71
ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ
ಬೆಳಗಾವಿ: ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲಾಗಿಸಿದ ಪ್ರಕರಣ ಖಂಡನೀಯವಾಗಿದ್ದು ಇಂತಹ ಪ್ರಕರಣಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂಟಮೂರಿಯ ಘಟನೆ ಪ್ರತಿಯೊಬ್ಬರೂ ತಲೆತಗ್ಗಿಸುವಂತೆ ಮಾಡಿದೆ, ನಾಗರಿಕ ಸಮಾಜದಲ್ಲಿ ಇಂತಹ ಘಟನೆ ನಡೆದುದು ಖಂಡನಾರ್ಹ, ಇಂತಹ ದುಷ್ಕೃತ್ಯ ಮರುಕಳಿಸದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮಕೈಗೊಳ್ಳುವ ಮೂಲಕ ಗೃಹ ಸಚಿವರು ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡಬೇಕು ಎಂದರು.


