Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ

by KM Shivaraju December 7, 2023
written by KM Shivaraju December 7, 2023 0 comments 1 minutes read
0FacebookTwitterPinterestEmail
101
 ಪ್ರೌಢಶಾಲಾ ಸಹ ಶಿಕ್ಷಕರಿಗೆ ತಾರತಮ್ಯ ನಿವಾರಣೆಗೆ ಕ್ರಮ

ಬೆಳಗಾವಿ: ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ  ಚಳಿಗಾಲದ ಅಧಿವೇಶನ ಮುಗಿಯುವುದರೊಳಗೆ ವಿಶೇಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

ವಿಧಾನಪರಿಷತ್‌ನಲ್ಲಿ  ಸದಸ್ಯ  ಮರಿತಿಬ್ಬೇಗೌಡ ಅವರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಶಿಕ್ಷಕರಿಗೆ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ನೀಡುವಲ್ಲಿ ಒಂದು ನಿಯಮ, ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಬಡ್ತಿ ನೀಡುವಲ್ಲಿ ಮತ್ತೊಂದು ನಿಯಮ ರೂಪಿಸಿ ತಾರತಮ್ಯ ಉಂಟು ಮಾಡಿರುವ ಗಂಭೀರ ಸಮಸ್ಯೆ ಕುರಿತ ಗಮನ ಸೆಳಯುವ ಸೂಚನೆಗೆ  ಅವರು ಉತ್ತರಿಸಿದರು.

 ಪ್ರಸ್ತುತ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಸಹ ಶಿಕ್ಷಕರಾಗಿ 10 ವರ್ಷಗಳ ಅರ್ಹತಾದಾಯಕ ಸೇವೆಯನ್ನು ಪೂರೈಸಿರಬೇಕು. ಒಂದು ವೇಳೆ 10 ವರ್ಷ ಪೂರೈಸಿರುವವರು ಲಭ್ಯವಿಲ್ಲದಿದ್ದಲ್ಲಿ 7 ವರ್ಷ  ಸೇವೆ ಪೂರೈಸಿರುವವರನ್ನು ಬಡ್ತಿಗೆ ಪರಿಗಣಿಸಲಾಗುವುದು ಎಂದು ಅವರು ಹೇಳಿದರು.

ಅನುಪಾತ ಹಂಚಿಕೆ ಮಾಡಿ ಬಡ್ತಿ

ಪ್ರಸ್ತುತ ಚಾಲ್ತಿಯಲ್ಲಿರುವ 2014 ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಉಪನ್ಯಾಸಕ ವೃಂದದಲ್ಲಿ ನೇರ ನೇಮಕಾತಿಗೆ ಶೇ.74 ಮತ್ತು ಶೇ.1 ರಷ್ಟು ಸೇವಾ ನಿರತ ಸಿ ಗುಂಪಿನ ನೌಕರರಿಗೆ ಹಾಗೂ ಶೆ.25 ರಷ್ಟು ಸೇವಾ ನಿರತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಅರ್ಹತಾದಾಯಕ ಪರೀಕ್ಷೆ ಉತ್ತೀರ್ಣರಾಗುವ ಷರತ್ತಿನಂತೆ ಅನುಪಾತವನ್ನು ಹಂಚಿಕೆ ಮಾಡಿ ಬಡ್ತಿ ಕಲ್ಪಿಸಲಾಗಿದೆ ಎಂದರು.

   2014 ರ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಅರ್ಹತಾದಾಯಕ ಪರೀಕ್ಷೆ ಉತೀರ್ಣರಾಗಬೇಕು ಎಂಬ  ಷರತ್ತುಗಳ ಕಾರಣ ಕಳೆದ 9 ವರ್ಷಗಳಿಂದ  ಯಾವುದೇ ಪ್ರೌಢಶಾಲಾ ಸಹ ಶಿಕ್ಷಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಸಾಧ್ಯವಾಗಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವಾಗ ಶೇ.50ರಷ್ಟು ನೇರ ನೇಮಕಾತಿ ಮತ್ತು ಶೇ.50ರಷ್ಟು ಸೇವಾ ನಿರತರಿಗೆ ನಿಗಧಿಪಡಿಸಿದ್ದು, ಯಾವುದೇ  ಅರ್ಹತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ.

ಒಂದೇ ಇಲಾಖೆಯಲ್ಲಿ  ಬಡ್ತಿಗಾಗಿ ಈ ರೀತಿಯಾಗಿ ತಾರತಮ್ಯ ಇರುವುದನ್ನು ಸರಿಪಡಿಸುವಂತೆ ಶಾಸಕ ಮರಿತಿಬ್ಬೇಗೌಡ ಅವರಿಗೆ ಪೂರಕವಾಗಿ ಸದಸ್ಯರಾದ ನಾರಾಯಣ ಸ್ವಾಮಿ, ಶಶೀಲ್ ನಮೋಶಿ, ಭೋಜೇಗೌಡ, ಸಂಕನೂರ್ ಹಾಗೂ ತೇಜಸ್ವಿನಿ ಗೌಡ ಮಾತನಾಡಿದರು.

ಈ ಸಮಸ್ಯೆಯ ಕುರಿತಂತೆ ಶಿಕ್ಷಕರೂ ಕೂಡಾ ತಮ್ಮ ಗಮನಕ್ಕೆ ತಂದಿದ್ದು, ಈ ಬಗ್ಗೆ ಪ್ರಸಕ್ತ ಅಧಿವೇಶನ ಮುಗಿಯುವ ಒಳಗೆ, ಅಗತ್ಯ ಬದಲಾವಣೆಗಳ ಬಗ್ಗೆ ವಿಶೇಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Actionagainstdiscriminationhigh schoolMadhubangarappapostPromotionPU lecturerremoveteachers
0 FacebookTwitterPinterestEmail
KM Shivaraju

previous post
ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಭಾಗಶಃ ಪ್ರಯತ್ನ
next post
ರಾಜ್ಯದ ಹೊಸ ವಿವಿಗಳಿಗೆ ಮೂಲ ಸೌಕರ್ಯ

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ