ನಿಯಂತ್ರಣಕ್ಕೆ ಸೂಕ್ತ ಕಾನೂನು: ಡಾ.ಜಿ.ಪರಮೇಶ್ವರ್
ಬೆಳಗಾವಿ: ಯುವಪೀಳಿಗೆಯ ದಾರಿ ತಪ್ಪಿಸುತ್ತಿರುವ ಹುಕ್ಕಾ ಬಾರ್‌ಗೆ ಕಡಿವಾಣ ಹಾಕುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಸಿ.ಕೆ. ರಾಮಮೂರ್ತಿ ಹಾಗೂ ಸುರೇಶ್ ಕುಮಾರ್ ಅವರ ಪ್ರತ್ಯೇಕ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಆರೋಗ್ಯ ಹಾಗೂ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸುವುದಾಗಿ ಹೇಳಿದರು.
ಡ್ರಗ್ಸ್ ಮಾರಾಟ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ
ನಮ್ಮ ಸರ್ಕಾರ ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ನಾವು ಹುಕ್ಕಾ ಬಾರ್ ನಡೆಸಲು ಅವಕಾಶವನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದು ವ್ಯಾಪಾರಿಗಳು ಹುಕ್ಕಾ ಬಾರ್ ನಡೆಸುತ್ತಿದ್ದಾರೆ, ನ್ಯಾಯಾಲಯವೂ ಕೂಡ ಹುಕ್ಕಾ ಸೇದುವವರಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಿ ಎಂದು ಹೇಳಿದೆ.
ಆದರೆ, ವ್ಯಾಪಾರಿಗಳು ಇದನ್ನು ದುರುಪಯೋಗ ಮಾಡಿಕೊಂಡು ಹುಕ್ಕಾ ಬಾರ್ ಹೆಸರಿನಲ್ಲಿ ಮಾದಕ ದಂಧೆ ನಡೆಸುತ್ತಿವೆ, ಇದಕ್ಕೆ ಕಡಿವಾಣ ಹಾಕೇ ಹಾಕುತ್ತೇವೆ ಎಂದರು.


