ಜೆಡಿಎಸ್-ಬಿಜೆಪಿ ಹಂಚಿಕೆ ಅಂತಿಮ: ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ ಮೊರೆ
ಬೆಂಗಳೂರು: ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿರುವ ಜೆಡಿಎಸ್ ಉಳಿದ 24 ಕ್ಷೇತ್ರಗಳಲ್ಲಿ ಮಿತ್ರ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸಲಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಳೆದ ವಾರ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಸೀಟು ಹೊಂದಾಣಿಕೆ ಅಂತಿಮಗೊಳಿಸಲಾಗಿದ್ದು, ಆದರೆ, ಬಹಿರಂಗ ಪಡಿಸಲಾಗಿಲ್ಲ.
ದೆಹಲಿಯಿಂದ ಹಿಂತಿರುಗುತ್ತಿದ್ದಂತೆ ಕುಮಾರಸ್ವಾಮಿ ತಮ್ಮ ಪಾಲಿಗೆ ಬಂದಿರುವ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಆ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ್ದಾರೆ. ಪ್ರತಿನಿತ್ಯ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಶಾಸಕರು, ಮುಖಂಡರು, ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ನಿರಂತರ ಚರ್ಚೆಯಲ್ಲಿದ್ದಾರೆ.
ಅಭ್ಯರ್ಥಿಗಳ ಆಯ್ಕೆಗೆ ಪ್ರತ್ಯೇಕ ಸಮೀಕ್ಷೆ
ಈ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಯಾರಾಗಬೇಕು ಎಂಬುದಕ್ಕೆ ಬಿಜೆಪಿ ಜೊತೆ ಕೈಜೋಡಿಸಿ ಪ್ರತ್ಯೇಕ ಸಮೀಕ್ಷೆಯನ್ನು ಆರಂಭಿಸಿದ್ದಾರೆ. ಬಿಜೆಪಿ ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಪ್ರತ್ಯೇಕ ಸಮೀಕ್ಷೆಗಳನ್ನು ನಡೆಸಿ ವರದಿ ಪಡೆದಿದ್ದರೂ ಮತ್ತೆ ಸರ್ವೆ ಕಾರ್ಯ ನಡೆಸುತ್ತಿದೆ. ಜೆಡಿಎಸ್ ಕೈಗೊಂಡಿರುವ ಸಮೀಕ್ಷಾ ವರದಿ ಜನವರಿ ಮಧ್ಯಭಾಗದ ವೇಳೆಗೆ ಕೈಸೇರಲಿದ್ದು, ಇದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇದಕ್ಕೂ ಮುನ್ನ ಕುಮಾರಸ್ವಾಮಿ, ಸ್ವತಃ ತಮ್ಮ ಬಿಡದಿ ತೋಟದಲ್ಲಿ ಕುಳಿತು ಕಾರ್ಯಕರ್ತರಿಂದ, ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ವಿಶ್ವಾಸಕ್ಕೆ
ಈ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೆ, ಅದನ್ನು ಬಗೆಹರಿಸುವಲ್ಲಿ ನಿರತರಾಗಿದ್ದಾರೆ. ದೆಹಲಿಯಿಂದ ಬಂದ ನಂತರ ಸಮಯವನ್ನು ವ್ಯರ್ಥ ಮಾಡದೆ, ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಕುಟುಂಬದ ಯಾರೂ ಹಸ್ತಕ್ಷೇಪ ಮಾಡದಂತೆ ಎಚ್ಚರ ವಹಿಸಿದ್ದಾರೆ. ತುಮಕೂರು ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕರ್ತರ ಜೊತೆಗೆ ಬಿಜೆಪಿ ಮುಖಂಡರ ಜೊತೆಯೂ ಸಂಪರ್ಕದಲ್ಲಿದ್ದು, ಸಂಘಟನೆ ಮತ್ತು ಚುನಾವಣೆ ಸಂಬಂಧ ಸಹಕಾರ ಪಡೆದುಕೊಳ್ಳುತ್ತಿದ್ದಾರೆ.
ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ
ಈ ಕ್ಷೇತ್ರಗಳಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯವನ್ನು ಜನವರಿ ಮಧ್ಯಭಾಗದೊಳಗೆ ಪೂರ್ಣಗೊಳಿಸಿ ಸಂಕ್ರಾಂತಿ ನಂತರ ಚುನಾವಣಾ ಪ್ರಚಾರವನ್ನು ಆರಂಭಿಸಲು ತೀರ್ಮಾನಿಸಿದ್ದಾರೆ. ತಾವು ಪ್ರಚಾರ ಕೈಗೊಳ್ಳುವ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗದುಕೊಳ್ಳುವ ಜೊತೆಗೆ ಅವರನ್ನೂ ಈ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲಿದ್ದಾರಂತೆ. ಜೆಡಿಎಸ್ ಬಯಸಿದಲ್ಲಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಹೈದರಾಬಾದ್ ಕರ್ನಾಟಕದಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದರು. ಆದರೆ, ಕುಮಾರಸ್ವಾಮಿ ನಾಲ್ಕು ಕ್ಷೇತ್ರಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
1 comment
[…] ರಾಜ್ಯ […]