Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಂಗಳೂರು ರಸ್ತೆಗಳ ವೈಟ್ ಟಾಪಿಂಗ್‌ಗೆ ಆದ್ಯತೆ

by KM Shivaraju December 14, 2023
written by KM Shivaraju December 14, 2023 0 comments 2 minutes read
3FacebookTwitterPinterestEmail
71
ನಗರದ ಜನಸಂಖ್ಯೆಯಷ್ಟೇ ವಾಹನಗಳಿವೆ

ಬೆಳಗಾವಿ:ಬೆಂಗಳೂರಿನ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಅಭಿವೃದ್ಧಿಪಡಿಸಲು ವೈಟ್ ಟಾಪಿಂಗ್‌ಗೆ ಆದ್ಯತೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಣೆ ಹೊತ್ತಿರುವ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್‌ನಲ್ಲಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಹೆಚ್. ಎಸ್.ಗೋಪಿನಾಥ್ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳಿವೆ, ನಗರದ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಇದೆ, ನಗರದಲ್ಲಿ ನಿತ್ಯ ಸರಾಸರಿ 1,300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೊಂದಣಿಯಾಗುತ್ತಿವೆ, ಸಮಸ್ಯೆ ಸುಧಾರಣೆಗೆ ಚರ್ಚಿಸಲು ಸದ್ಯದಲ್ಲೇ ನಗರದ ಶಾಸಕರ ಸಭೆ ಕರೆಯಲಾಗುವುದು ಎಂದರು.

ವಾಹನಗಳ ಒತ್ತಡದಿಂದ ರಸ್ತೆಗಳು ಹಾಳಾಗುತ್ತಿವೆ, ರಸ್ತೆಗುಂಡಿ ಮುಚ್ಚುವುದೇ ದೊಡ್ಡ ಕೆಲಸವಾಗಿದೆ, ಈ ಕಾಮಗಾರಿಯನ್ನು ವಿಕೇಂದ್ರೀಕರಿಸಲಾಗಿದೆ, ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಕಳುಹಿಸುವ ರಸ್ತೆ ಗುಂಡಿಗಳ ಚಿತ್ರಣಗಳನ್ನು ಆಧರಿಸಿ ಪಾಲಿಕೆ ಅಧಿಕಾರಿಗಳು ಗುಂಡಿ ಮುಚ್ಚಿಸುತ್ತಿದ್ದಾರೆ.

ವೈಟ್ ಟಾಪಿಂಗ್‌ಗೆ 1000 ಕೋಟಿ ರೂ. ಅನುದಾನವಿದೆ, ಬೆಂಗಳೂರಿನಲ್ಲಿ ಕೇಬಲ್ ಅಳವಡಿಕೆ ಹಾವಳಿ ಹೆಚ್ಚಾಗಿದೆ, ಇದಕ್ಕಾಗಿ ರಸ್ತೆ ಅಗೆಯಲಾಗುತ್ತಿದೆ, ಈ ಹಿನ್ನೆಲೆಯಲ್ಲಿ ಯೋಜಿತವಾಗಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಸಬೇಕಿದೆ.

ರಸ್ತೆಗಳು 25 ರಿಂದ 40 ವರ್ಷ ಬಾಳಿಕೆ ಬರಬೇಕೆಂಬ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್‌ಗೆ ಆದ್ಯತೆ ನೀಡಲಾಗಿದೆ. ಇದರ ಅಗತ್ಯವಿರುವ ಪ್ರದೇಶಗಳನ್ನು ಗುರುತಿಸಲು ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ಕರೆಯಲಿದ್ದೇವೆ.

ಪಾಲಿಕೆ ಹೆಚ್ಚಿನ ಆದಾಯ ಗಳಿಸುವ ಅಗತ್ಯವಿದೆ, ಇದಕ್ಕಾಗಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿದ್ದೇವೆ, ಪಾಲಿಕೆಗೆ ಆರ್ಥಿಕ ಶಕ್ತಿ ತುಂಬ ಕೆಲಸ ಮಾಡುತ್ತಿದ್ದೇವೆ. ಈ ಬಗ್ಗೆ ಸಲಹೆಗಳಿದ್ದರೆ ನೀಡಿ. ಬೆಂಗಳೂರಿನ ಗೌರವ, ಸ್ವಾಭಿಮಾನ ಉಳಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದರು.

ಅಪರಾಧ ತಡೆಗೆ ಗೃಹ ಇಲಾಖೆ ಸಹಯೋಗದಲ್ಲಿ ಕ್ರಮ

ಭಾರತಿ ಶೆಟ್ಟಿ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಶಿವಕುಮಾರ್, ಸದಸ್ಯೆ ಭಾರತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಬೆಂಗಳೂರಿನ ಬಗ್ಗೆ ಬಹಳ ಆಸಕ್ತಿ ಹೊಂದಿದ್ದಾರೆ, ಸ್ವಚ್ಛತೆ ವಿಚಾರದಲ್ಲಿ ಮಂಗಳೂರು, ಬೆಳಗಾವಿ ಬೆಂಗಳೂರಿಗಿಂತ ಉತ್ತಮವಾಗಿವೆ, ಬೆಂಗಳೂರು ಸಂಪೂರ್ಣ ಯೋಜಿತ ನಗರವಲ್ಲ ಎಂದರು.

ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ಆಗಿದೆ, ಇಷ್ಟು ದೊಡ್ಡ ಜನಸಂಖ್ಯೆಗೆ ಕುಡಿಯುವ ನೀರು ಪೂರೈಕೆ, ಘನತ್ಯಾಜ್ಯ ವಿಲೇವಾರಿ ದೊಡ್ಡ ಸವಾಲಾಗಿದೆ, ಕಸ ತೆಗೆಯುವುದೇ ದೊಡ್ಡ ಸಮಸ್ಯೆ ಆಗಿದೆ.

ಕಸ ವಿಲೇವಾರಿಗೆ ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಗಳ ಅಧ್ಯಯನ ಮಾಡಲಾಗುತ್ತಿದೆ, ದೆಹಲಿ, ಹೈದರಾಬಾದ್‌ನಲ್ಲಿ ಅಧ್ಯಯನ ಮಾಡಿದ್ದು, ಇಂದೋರ್‌ಗೆ ತೆರಳುವ ಕುರಿತು ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರ ಸಲಹೆ ಪಡೆದಿದ್ದೇನೆ.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಸಾರ್ವಜನಿಕರಿಂದ 70 ಸಾವಿರ ಸಲಹೆಗಳು ಬಂದಿವೆ, ಆರೋಗ್ಯ, ಕುಡಿಯುವ ನೀರು, ತಂತ್ರಜ್ಞಾನ, ಪರಿಸರ ಕ್ಷೇತ್ರಗಳಾಗಿ ವಿಭಜನೆ ಮಾಡಿ ನಗರದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ.

ಬೆಂಗಳೂರು ಎಲ್ಲರ ನೆಚ್ಚಿನ ನಗರ, ನಗರದ ಆದಾಯ ಹಳ್ಳಿಗಳ ಅಭಿವೃದ್ಧಿಗೆ ನೆರವಾಗುತ್ತಿದೆ, ದೇಶದ ರಫ್ತು ಆದಾಯದಲ್ಲಿ ಶೇಕಡಾ 39ರಷ್ಟು ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ, ಆದ್ದರಿಂದ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹಾಗೂ ಅಪರಾಧಗಳ ತಡೆಗೆ ಆರ್ಟಿಫಿಷಲ್ ಇಂಟಲಿಜೆನ್ಸ್ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದ್ದು, ಗೃಹ ಸಚಿವಾಲಯದೊಂದಿಗೆ ಯೋಜನೆ ರೂಪಿಸುತ್ತಿದ್ದೇವೆ.

ಸರ್ಕಾರಿ ಆಸ್ತಿ ರಕ್ಷಣೆಗೆ ಪ್ರತ್ಯೇಕ ವಿಭಾಗ ರಚನೆ

ಮರಿತಿಬ್ಬೆಗೌಡ ಅವರ ಪ್ರಸ್ತವಾಕ್ಕೆ ಉತ್ತರಿಸಿದ ಅವರು, ನಿವೇಶನ ಹಂಚಿಕೆ ಮತ್ತು ಭೂ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಗರದಲ್ಲಿ ದೊಡ್ಡ ಮಾಫಿಯಾ ಇದೆ, ಶೇ.90 ರಷ್ಟು ಕೋರ್ಟ್ ವ್ಯಾಜ್ಯಗಳ ತೀರ್ಪು ಖಾಸಗಿಯವರ ಪರವಾಗಿವೆ, ಬಿಡಿಎ ಹಾಗೂ ಪಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಅಡ್ವೊಕೇಟ್‌ಗಳ ಸಭೆ ನಿಗದಿ ಮಾಡಲಾಗಿದೆ.

ಬಿಡಿಎ ಆಸ್ತಿ ಕುರಿತ ಪ್ರಕರಣಗಳ ಪರಿಶೀಲನೆಗೆ ಪ್ರತ್ಯೇಕ ವಿಭಾಗ ರೂಪಿಸಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗಿದೆ, ಸರ್ಕಾರಿ ಅಡ್ವೊಕೇಟ್‌ಗಳಿಗೆ ಹೊಣೆಗಾರಿಕೆ ನಿಗದಿ ಮಾಡಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
belagavi sessionbengalurudk shivakumarkarnatakakmsnews
3 FacebookTwitterPinterestEmail
KM Shivaraju

previous post
ಸರ್ಕಾರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದೆ
next post
ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ