Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಂತೂ ಇಂತೂ ಸಿದ್ದು-ಮೋದಿ ಭೇಟಿ

by KM Shivaraju December 19, 2023
written by KM Shivaraju December 19, 2023 4 comments 2 minutes read
4FacebookTwitterPinterestEmail
367

ಕರ್ನಾಟಕದ ರೈತರು ನೆರವಿಗೆ ಧಾವಿಸಲು ಮನವಿ

ನವದೆಹಲಿ:ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಅವರ ನೆರವಿಗೆ ಧಾವಿಸಿ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ತಮಿಳುನಾಡು-ಕರ್ನಾಟಕ ಕಾವೇರಿ ನೀರಿನ ಶಾಶ್ವತ ಪರಿಹಾರಕ್ಕಾಗಿ ಮೇಕೆದಾಟು ಸಮೀಪ ಕುಡಿಯುವ ನೀರಿಗಾಗಿ ಸಮಾನಾಂತರ ಆಣೆಕಟ್ಟು ನಿರ್ಮಿಸುವುದೂ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ನೀಡುವಂತೆ ಕೋರಿದ್ದಾರೆ.

48.19 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟ

ದೆಹಲಿಯಲ್ಲಿಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಜೊತೆಗೂಡಿ ಪ್ರಧಾನಿ ಅವರನ್ನು ಭೇಟಿ ಮಾಡಿ, ರಾಜ್ಯದ ಬಹುಭಾಗ ಬರಕ್ಕೆ ಸಿಲುಕಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿವೆ ಎಂದು ವಿವರಿಸಿದ್ದಾರೆ.

ಇದರಲ್ಲಿ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌ಡಿಆರ್‌ಎಫ್‌ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ನೀಡಿ ಎಂದು ಕೋರಿದ್ದಾರೆ.

12,577 ಕೋಟಿ ರೂ. ತುರ್ತು ಪರಿಹಾರ ನೀಡಿ

ಪ್ರಧಾನಿ ಭೇಟಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, ಇನ್‌ಪುಟ್ ಸಬ್ಸಿಡಿ ಜೊತೆಗೆ 12,577 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ,363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದೇವೆ ಎಂದರು.

ಇದೆಲ್ಲದಕ್ಕೂ ಮಿಗಿಲಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಧ್ಯಕ್ಷತೆಯ ಹೈ ಪವರ್ ಕಮಿಟಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಮನವಿ ಮಾಡಿದ್ದಾಗಿ ತಿಳಿಸಿದರು.

ಕೋವಿಡ್ ಹೆಚ್ಚಳ: ಸಾರ್ವಜನಿಕರೇ ಎಚ್ಚರ

ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ.

ಇದರನ್ವಯ ರಾಜ್ಯದಲ್ಲಿ 83 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.

ಮಾನವ ದಿನ 150ಕ್ಕೆ ಹೆಚ್ಚಿಸಿ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ಮಾನವ ದಿನಗಳನ್ನು 100 ರಿಂದ 150 ದಿನಕ್ಕೆ ಹೆಚ್ಚಿಸಬೇಕು.

ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ೪ ರಿಂದ ೯ರವರೆಗೆ ರಾಜ್ಯಕ್ಕೆ ಭೇಟಿ ನೀಡಿ, ಬರ ಪರಿಸ್ಥಿತಿ ವರದಿ ಸಲ್ಲಿಸಿದೆ.

ಹುಲಿ ಉಗುರು: ಸಂಪುಟದಲ್ಲಿ ಚರ್ಚೆ

ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದರು, ಅಮಿತ್ ಷಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ ಎಂದರು.

ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ

ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ, ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ, ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಲಿದೆ, ನಮಗೆ ಕುಡಿಯುವ ನೀರಿನ ಜೊತೆಗೆ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ.

ವಿದ್ಯುತ್ ಉತ್ಪಾದನೆ ಬಳಿಕ ಉಳಿಯುವ ನೀರು ಸಹಾ ತಮಿಳುನಾಡಿಗೇ ಹರಿಯುತ್ತದೆ. ಇದರಿಂದಲೂ ಅವರಿಗೇ ಅನುಕೂಲವಾಗಲಿದೆ.

ಮೇಕೆದಾಟು ಯೋಜನೆ ಪೂರ್ಣಗೊಂಡ ನಂತರ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗಲಿದೆ, ಆದ್ದರಿಂದ ಮೇಕೆದಾಟು ಯೋಜನೆಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.

ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ, ಬೇರೆ ಅಡೆ ತಡೆ ಏನೂ ಇಲ್ಲ, ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ, ಇದನ್ನು ಕೇಂದ್ರವೇ ಕೊಡಬೇಕು, ಇದುವರೆಗೂ ಕೊಟ್ಟಿಲ್ಲ, ಟೆಂಡರ್ ಕರೆದು ಅಂದಾಜು ಕೂಡ ಸಿದ್ಧವಾಗಿದೆ, ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಕಾಮಗಾರಿ ಆರಂಭ ಮಾಡಬಹುದು, ಆದ್ದರಿಂದ ಬೇಗ ಅನುಮತಿ ಕೊಡಿಸುವಂತೆ ಕೋರಿದ್ದೇವೆ.

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್‌ನಲ್ಲಿ5,300 ಕೋಟಿ ರೂ. ಘೋಷಿಸಿದ್ದರು. ಈ ಘೋಷಣೆ ಆಧಾರದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸಹಾ 5,300 ಕೋಟಿ ರೂ. ಘೋಷಿಸಿದ್ದರು.

ರಾಜ್ಯದಲ್ಲಿ ಮತ್ತೆ ಕೋವಿಡ್ ಭೀತಿ

ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ, ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್‌ಮೆಂಟ್, ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
delhidrought relief memorandumkarnatakakmskmskannadanewspmopoliticsSiddaramaiah
4 FacebookTwitterPinterestEmail
KM Shivaraju

previous post
ರಾಜ್ಯದಲ್ಲಿ ಮತ್ತೆ ಕೋವಿಡ್ ಭೀತಿ
next post
ಹುಲಿ ಉಗುರು: ಸಂಪುಟದಲ್ಲಿ ಚರ್ಚೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ