Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಷ್ಟ್ರ

ಟಾಟಾ, ಜಿಂದಾಲ್, ಮಹೀಂದ್ರ ಸೇರಿದಂತೆ ದಿಗ್ಗಜ ಉದ್ಯಮಿಗಳ ಜತೆ ಮಾತುಕತೆ

by KM Shivaraju December 19, 2023
written by KM Shivaraju December 19, 2023 0 comments 2 minutes read
4FacebookTwitterPinterestEmail
135
ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಮುಂಬೈಗೆ ಸಚಿವ ಎಂ ಬಿ ಪಾಟೀಲ ಭೇಟಿ

ಮುಂಬಯಿ: ಕರ್ನಾಟಕಕ್ಕೆ ಬಂಡವಾಳ ಆಕರ್ಷಿಸುವ ಉದ್ದೇಶದೊಂದಿಗೆ ಇಲ್ಲಿಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಹಲವು ದೈತ್ಯ ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು.

ತಮ್ಮ ಪ್ರವಾಸದ ಮೊದಲ ದಿನದಂದು ಅವರು ಮಹೀಂದ್ರ, ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ ಡಬ್ಲ್ಯು), ಟಾಟಾ, ಬ್ಲ್ಯಾಕ್ ಸ್ಟೋನ್ ಮತ್ತು ಆರ್ ಪಿಜಿ ಗ್ರೂಪ್ ನ ಪ್ರಮುಖರನ್ನು ಭೇಟಿ ಮಾಡಿ, ರಾಜ್ಯದಲ್ಲಿರುವ ಹೂಡಿಕೆಗೆ ಪೂರಕವಾದ ನೀತಿ, ಉತ್ತೇಜನ, ಪ್ರೋತ್ಸಾಹಕ ಕ್ರಮಗಳು, ವಿಶೇಷ ರಿಯಾಯಿತಿಗಳು, ಸೌಲಭ್ಯಗಳೆಲ್ಲವನ್ನೂ ವಿವರಿಸಿದರು.

ಕ್ರಿಸ್‌ಮಸ್ ಹಬ್ಬದ ರಜೆ

ಈ ಮಹತ್ವಾಕಾಂಕ್ಷಿ ಮಾತುಕತೆಯಲ್ಲಿ ಮಹೀಂದ್ರ ಸಮೂಹದ ಪರವಾಗಿ ಅದರ ಅಂಗಸಂಸ್ಥೆಗಳಾದ ಆಟೋ ಅಂಡ್ ಫಾರಂ ವಿಭಾಗದ ಅಧ್ಯಕ್ಷ ವಿನೋದ್ ಸಹಾಯ್, ಜಿಂದಾಲ್ ಸಮೂಹದ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಪಾರ್ಥ ಜಿಂದಾಲ್, ಟಾಟಾ ಸಮೂಹದ ಮುಖ್ಯಸ್ಥ ಎನ್. ಚಂದ್ರಶೇಖರನ್, ಆರ್ ಪಿಜಿ ಸಮೂಹದ ಉಪಾಧ್ಯಕ್ಷ ಅನಂತ್ ಗೊಯೆಂಕ ಪಾಲ್ಗೊಂಡಿದ್ದರು.

ಹಲವು ಕಂಪನಿಗಳ ಪ್ರಮುಖರಭೇಟಿ

ಸಚಿವರು ಬುಧವಾರ ಕೂಡ ಬಿರ್ಲಾ ಮತ್ತು ರಿಲಯನ್ಸ್ ಉದ್ಯಮ ಸಮೂಹ ಸೇರಿದಂತೆ ಹಲವು ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ.

ಸಚಿವ ಪಾಟೀಲರು ಇತ್ತೀಚೆಗೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸಬೇಕೆಂಬ ಉದ್ದೇಶದೊಂದಿಗೆ ಅಮೆರಿಕಕ್ಕೆ 12 ದಿನಗಳ ಭೇಟಿ ನೀಡಿ, 25ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದರು. ಈ ಉಪಕ್ರಮದಿಂದಾಗಿ ರಾಜ್ಯಕ್ಕೆ 25 ಸಾವಿರ ಕೋಟಿ ರೂ. ಮೊತ್ತದ ಹೂಡಿಕೆ ಖಾತ್ರಿಯಾಗಿರುವುದನ್ನುಇಲ್ಲಿ ಸ್ಮರಿಸಬಹುದು.

ಅತ್ಯುತ್ತಮವಾದ ಕೈಗಾರಿಕಾ ನೀತಿ

ಈ ಸಂದರ್ಭದಲ್ಲಿ ಉದ್ಯಮಿಗಳೊಂದಿಗೆ ಮಾತನಾಡಿದ ಅವರು, `ಕರ್ನಾಟಕವು ಅತ್ಯುತ್ತಮವಾದ ಕೈಗಾರಿಕಾ ನೀತಿಯನ್ನು ಹೊಂದಿದ್ದು, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿದ್ಯುನ್ಮಾನ, ಸೆಮಿ ಕಂಡಕ್ಟರ್ ಉತ್ಪಾದನೆ, ಆರೋಗ್ಯ ಸೇವೆಗಳು, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ, ಮಾನವ ಸಂಪನ್ಮೂಲ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲ ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.

ಕೋವಿಡ್ ಹೆಚ್ಚಳ: ಸಾರ್ವಜನಿಕರೇ ಎಚ್ಚರ

 ನೇರ ವಿದೇಶಿ ಹೂಡಿಕೆ ಆಕರ್ಷಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಸಂಶೋಧನೆ, ಆವಿಷ್ಕಾರ ಮತ್ತು ನಾವೀನ್ಯತೆ ಸೂಚ್ಯಂಕದಲ್ಲಿ ಕೂಡ ಗಮನಾರ್ಹ ಜಾಲವನ್ನು ಹೊಂದಿದೆ. ಹೀಗಾಗಿ, ಈಗಾಗಲೇ ರಾಜ್ಯದಲ್ಲಿ ಹೂಡಿಕೆ ಮಾಡಿರುವ ಕಂಪನಿಗಳು ಮತ್ತಷ್ಟು ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಬೇಕು’ ಎಂದು ಕೋರಿದರು.

ಅಲ್ಲದೆ, `ರಾಜ್ಯ ಸರ್ಕಾರವು ಬೆಂಗಳೂರಿನ ಸಮೀಪದಲ್ಲಿ ಅತ್ಯಾಧುನಿಕ ಮತ್ತು ವಿಶ್ವ ದರ್ಜೆಯ ಜ್ಞಾನ, ಆರೋಗ್ಯ, ಸಂಶೋಧನೆ ಮತ್ತು ನಾವೀನ್ಯ ಸಿಟಿ (ಕೆಎಚ್ಐಆರ್ ಸಿಟಿ)ಯನ್ನು 2,000 ಎಕರೆ ವಿಸ್ತೀರ್ಣದಲ್ಲಿ ಸ್ಥಾಪಿಸುತ್ತಿದೆ.

ರಚನಾತ್ಮಕ ಅಭಿವೃದ್ಧಿಗೆ ವಿಷನ್ ಗ್ರೂಪ್ಸ್

ಇದರ ಜತೆಯಲ್ಲೇ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ಕೊಡುತ್ತಿದೆ. ಒಂಬತ್ತು ಉದ್ಯಮ ವಲಯಗಳನ್ನು ಗುರುತಿಸಿದ್ದು, ಅವುಗಳ ರಚನಾತ್ಮಕ ಅಭಿವೃದ್ಧಿಗೆ ವಿಷನ್ ಗ್ರೂಪ್ಸ್ ರಚಿಸಲಾಗಿದೆ’ ಎಂದು ಅವರು ವಿವರಿಸಿದರು.

ಬಿಯಾಂಡ್ ಬೆಂಗಳೂರು ಸೇರಿದಂತೆ  ಹಲವು ಉಪಕ್ರಮಗಳ ಮೂಲಕ ರಾಜ್ಯದ ಎಲ್ಲ ಭಾಗಗಳಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕೆಂಬ ಗುರಿ ಇಟ್ಟುಕೊಂಡಿದೆ. ಜೊತೆಗೆ ಉದ್ಯಮಿಗಳಿಗೆ ಯಾವುದೇ ಅಡಚಣೆ ಇಲ್ಲದೆ ಏಕಗವಾಕ್ಷಿ ವಿಧಾನದಲ್ಲಿ ಅಗತ್ಯ ಅನುಮತಿಗಳನ್ನೆಲ್ಲ ನೀಡಲಾಗುತ್ತಿದೆ ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಸ್ಮೃತಿ ಇರಾನಿ ಭೇಟಿಯಾದ ಲಕ್ಷ್ಮೀ ಹೆಬ್ಬಾಳಕರ್

ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
attractbig businessmencapitalJindalkarnataka stateMahindraminister mb patilTalksTatavisits Mumbai
4 FacebookTwitterPinterestEmail
KM Shivaraju

previous post
ಸ್ಮೃತಿ ಇರಾನಿ ಭೇಟಿಯಾದ ಲಕ್ಷ್ಮೀ ಹೆಬ್ಬಾಳಕರ್
next post
ಕುಮಾರಸ್ವಾಮಿಗೆ ಬಿಜೆಪಿ ವರಿಷ್ಠರ ಬುಲಾವ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ