41
ಸುವರ್ಣ ವಿಧಾನಸೌಧದ ಮುಂಭಾಗವಿರುವ ಪ್ರತಿಮೆ
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ನಿಮಿತ್ತ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾಪೂರ್ಯಾ ನಾಯಕ್, ಶಾಸಕರಾದ ಸಮೃದ್ಧಿ ಮಂಜುನಾಥ್, ಎ.ಮಂಜು, ಸ್ವರೂಪ್ ಪ್ರಕಾಶ್, ಮಂಜುನಾಥ ಹಾಗೂ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಮುಂತಾದವರು ಉಪಸ್ಥಿತರಿದ್ದರು.
