardHealth KarnatakaLaunchnew health cardNew lookSiddaramaiah
3 FacebookTwitterPinterestEmail
KM Shivaraju

previous post
ಎಲ್ಲಾ ತಾಂಡಾ-ಗೊಲ್ಲರಹಟ್ಟಿ ಕಂದಾಯ ಗ್ರಾಮ
next post
ಸ್ವ-ಸಹಾಯ ಗುಂಪು ರಚನೆಗೆ  ಆಹ್ವಾನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ