Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಷಡ್ಯಂತ್ರಕ್ಕೆ ಜೆಡಿಎಸ್ ಕಡಿವಾಣ ಯತ್ನ

by KM Shivaraju December 8, 2023
written by KM Shivaraju December 8, 2023 0 comments 2 minutes read
2FacebookTwitterPinterestEmail
176
ನಾಳೆ ತುರ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಪಕ್ಷ ವಿಭಜಿಸಲು ಹೊರಟಿರುವ ಕಾಂಗ್ರೆಸ್ ಷಡ್ಯಂತ್ರಕ್ಕೆ ಕಡಿವಾಣ ಹಾಕಲು ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ನಾಳೆ ತುರ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದಾರೆ.

ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವುದು ಜೆಡಿಎಸ್‌ನಲ್ಲಿ ಒಂದು ವರ್ಗಕ್ಕೆ ಅಸಮಾಧಾನವಿದೆ, ಇದರ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.

ಲಾಭ ಪಡೆಯಲು ಕಾಂಗ್ರೆಸ್ ತಂತ್ರ

ವಿಧಾನಸಭೆಯಲ್ಲಿ ಜೆಡಿಎಲ್‌ಪಿಯನ್ನೇ ವಿಭಜಿಸಿ ಒಂದಷ್ಟು ಶಾಸಕರನ್ನು ಪ್ರತ್ಯೇಕವಾಗಿ ಕೂರಿಸಿ ಲಾಭ ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸಿತ್ತು.

ಪ್ರತ್ಯೇಕವಾಗಿ ಶಾಸಕರು ಕುಳಿತುಕೊಳ್ಳುವುದರಿಂದ ಅವರ ಸದಸ್ಯತ್ವಕ್ಕೆ ಕುಂದು ಬರುವುದಿಲ್ಲ, ಉಪಚುನಾವಣೆ ಎದುರಿಸುವ ಪ್ರಮೇಯವೂ ಎದುರಾಗುವುದಿಲ್ಲ, ಆ ಗುಂಪು ಸ್ವತಂತ್ರವಾಗಿ ಇರುವುದರಿಂದ ಆಡಳಿತ ಕಾಲದಲ್ಲಿ ಸಮಸ್ಯೆ ಎದುರಾದಾಗ ಕಾಂಗ್ರೆಸ್ ಬೆಂಬಲಿಸಬಹುದು.

ಸಮಯ ನೊಡಿ ಅವರನ್ನು ಹೊರತರುತ್ತೇವೆ

ಈ ಕಾರಣದಿಂದ ಕಾಂಗ್ರೆಸ್ ದೊಡ್ಡ ಷಡ್ಯಂತ್ರವನ್ನೇ ನಡೆಸಿತ್ತು, ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಇದೇ ಉದ್ದೇಶದಿಂದ ಜೆಡಿಎಸ್‌ನ ಮೂರನೇ ಎರಡು ಭಾಗದಷ್ಟು ಸದಸ್ಯರು ಹೊರ ಬರಲು ಸಿದ್ಧರಿದ್ದಾರೆ, ಸಮಯ ನೊಡಿ ಅವರನ್ನು ಹೊರತರುತ್ತೇವೆ ಎಂದಿದ್ದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಗೊಂಡು, ಅಮಾನತುಗೊಂಡಿರುವ ಸಿ.ಎಂ. ಇಬ್ರಾಹಿಂ ಹಾಗೂ ಕೇರಳ ಘಟಕದ ಕೆಲವರನ್ನು ಮುಂದಿಟ್ಟುಕೊಂಡು ಈ ಸಂಚು ರೂಪಿಸಿತ್ತು.

ಪ್ರತಿಪಕ್ಷಗಳ ಸಂಖ್ಯಾಬಲ ಮತ್ತಷ್ಟು ಕುಗ್ಗಿಸುವುದು

ಪಕ್ಷ ವಿಭಜಿಸಿ ಜೆಡಿಎಸ್‌ನ 19 ಶಾಸಕರಲ್ಲಿ ಕೆಲವರನ್ನು ಸೆಳೆದು ಅವರನ್ನು ವಿಧಾನಸಭೆಯಲ್ಲಿ ಪ್ರತ್ಯೇಕ ಗುಂಪಾಗಿ ಕೂರಿಸಿ ಅವರ ಬೆಂಬಲ ಪಡೆದು ತಮ್ಮ ಬಲ ಹೆಚ್ಚಿಸಿಕೊಳ್ಳುವುದು ಹಾಗೂ ಪ್ರತಿಪಕ್ಷಗಳ ಸಂಖ್ಯಾಬಲವನ್ನು ಮತ್ತಷ್ಟು ಕುಗ್ಗಿಸುವುದು ಕಾಂಗ್ರೆಸ್ ಮುಖಂಡರ ಉದ್ದೇಶವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೆಡಿಎಸ್ ಶಾಸಕರನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದರೆ, ಕೆಪಿಸಿಸಿ ಅಧ್ಯಕ್ಷರಂತೂ ಒಂದು ಹೆಜ್ಜೆ ಮುಂದೆ ಹೋಗಿ ಕೆಲವು ಶಾಸಕರನ್ನು ನೇರವಾಗಿ ಅವರ ಮನೆಗೇ ಭೇಟಿ ನೀಡಿ ಆಹ್ವಾನಿಸಿದ್ದಾರೆ.

ಜೆಡಿಎಸ್‌ನ 19 ವಿಧಾನಸಭಾ ಶಾಸಕರಲ್ಲಿ ಮೈತ್ರಿ ವಿರೋಧಿಸಿ ಈಗಾಗಲೇ ಗುರುಮಿಟ್ಕಲ್‌ನ ಶರಣಗೌಡ ಕಂದಕೂರ್ ದೂರ ಉಳಿದಿದ್ದಾರೆ.
ಇದರ ಸುಳಿವು ಅರಿತ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಪಕ್ಷ ನಿಯಮಾವಳಿ ಪ್ರಕಾರ ನಾಳೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಕರೆದಿದ್ದಾರೆ.

ಸಭೆಗೆ 21 ಮಂದಿ ಪ್ರಮುಖ ಪದಾಧಿಕಾರಿಗಳು

ಸಭೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಶಿವಕುಮಾರ್, ಮೊಹಮ್ಮದ್ ಜಫರುಲ್ಲಾ ಖಾನ್, ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷ ಪುನೀತ್ ಕುಮಾರ್ ಸಿಂಗ್, ಹರಿಯಾಣ ಘಟಕದ ಜೋರಾ ಸಿಂಗ್, ಪಂಜಾಬ್ ಘಟಕದ ಅವತಾರ್ ಸಿಂಗ್, ಅಲ್ಲಿಯವರೇ ಆದ ಅಶೋಕ್ ಕುಮಾರ್, ಜಮ್ಮು-ಕಾಶ್ಮೀರದ ರಾಮ್ ರತನ್ ಶರ್ಮ, ಉತ್ತರಾಖಂಡ್‌ನಿಂದ ಸುರೇಶ್‌ದಾಸ್, ಮಹಾರಾಷ್ಟ್ರದ ಮಹಮ್ಮದ್ ಅಜ್ಮಲ್ ಖಾನ್, ಎನ್.ಎಚ್. ಕಠಾರಿಯಾ, ಎನ್.ಎಚ್. ಶೆವಾಲೆ ಸೇರಿದಂತೆ ದೆಹಲಿ, ತಮಿಳುನಾಡು, ಬಿಹಾರ್, ಗುಜರಾತ್, ಉತ್ತರ ಪ್ರದೇಶದ 21 ಮಂದಿ ಪ್ರಮುಖ ಪದಾಧಿಕಾರಿಗಳು ಆಗಮಿಸಲಿದ್ದಾರೆ.

ಇವರಲ್ಲದೆ, ಪಕ್ಷದ ವತಿಯಿಂದ ರಾಜ್ಯ ವಿಧಾನಸಭೆ, ಪರಿಷತ್ತಿನ ಮಾಜಿ ಸದಸ್ಯರುಗಳು ಮತ್ತು ಮುಖಂಡರಿಗೂ ಆಹ್ವಾನ ನೀಡಲಾಗಿದೆ.
ನಾಳಿನ ಸಭೆಯಲ್ಲಿ ಎನ್‌ಡಿಎ ಮೈತ್ರಿ ಕೂಟದ ನಂತರ ಪಕ್ಷ ಸಂಘಟನೆ ಕುರಿತು ಚರ್ಚೆ, ಐದು ರಾಜ್ಯಗಳ ವಿಧಾನಸಭಾ ಫಲಿತಾಂಶದ ಅವಲೋಕನ, ಅಲ್ಪಸಂಖ್ಯಾತರು ಪಕ್ಷದಿಂದ ದೂರವಾದ ನಂತರ ಮುಂದಿನ ನಡೆ ಹೇಗಿರಬೇಕು ಎಂಬ ಬಗ್ಗೆ ಚರ್ಚೆ ಆಗಲಿದೆ.

ರಾಷ್ಟ್ರೀಯ ಕಾಂಗ್ರೆಸ್‌ನ ಹುನ್ನಾರ ತಪ್ಪಿಸಲು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸುವುದಲ್ಲದೆ, ಪಕ್ಷ ವಿಭಜನೆಗೆ ಮುಂದಾಗಿರುವ ಅಮಾನತುಗೊಂಡ ಸಿ.ಎಂ. ಇಬ್ರಾಹಿಂ ಮತ್ತು ಕೇರಳ ಘಟಕದ ಕೆಲವು ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಟಿಸುವ ನಿರ್ಣಯ ಕೈಗೊಳ್ಳಲಿದ್ದಾರೆಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಖಾಯಂ

ಇದೇ ಸಂದರ್ಭದಲ್ಲಿ ಜೆಡಿಎಸ್‌ನ ಹಂಗಾಮಿ ರಾಜ್ಯಾಧ್ಯಕ್ಷರಾಗಿರುವ ಕುಮಾರಸ್ವಾಮಿ ಅವರನ್ನು ಅದೇ ಸ್ಥಾನದಲ್ಲಿ ಖಾಯಂಗೊಳಿಸುವುದು ಇದರಲ್ಲಿ ಸೇರಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruemergency meetinghd devegowdaindiajdskarnatakakmskumar swamynewspolitics
2 FacebookTwitterPinterestEmail
KM Shivaraju

previous post
ಮನೆ ನಿರ್ಮಾಣ ಸಾಲ; ಎರಡು ತಿಂಗಳಲ್ಲಿ ಸಮಸ್ಯೆ ನಿವಾರಣೆ
next post
ಬಹುಭಾಷಾ ನಟಿ ಲೀಲಾವತಿ ಇನ್ನಿಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ