Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೂಪಾಂತರಿಗೆ ಹೆದರಬೇಡಿ

by KM Shivaraju December 21, 2023
written by KM Shivaraju December 21, 2023 0 comments 1 minutes read
3FacebookTwitterPinterestEmail
99
ಸಚಿವ ಸಂಪುಟ ಉಪಸಮಿತಿ ರಚನೆ

ಬೆಂಗಳೂರು:ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ, ಆದರೆ ಕೊರೊನಾ ರೂಪಾಂತರಿ ತಳಿ ಜೆಎನ್.1 ಬಗ್ಗೆ ಎಚ್ಚರಿಕೆ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಂಕು ತಡೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರೂ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ, ಆದರೆ, 60 ವರ್ಷ ಮೇಲ್ಪಟ್ಟವರು, ಬಹುವಿಧದ ಖಾಯಿಲೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದಿದ್ದಾರೆ.

ಜನದಟ್ಟಣೆಯಿಂದ ದೂರ ಇರಬೇಕು, ರೂಪಾಂತರಿಯ ಹೊಸ ತಳಿ ಜೆಎನ್.೧ ಅಪಾಯಕಾರಿ ಅಲ್ಲ ಎಂದು ತಜ್ಞರು ತಿಳಿಸಿದ್ದಾರೆ, ಆದರೂ ನಾವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತೇವೆ.

ವೈರಾಣು ಬಗ್ಗೆ ಸದಾ ಎಚ್ಚರಿಕೆಯಿಂದಿರಿ

ಹಿಂದಿನ ಸರ್ಕಾರಗಳಲ್ಲಾಗಿರುವ ಅವಾಂತರಗಳು ಮತ್ತೆ ಮರುಕಳಿಸಬಾರದೆಂಬ ಉದ್ದೇಶದಿಂದ ಈ ವೈರಾಣು ಬಗ್ಗೆ ಸದಾ ಎಚ್ಚರಿಕೆಯಿಂದಿರಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಚಿವ ಸಂಪುಟದ ಉಪಸಮಿತಿ ರಚಿಸಲಾಗುವುದು.

ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಉಪಸಮಿತಿ ಕಾಲಾನುಕಾಲಕ್ಕೆ ಸಭೆ ನಡೆಸಿ ತೀರ್ಮಾನಗಳನ್ನು ಕೈಗೊಳ್ಳಲಿದೆ.

ರಾಜ್ಯದಲ್ಲಿ ಹೊಸ ಉಪತಳಿ ಪ್ರಕರಣ 92 ಪತ್ತೆ

ಹೊಸ ಉಪತಳಿ ಪ್ರಕರಣಗಳು ರಾಜ್ಯದಲ್ಲಿ 92 ಪತ್ತೆಯಾಗಿದೆ, ಬೆಂಗಳೂರಿನಲ್ಲಿ ೮೦ ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ, ಉಳಿದವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ, 20 ರಲ್ಲಿ 7 ಮಂದಿ ಐಸಿಯುನಲ್ಲಿದ್ದಾರೆ, ಇವರಿಗೆ ಇತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿದಿನ 5,000 ಟೆಸ್ಟ್‌ಗಳನ್ನು ನಡೆಸಲಾಗುತ್ತದೆ, ಬೆಂಗಳೂರಲ್ಲಿ ಒಂದು ಸಾವಿರ ಪರೀಕ್ಷೆ ನಡೆಸಲಾಗುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ನಡೆಸಬೇಕೆಂದು ಆದೇಶಿಸಲಾಗಿದೆ.

ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು.

ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ

ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರುತ್ತವೆ, ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು, ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.

ಕೇರಳದಲ್ಲಿ ಪರೀಕ್ಷೆ ಹೆಚ್ಚು, ಆದ್ದರಿಂದ ಪ್ರಮಾಣ ಕೂಡ ಹೆಚ್ಚಿದೆ, ಇಲ್ಲಿ ಪರೀಕ್ಷೆಗಳು ಹೆಚ್ಚಾದಂತೆ ಪತ್ತೆ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.

ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ, ಪರಿಸ್ಥಿತಿ ನೋಡಿಕೊಂಡು ಡೆಡಿಕೇಟೆಡ್ ಆಸ್ಪತ್ರೆಗಳನ್ನು ನಿಗದಿ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannadanewsSiddaramaiah
3 FacebookTwitterPinterestEmail
KM Shivaraju

previous post
ಬಿಜೆಪಿ ಗೆಲುವಿಗೆ ಪ್ರೇರಣೆ
next post
ಪ್ರಧಾನಿ-ಕುಮಾರಸ್ವಾಮಿ ರಣತಂತ್ರ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ