70
ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ಕ್ರಮ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡುವ ಮೂಲಕ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ.
ಭಾರತದ ಏಕತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುವ ದೂರದೃಷ್ಟಿಯೊಂದಿಗೆ ಕೇಂದ್ರ ಸರ್ಕಾರ ಇಟ್ಟಿರುವ ದಿಟ್ಟ ನಿರ್ಧಾರ ಜಮ್ಮು-ಕಾಶ್ಮೀರದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಹಕಾರಿಯಾಗಿದೆ ಎಂದಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಿರ್ಣಯಕ್ಕೆ ಈ ತೀರ್ಪಿನ ಮೂಲಕ ಸುಪ್ರೀಂ ಕೋರ್ಟ್ ಸಹಮತದ ಮುದ್ರೆ ಒತ್ತಿದೆ.