Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ

by KM Shivaraju December 11, 2023
written by KM Shivaraju December 11, 2023 0 comments 2 minutes read
2FacebookTwitterPinterestEmail
74
ಪಕ್ಷದ ಒಳಜಗಳ, ಕೇಂದ್ರ ಸರ್ಕಾರ ವೈಫಲ್ಯ ಮುಚ್ಚಿಹಾಕಲು ಯತ್ನ  

ಬೆಳಗಾವಿ: ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ  ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ  ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ,  ಜನತೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿಗೆ ಜನತೆ ಛೀಮಾರಿ ಹಾಕುತ್ತಿರುವುದಕ್ಕೆ ಚುನಾಯಿತ ಪ್ರತಿನಿಧಿಗಳ ಇಂತಹ ಬೇಜವಾಬ್ದಾರಿ ನಡವಳಿಕೆಗಳೇ ಕಾರಣ ಎಂದು ಟೀಕಿಸಿದ್ದಾರೆ.

ಜನರ ತೆರಿಗೆ ಹಣದಿಂದ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿ ವರ್ಷಕ್ಕೊಂದು ಬಾರಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿರುವುದರ ಮುಖ್ಯ ಉದ್ದೇಶವೇ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿದೆ. ಇಂತಹ ಚರ್ಚೆಗೆ ಅವಕಾಶವನ್ನೇ ಕೊಡದೆ ಇರುವ  ರಾಜ್ಯದ ಬಿಜೆಪಿ ಶಾಸಕರು ತಾವು ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ರಾಜ್ಯ ಸರ್ಕಾರ ಶಕ್ತಿ ಮೀರಿ ಪರಿಹಾರ ಕಾರ್ಯವನ್ನು ನಡೆಸುತ್ತಿದೆ. ರಾಜ್ಯದ 223 ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಬರಪರಿಹಾರಕ್ಕಾಗಿ. 18,171 ಕೋಟಿ ರೂ. ನೆರವನ್ನು ಕೇಂದ್ರ ಸರ್ಕಾರದಿಂದ ಕೇಳಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ.  ಈ ನಷ್ಟಕ್ಕೆ ಪರಿಹಾರ ನೀಡಲು 4,663 ಕೋಟಿ ರೂ.ಕೇಳಿದ್ದೇವೆ.

 ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು.  ಕೇಂದ್ರದ ತಂಡ ಬಂದು ಸಮೀಕ್ಷೆ ನಡೆಸಿ, ವರದಿಯನ್ನೂ ಕೂಡಾ ನೀಡಿದೆ. ರಾಜ್ಯ ಸರ್ಕಾರದ ಮನವಿಗೆ ಇಲ್ಲಿಯ ವರೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ನಾವು ಬರೆದ ಪತ್ರಗಳಿಗೆ ಪ್ರತಿಕ್ರಿಯೆ ಇಲ್ಲ. ಪ್ರಧಾನಮಂತ್ರಿಯವರನ್ನು ಭೇಟಿ ಮಾಡಲು ಅವಕಾಶ ಕೇಳಿದರೂ ಕೊಟ್ಟಿಲ್ಲ.

 ಡಬಲ್ ಎಂಜಿನ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ತುಪ್ಪದ ಹೊಳೆ ಹರಿಯುತ್ತದೆ ಎಂಬ ಬಿಜೆಪಿ ನಾಯಕರ ಹಸಿ ಸುಳ್ಳುಗಳನ್ನು ನಂಬಿ ಕನ್ನಡಿಗರು 25 ಮಂದಿ ಬಿಜೆಪಿ ಸದಸ್ಯರನ್ನು ಲೋಕಸಭೆಗೆ ಕಳಿಸಿದ್ದರು. ಅವರು ಇಲ್ಲಿಯ ವರೆಗೆ ಲೋಕಸಭೆಯಲ್ಲಿ ತುಟಿ ಬಿಚ್ಚಿಲ್ಲ ಎಂದು ಟೀಕಿಸಿದ್ದಾರೆ.

ವಿಧಾನಮಂಡಲದಲ್ಲಿ ಬರಗಾಲದ ಚರ್ಚೆ ನಡೆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಈ ಅನ್ಯಾಯದ ವಿವರಗಳೆಲ್ಲವೂ ಹೊರ ಬಂದು ರಾಜ್ಯದ ಜನರ ಎದುರು ತಲೆತಗ್ಗಿಸುವಂತಾಗುತ್ತದೆ ಎನ್ನುವ ಕಾರಣಕ್ಕಾಗಿಯೇ ಪಿಳ್ಳೆ ನೆಪಗಳನ್ನು ಮುಂದಿಟ್ಟು ರಾಜ್ಯದ ಬಿಜೆಪಿ ಶಾಸಕರು ಧರಣಿ ನಡೆಸಿ ಕಲಾಪ ನಡೆಯದಂತೆ ತಡೆಯೊಡ್ಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಇದನ್ನೆಲ್ಲ ಗಮನಿಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ್ ಅವರಿಗೆ  ಅವರ ಪಕ್ಷದ ಬಹುಸಂಖ್ಯಾತ ಶಾಸಕರ ಬೆಂಬಲವೇ ಇಲ್ಲ. ಪ್ರತಿದಿನ ಅವರದ್ದೇ ಪಕ್ಷದ ಶಾಸಕರು ಒಬ್ಬೊಬ್ಬರಾಗಿ ಅಶೋಕ್ ಅವರ ಮುಖಕ್ಕೆ ಮಂಗಳಾರತಿ ಎತ್ತುತ್ತಿದ್ದಾರೆ.

ಯಾವ ಕುರ್ಚಿಯೂ ಸಿಕ್ಕಿಲ್ಲ ಎಂಬ ವೇದನೆಯಿಂದ ಕುದಿಯುತ್ತಿರುವ  ಬಸವನಗೌಡ ಪಾಟೀಲ್ ಯತ್ನಾಳ್ ಅವರಂತಹವರು ಬಹಿರಂಗವಾಗಿ ಬಿ.ಎಸ್. ಯಡಿಯೂರಪ್ಪನವರಿಂದ ಹಿಡಿದು ಆರ್ .ಅಶೋಕ್ ವರೆಗೆ ಎಲ್ಲರ ವಿರುದ್ದ ಹರಿಹಾಯುತ್ತಿದ್ದಾರೆ.

ಇದನ್ನೆಲ್ಲ ಗಮನಿಸುತ್ತಿರುವ ರಾಜ್ಯದ ಜನತೆ ಬಿಜೆಪಿ ಶಾಸಕರಿಗೆ ಬೀದಿ ಬೀದಿಯಲ್ಲಿ ಛೀಮಾರಿ ಹಾಕುತ್ತಿದ್ದಾರೆ. ಇದರಿಂದ ಮುಖ ಎತ್ತಿಕೊಂಡು ಹೋಗಲಾಗದ ಬಿಜೆಪಿ ಶಾಸಕರು ರಾಜ್ಯದ ಜನರ ಗಮನ ಬೇರೆ ಕಡೆ ಸೆಳೆಯುವ ಉದ್ದೇಶದಿಂದ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ.

ಮಾತೆತ್ತಿದರೆ ದಮ್ಮು, ತಾಖತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ವಿಧಾನಮಂಡಲದ ಕಲಾಪದಲ್ಲಿ ಭಾಗವಹಿಸುವ ಧೈರ್ಯ ತೋರಬೇಕು. ವಿಧಾನಸಭಾ ಅಧಿವೇಶನವನ್ನು ಕರೆದಿರುವುದೇ ರಾಜ್ಯ ಸರ್ಕಾರದ ಆಡಳಿತದ ವಿಮರ್ಶೆಗೆ. ಸರ್ಕಾರ ತನ್ನ ಕರ್ತವ್ಯದಲ್ಲಿ ಎಡವಿದ್ದರೆ, ತಪ್ಪುಗಳನ್ನು ಮಾಡಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡಬೇಕಾಗಿದೆ. ಆ ದಮ್ಮು ತಾಖತ್ ಬಿಜೆಪಿ ಶಾಸಕರಿಗೆ ಇಲ್ಲ ಎಂದು ಟೀಕಿಸಿದ್ದಾರೆ.

ಸಾಮಾನ್ಯವಾಗಿ ಆಡಳಿತ ಪಕ್ಷಗಳು ವಿರೋಧ ಪಕ್ಷಗಳನ್ನು ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತದೆ. ನಮ್ಮ ರಾಜ್ಯದಲ್ಲಿ ವಿರೋಧಪಕ್ಷಗಳಿಗೆ ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಇಲ್ಲ.

ಪ್ರಧಾನಿ ನರೇಂದ್ರ ಮೋದಿಯವರಂತೆ ನಾವೇನು ವಿರೋಧಪಕ್ಷವನ್ನೇ ನಿರ್ನಾಮ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಒಂದು ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2 FacebookTwitterPinterestEmail
KM Shivaraju

previous post
ಸರ್ಕಾರಿ ಜಾಗಗಳ ರಕ್ಷಣೆಗೆ ಬೀಟ್ ಸಿಸ್ಟಂ
next post
1,281 ಕೋಟಿ ರೂ. ವೆಚ್ಚದಲ್ಲಿ 197 ಕೆರೆಗಳಿಗೆ ನೀರು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ