ಕರ್ನಾಟಕದ ರೈತರು ನೆರವಿಗೆ ಧಾವಿಸಲು ಮನವಿ
ನವದೆಹಲಿ:ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಅವರ ನೆರವಿಗೆ ಧಾವಿಸಿ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ತಮಿಳುನಾಡು-ಕರ್ನಾಟಕ ಕಾವೇರಿ ನೀರಿನ ಶಾಶ್ವತ ಪರಿಹಾರಕ್ಕಾಗಿ ಮೇಕೆದಾಟು ಸಮೀಪ ಕುಡಿಯುವ ನೀರಿಗಾಗಿ ಸಮಾನಾಂತರ ಆಣೆಕಟ್ಟು ನಿರ್ಮಿಸುವುದೂ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ನೀಡುವಂತೆ ಕೋರಿದ್ದಾರೆ.
48.19 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟ
ದೆಹಲಿಯಲ್ಲಿಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಜೊತೆಗೂಡಿ ಪ್ರಧಾನಿ ಅವರನ್ನು ಭೇಟಿ ಮಾಡಿ, ರಾಜ್ಯದ ಬಹುಭಾಗ ಬರಕ್ಕೆ ಸಿಲುಕಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿವೆ ಎಂದು ವಿವರಿಸಿದ್ದಾರೆ.
ಇದರಲ್ಲಿ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌ಡಿಆರ್‌ಎಫ್‌ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ನೀಡಿ ಎಂದು ಕೋರಿದ್ದಾರೆ.
12,577 ಕೋಟಿ ರೂ. ತುರ್ತು ಪರಿಹಾರ ನೀಡಿ
ಪ್ರಧಾನಿ ಭೇಟಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, ಇನ್‌ಪುಟ್ ಸಬ್ಸಿಡಿ ಜೊತೆಗೆ 12,577 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ,363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದೇವೆ ಎಂದರು.
ಇದೆಲ್ಲದಕ್ಕೂ ಮಿಗಿಲಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಧ್ಯಕ್ಷತೆಯ ಹೈ ಪವರ್ ಕಮಿಟಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಮನವಿ ಮಾಡಿದ್ದಾಗಿ ತಿಳಿಸಿದರು.
ಕೋವಿಡ್ ಹೆಚ್ಚಳ: ಸಾರ್ವಜನಿಕರೇ ಎಚ್ಚರ
ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ.
ಇದರನ್ವಯ ರಾಜ್ಯದಲ್ಲಿ 83 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.
ಮಾನವ ದಿನ 150ಕ್ಕೆ ಹೆಚ್ಚಿಸಿ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ಮಾನವ ದಿನಗಳನ್ನು 100 ರಿಂದ 150 ದಿನಕ್ಕೆ ಹೆಚ್ಚಿಸಬೇಕು.
ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ೪ ರಿಂದ ೯ರವರೆಗೆ ರಾಜ್ಯಕ್ಕೆ ಭೇಟಿ ನೀಡಿ, ಬರ ಪರಿಸ್ಥಿತಿ ವರದಿ ಸಲ್ಲಿಸಿದೆ.
ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದರು, ಅಮಿತ್ ಷಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ ಎಂದರು.
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ
ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ, ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ, ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಲಿದೆ, ನಮಗೆ ಕುಡಿಯುವ ನೀರಿನ ಜೊತೆಗೆ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ.
ವಿದ್ಯುತ್ ಉತ್ಪಾದನೆ ಬಳಿಕ ಉಳಿಯುವ ನೀರು ಸಹಾ ತಮಿಳುನಾಡಿಗೇ ಹರಿಯುತ್ತದೆ. ಇದರಿಂದಲೂ ಅವರಿಗೇ ಅನುಕೂಲವಾಗಲಿದೆ.
ಮೇಕೆದಾಟು ಯೋಜನೆ ಪೂರ್ಣಗೊಂಡ ನಂತರ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗಲಿದೆ, ಆದ್ದರಿಂದ ಮೇಕೆದಾಟು ಯೋಜನೆಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.
ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ, ಬೇರೆ ಅಡೆ ತಡೆ ಏನೂ ಇಲ್ಲ, ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ, ಇದನ್ನು ಕೇಂದ್ರವೇ ಕೊಡಬೇಕು, ಇದುವರೆಗೂ ಕೊಟ್ಟಿಲ್ಲ, ಟೆಂಡರ್ ಕರೆದು ಅಂದಾಜು ಕೂಡ ಸಿದ್ಧವಾಗಿದೆ, ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಕಾಮಗಾರಿ ಆರಂಭ ಮಾಡಬಹುದು, ಆದ್ದರಿಂದ ಬೇಗ ಅನುಮತಿ ಕೊಡಿಸುವಂತೆ ಕೋರಿದ್ದೇವೆ.
ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್‌ನಲ್ಲಿ5,300 ಕೋಟಿ ರೂ. ಘೋಷಿಸಿದ್ದರು. ಈ ಘೋಷಣೆ ಆಧಾರದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸಹಾ 5,300 ಕೋಟಿ ರೂ. ಘೋಷಿಸಿದ್ದರು.
ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ, ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್‌ಮೆಂಟ್, ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ ಎಂದರು.
4 comments
[…] ರಾಜ್ಯ […]
[…] ರಾಜ್ಯ […]
[…] ರಾಜ್ಯ […]
[…] ರಾಜ್ಯ […]