Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಭಾಗಶಃ ಪ್ರಯತ್ನ

by KM Shivaraju December 7, 2023
written by KM Shivaraju December 7, 2023 0 comments 1 minutes read
2FacebookTwitterPinterestEmail
117

ಬೆಳಗಾವಿ: ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಈ ಸಂಬಂಧ ರಚಿಸಲಾಗಿರುವ ಸಮಿತಿಯನ್ನು 10 ದಿನಗಳೊಳಗೆ ಪುರ‍್ರಚಿಸಿ ಆದೇಶಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯರಾದ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ ಈ ಬಗ್ಗೆ ಅಧ್ಯಯನ ನಡೆಸಲು ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಚುನಾವಣೆಯ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ

ಚುನಾವಣೆಯ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ ಮಾಡುವುದಾಗಿ ನೌಕರರಿಗೆ ತಿಳಿಸಿದ್ದು, ಮಾತಿಗೆ ತಕ್ಕಂತೆ ನಡೆಯಬೇಕು ಎಂದು ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಒತ್ತಾಯಿಸಿದರು.

ನೌಕರರು ನಿವೃತ್ತಿಯ ನಂತರ ನಿವೃತ್ತಿ ವೇತನ ಪಡೆಯುವುದು ಅವರಿಗೆ ಸಂವಿಧಾನ ಬದ್ಧವಾಗಿ ನೀಡಿದ ಹಕ್ಕಾಗಿದೆ. ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಜಾರಿಯಿಂದಾಗಿ ಸರ್ಕಾರಿ ನೌಕರಿ ಸಿಕ್ಕರು ನಿವೃತ್ತಿ ವೇಳೆ ಬರೀಗೈಲಿ ಹೋಗುವ ದುಸ್ಥಿತಿ ಬಂದೊದಗಿದೆ.

ನಿವೃತ್ತಿ ನಂತರ ಕುಟುಂಬಗಳು ಕಷ್ಟದ ಜೀವನ ನಡೆಸುವುದು ಯಾವ ನ್ಯಾಯ? ಎಂದು ಸದಸ್ಯರಾದ ಎಸ್.ವಿ.ಸಂಕನೂರ ಅವರು ಪ್ರಶ್ನಿಸಿದರು.

ಇದಕ್ಕೆ ದನಿಗೂಡಿಸಿದ ಸದಸ್ಯರಾದ ಹೇಮಲತಾ ನಾಯಕ ಅವರು, ಸರ್ಕಾರಿ ನೌಕರರಿಂದ ಸೇವೆ ಪಡೆದು ಬಳಿಕ ಕೈಬಿಡುವುದು ಸರಿಯಲ್ಲ. ಹತ್ತಾರು ವರ್ಷ ಸರ್ಕಾರಿ ಸೇವೆ ಮಾಡ, ಜನ ಸೇವೆ ಮಾಡಿದ ಬಳಿಕ ಮನೆಗೆ ಸುಮ್ಮನೆ ಹೋಗುವುದು ಸರಿಯಲ್ಲ. ನೌಕರರಿಗೆ ನಿವೃತ್ತಿ ವೇತನ ನೀಡುವ ಕಾರ್ಯ ಅತ್ಯಗತ್ಯವಾಗಿ ಆಗಬೇಕು ಎಂದು ತಿಳಿಸಿದರು.

ಓಪಿಎಸ್ ಜಾರಿಗೆ ಕಾಲಮಿತಿ ನಿಗದಿಪಡಿಸಬೇಕು. ಈ ಯೋಜನೆಯ ಜಾರಿ ಅನುಷ್ಠಾನ ಹಿನ್ನೆಲೆಯಲ್ಲಿ ಸಮಿತಿಗೆ ನೀಡಿರುವ ಕಾಲಾವಧಿ ಎಷ್ಟು ಎಂಬುದನ್ನು ಹಾಗೂ ಸಮಿತಿಯ ಕಾರ್ಯವ್ಯಾಪ್ತಿ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಂಕನೂರ ಅವರು ಪಟ್ಟುಹಿಡಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೂ ಸಹ ಓಪಿಎಸ್ ಜಾರಿಯಾಗಬೇಕು ಎನ್ನುವ ವಿಷಯವು ಓಪಿಎಸ್ ಜಾರಿ ಸಂಬಂಧ ರಚಿಸಲಾಗಿರುವ ಸಮಿತಿಯ ಕಾರ್ಯವ್ಯಾಪ್ತಿಗೊಳಪಡಬೇಕು ಎಂದು ಸದಸ್ಯರಾದ ಮರಿತಿಬ್ಬೇಗೌಡ ಅವರು ಸಲಹೆ ಮಾಡಿದರು.

ಹೊಸ ಪಿಂಚಣಿ ಯೋಜನೆ ರದ್ಧುಗೊಳಿಸಿ

 ಅನುದಾನಿತ ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಸಹ ನಿವೃತ್ತಿ ವೇತನದಿಂದ ವಂಚಿತರಾಗಬಾರದೆಂಬುದು ನಮ್ಮ ಕಾಳಜಿಯಾಗಿದೆ. ಹೊಸ ಪಿಂಚಣಿ ಯೋಜನೆಯನ್ನು ರದ್ಧುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕು ಎನ್ನುವ ಮನವಿಯನ್ನು ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಮರು ಪರಿಶೀಲಿಸುತ್ತಿದ್ದು, ನೌಕರರ ನಿರೀಕ್ಷೆಯಂತೆ ಯೋಜನೆಯ ಜಾರಿಗೆ ಭಾಗಶಃ ಪ್ರಯತ್ನವಾಗಿದೆ ಎಂದು ಕೃಷ್ಣ ಭೈರೇಗೌಡ ಅವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
implementKrishna BhyregowdaOld Pension Schemepartial attempt
2 FacebookTwitterPinterestEmail
KM Shivaraju

previous post
ಕುಡಿವ ನೀರಿಗೆ ಜಿಪಂಗೆ ಪ್ರತ್ಯೇಕ ಅನುದಾನ
next post
ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ