Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದ ಬಳಿಕ ತೆಲಂಗಾಣದಲ್ಲಿ ಉಚಿತ ಬಸ್‌ ಸೇವೆ

by KM Shivaraju December 9, 2023
written by KM Shivaraju December 9, 2023 0 comments 1 minutes read
2FacebookTwitterPinterestEmail
82

ನುಡಿದಂತೆ ನಡೆಯುವ ಕಾಂಗ್ರೆಸ್‌ ಪಕ್ಷ: ಡಿಕೆಶಿ ಸಮರ್ಥನೆ

ಬೆಂಗಳೂರು: ಕರ್ನಾಟಕದ ನಂತರ ತೆಲಂಗಾಣದಲ್ಲಿ ಸರ್ಕಾರದ ಸಾರಿಗೆ ಸಂಸ್ಥೆಗಳ ಬಸ್ಸಿನಲ್ಲಿ ರಾಜ್ಯದೊಳಗೆ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದೆ.

ನಮ್ಮ ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದೆ. ಕರ್ನಾಟಕದಲ್ಲಿ ಮೊದಲು ಗ್ಯಾರಂಟಿಯನ್ನು ಘೋಷಣೆ ಮಾಡಿದ್ದೆವು. ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದೆವು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 110.67 ಕೋಟಿ ಮಹಿಳಾ ಪ್ರಯಾಣಿಕರು

ನಮ್ಮ ಶಕ್ತಿ ಯೋಜನೆಯನ್ನು ಕರ್ನಾಟಕದ ಮಹಿಳೆಯರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದು, ಜೂನ್‌ 11ರಿಂದ ಇಲ್ಲಿಯವರೆಗೆ ಡಿ.8ರವರೆಗೆ  110.67 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ.

 ಈಗ ಇದೇ ರೀತಿಯಾಗಿ ತೆಲಂಗಾಣದಲ್ಲಿ ನಮ್ಮ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಇವತ್ತಿನಿಂದಲೇ ತೆಲಂಗಾಣ ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಇದರಿಂದ ನಮ್ಮದು ನುಡಿದಂತೆ ನಡೆಯುವ ಪಕ್ಷ ಎಂಬುದು ಸಾಬೀತಾದಂತೆ ಆಗಿದೆ ಎಂದು  ಅವರು ಹೇಳಿದ್ದಾರೆ.

ನಮ್ಮ ಕರ್ನಾಟಕದಲ್ಲಿ ಈಗಾಗಲೇ ಶಕ್ತಿ ಯೋಜನೆಯಡಿ 110.67 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಇದರ ಮೌಲ್ಯ 2642.20 ಕೋಟಿ ರೂ. ಆಗಿದೆ. ಈಗ ತೆಲಂಗಾಣದಲ್ಲಿ ಸುಮಾರು ನಾಲ್ಕು ಕೋಟಿ ನಾಗರಿಕರಿದ್ದಾರೆ. ಅಲ್ಲಿಯ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಸೌಕರ್ಯವನ್ನು ಕಲ್ಪಿಸಲಾಗಿದೆ. ಈ ಕಾರಣಕ್ಕಾಗಿ ಅಲ್ಲಿನ ಸಿಎಂ ರೇವಂತ ರೆಡ್ಡಿ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ.

ನಮ್ಮ ಪಕ್ಷದ ಹೈಕಮಾಂಡ್  ನಮ್ಮ ರಾಜ್ಯದ ನಾಯಕರಿಗೆ ತೆಲಂಗಾಣದ ಚುನಾವಣಾ ಉಸ್ತುವಾರಿಯನ್ನು ನೀಡಿತ್ತು. ಕರ್ನಾಟಕದಲ್ಲಿ ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ಐದು ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು. ಅದರ ಮೇಲೆ ವಿಶ್ವಾಸವಿಟ್ಟು ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರು ಎಂದು ಅವರು ತಿಳಿಸಿದರು.

ತೆಲಂಗಾಣದ ಸಮಗ್ರ ಅಭಿವೃದ್ಧಿ

ಹಾಗೆಯೇ ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ಕೆಲ ಗ್ಯಾರಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು. ಅದರಲ್ಲಿ ಮಹಿಳೆಯರಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಭರವಸೆಯೂ ಒಂದಾಗಿತ್ತು ಎಂದು ಹೇಳಿದ್ದಾರೆ.

ನಮ್ಮ ಮಾತಿನ ಮೇಲೆ ವಿಶ್ವಾಸವಿಟ್ಟು ಅಲ್ಲಿನ ಮಹಿಳೆಯರು ಬಹು ದೊಡ್ಡ ಬೆಂಬಲ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಟ್ಟ ಮಾತಿನಂತೆ ತೆಲಂಗಾಣ ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ವನ್ನು ಜಾರಿಗೊಳಿಸಲಾಗಿದೆ.

ಕೊಟ್ಟ ಮಾತಿಗೆ ತಪ್ಪದೇ ನಡೆದುಕೊಂಡಿದ್ದೇವೆ. ತೆಲಂಗಾಣದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Congress partyD.K. ShivakumarDeputy Chief MinisterFemale passengersFree busKarnatakKPCC Presidenttelangana
2 FacebookTwitterPinterestEmail
KM Shivaraju

previous post
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
next post
ಮೂಲವ್ಯಾದಿ(ಪೈಲ್ಸ್) ಗೆ ಮುಟ್ಟಿದರೆ ಮುನಿ ಮದ್ದಂತೆ! 

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ