39
ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಸತ್ಯಶೋಧನಾ ಸಮಿತಿ ಸದಸ್ಯರು ಇಂದು ಬೆಳಗ್ಗೆ ಇಲ್ಲಿನ ವಿಮಾನನಿಲ್ದಾಣಕ್ಕೆ ಆಗಮಿಸಿದರು.
ಸಮಿತಿಯಲ್ಲಿ ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಇದ್ದಾರೆ.
ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ, ಪಕ್ಷದ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಅನಿಲ್ ಬೆನಕೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಿತಿಯು ವಂಟಮೂರಿಗೆ ತೆರಳಿ ಸಂತ್ರಸ್ತೆಯನ್ನು ಭೇಟಿ ಮಾಡಿ ಧೈರ್ಯ ಹೇಳುವುದಲ್ಲದೆ, ಘಟನೆಯ ಮಾಹಿತಿ ಪಡೆಯಲಿದೆ.