ಕೃಷಿಕರ ಬಗ್ಗೆ ಸರ್ಕಾರಕ್ಕೆ ಕಾಳಜಿಯೇ ಇಲ್ಲ
ಬೆಳಗಾವಿ:ರೈತರಿಗೆ ಬರ ಪರಿಹಾರ ನೀಡಲು ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಕೃಷಿಕರ ಬಗ್ಗೆ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಕಿಡಿ ಕಾರಿದ್ದಾರೆ.
ಸುವರ್ಣ ಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ/ಎಸ್ಟಿಗೆ ಮೀಸಲಿರಿಸಿದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿದ್ದಾರೆ, ಖಜಾನೆಯಲ್ಲಿ ಹಣವೇ ಇಲ್ಲ, ಪೊಳ್ಳು ಭರವಸೆಗಳನ್ನು ಕೊಟ್ಟು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.
ಅಲ್ಪಸಂಖ್ಯಾತರನ್ನು ಓಲೈಸುವುದೇ ಸರ್ಕಾರದ ಪ್ರಥಮ ಆದ್ಯತೆ ಆಗಿದೆ
ರಾಜ್ಯ ಸರ್ಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ, ಅದನ್ನು ಬಿಟ್ಟು ರಾಜಕಾರಣ ಮಾಡುವುದು ಅಲ್ಪಸಂಖ್ಯಾತರನ್ನು ಓಲೈಸುವುದೇ ಅವರ ಪ್ರಥಮ ಆದ್ಯತೆ ಆಗಿದೆ ಎಂದು ಟೀಕಿಸಿದರು.
ಬರಗಾಲ ಎದುರಾದ ನಂತರ 50 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಈ ಸರ್ಕಾರಕ್ಕೆ 136 ಶಾಸಕರ ಬೆಂಬಲವಿದೆ, ಇಷ್ಟು ಜನ ರೈತರು ಆತ್ಮಹತ್ಯೆ ಮಾಡಿಕೊಂಡರೂ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಆರೋಪಿಸಿದರು.