Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ರಾಜ್ಯದ ಹೊಸ ವಿವಿಗಳಿಗೆ ಮೂಲ ಸೌಕರ್ಯ

by KM Shivaraju December 7, 2023
written by KM Shivaraju December 7, 2023 0 comments 2 minutes read
4FacebookTwitterPinterestEmail
112
 ಸಚಿವ ಡಾ:ಎಂ.ಸಿ .ಸುಧಾಕರ್ ಹೇಳಿಕೆ

ಬೆಳಗಾವಿ: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ, ಬೀದರ್, ಕೊಪ್ಪಳ, ಹಾವೇರಿ,ಕೊಡಗು ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಉನ್ನತ ಶಿಕ್ಷಣ ಡಾ: ಎಂ.ಸಿ. ಸುಧಾಕರ್ ತಿಳಿಸಿದರು.

ವಿಧಾನಪರಿಷತ್‌ನಲ್ಲಿ  ಸದಸ್ಯ  ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರ, ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೊಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ವಿಶ್ವವಿದ್ಯಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು.

ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಭಾಗಶಃ ಪ್ರಯತ್ನ

7 ಕೋಟಿ ರೂ. ಬಿಡುಗಡೆ

  2022-23ನೆ ಸಾಲಿನ ಆಯವ್ಯಯ ಘೋಷಣೆಯನ್ವಯ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೆ ಕಾರ್ಯನಿರ್ವಹಿಸಲಿರುವ ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ ಪ್ರಸ್ತಾಪ ಮಾಡಲಾಗಿದೆ. ನೂತನ ವಿವಿಗಳಿಗೆ ಹಂಚಿಕೆಯಾದ ವಾರ್ಷಿಕ 2 ಕೋಟಿ ರೂ. ಆವರ್ತಕ ವೆಚ್ಚದಲ್ಲಿ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ ಸೃಜಿಸಲಾದ ವಿವಿಗಳಿಗೆ ವೇತನ ಪಾವತಿಗಾಗಿ ತಲಾ ರೂ 1 ಕೋಟಿ ರೂ.ಗಳಂತೆ 7 ಕೋಟಿ ರೂ.ಗಳನ್ನು ಪುನರ್ವಿನಿಯೋಗದ ಮೂಲಕ ಬಿಡುಗಡೆಗೊಳಿಸಿ ಆದೇಶಿಸಿದೆ.

  ಪ್ರಸ್ತಾಪಿತ ನೂತನ ವಿವಿಗಳಿಗೆ ಮಾತೃ ವಿವಿಗಳಿಂದ ವರ್ಗಾವಣೆ ಮಾಡಿರುವ ಬೋಧಕ-ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 58 ರನ್ವಯ ಕ್ರಮವಹಿಸುವ ಕುರಿತು ಅವಕಾಶವನ್ನು ಕಲ್ಪಿಸಲಾಗಿದೆ. ಅದರನ್ವಯ ಸರ್ಕಾರದ ಹಂತದಲ್ಲಿ ನೂತನ ವಿವಿಗಳಿಗೆ ಪ್ರಸ್ತಾಪಿತ ಬೋಧಕ-ಬೋಧಕೇತರ ಸೇವಾ ಭದ್ರತೆಗೆ ಸಂಬಂಧಿಸಿದಂತೆ ನಿರ್ದೇಶನ ನೀಡಲು ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.

 ಈ ಹೊಸ ವಿವಿಗಳ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸ್ಪಷ್ಟ ನಿಲುವು ಪ್ರಕಟಿಸಲಾಗುವುದು ಎಂದರು.

ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ

ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೊಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಮಾದರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದು. ಅಲ್ಲಿನ ಸಮುದಾಯಕ್ಕೆ ಅವಕಾಶವನ್ನು ಸ್ಥಳೀಯವಾಗಿ ಕಲ್ಪಿಸಿ, ಯುವ ಜನಾಂಗವನ್ನು ದೇಶದ ಫಲಪ್ರದವಾಗಿ ಬೆಳೆಸಲು ಸಹಯೋಗ ನೀಡುವ ನಿಟ್ಟಿನಲ್ಲಿ ಈ ಹೊಸ ವಿವಿಗಳನ್ನು ಸ್ಥಾಪಿಸಲಾಗಿದೆ.

ಹೀಗೆ ಸ್ಥಾಪಿತವಾಗಿರುವ ವಿವಿಗಳಲ್ಲಿ ಸಂಯೋಜಿತ ಕಾಲೇಜುಗಳ ಸಂಖ್ಯೆಯು ಹಳೆಯ ವಿವಿಗಳ ರೀತಿಯಲ್ಲಿ ಇಲ್ಲದೇ ಇರುವುದು, ಸ್ವಂತ ಕಟ್ಟಡ ಇಲ್ಲದೇ ಇರುವುದು ಹಾಗೂ ಖಾಯಂ ಸ್ವರೂಪದ ಬೋಧಕ-ಬೋಧಕೇತರ ಸಿಬ್ಬಂದಿ, ಆರ್ಥಿಕ ಮುಗ್ಗಟ್ಟು ಮತ್ತು ಸರ್ಕಾರದ ಅನುದಾನ  ಇಲ್ಲದೇ ಇರುವುದು ಮುಂತಾದ ಹಲವಾರು ಸಮಸ್ಯೆಗಳಿಂದ ನೂತನ ವಿವಿಗಳು ಸೊರಗಿವೆ.

2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಆಗ್ರಹ

ಹಲವು ವಿವಿಗಳು ಸ್ನಾತಕೋತ್ತರ ಕೇಂದ್ರಗಳ  ಸ್ವರೂಪದಲ್ಲೇ ಕಾರ್ಯನಿರ್ವಹಿಸುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಜನರ ಬೇಡಿಕೆ ಮತ್ತು ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಪ್ರಾದೇಶಿಕ ಅಸಮತೋಲನವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ತೆರೆದಿರುವ ಜಿಲ್ಲಾ ಮಟ್ಟದಲ್ಲಿರುವ ವಿವಿಗಳು ಇನ್ನೂ ಟೇಕಾಫ್ ಆಗಿಲ್ಲ. ಈ ವಿಷಯದ ಕುರಿತಂತೆ ಸದಸ್ಯ  ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರಿಗೆ ಪೂರಕವಾಗಿ ಸದಸ್ಯರಾದ ತಳವಾರ ಸಾಬಣ್ಣ, ರವಿಕುಮಾರ್, ಹನುಮಂತ ನಿರಾಣಿ ಮಾತನಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Dr MC SudhakarfacilitiesInfrastructuralkarnataka stateministernew universitystatement
4 FacebookTwitterPinterestEmail
KM Shivaraju

previous post
ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ
next post
ತಿಂಗಳಲ್ಲಿ ಕೈಗಾರಿಕೆಗೆ ಖಾತೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ