ಹೋರಾಟಗಳು ಅಹಿಂಸಾತ್ಮಕವಾಗಿರಬೇಕು
ಚಿಕ್ಕಬಳ್ಳಾಪುರ: ಮನುಷ್ಯತ್ವ ಅಂತಿಮ ಗುರಿಯಾಗಬೇಕು, ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ಪ್ರಯತ್ನವಿರಬೇಕು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ನಿಡುಮಾಮಿಡಿ ಸ್ವಾಮೀಜಿ ಪೀಠಾರೋಹಣದ ೩೩ನೇ ವರ್ಷಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ, ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಅಸಮಾನತೆಗಳು ತೊಲಗಬೇಕು
ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಿದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ, ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು.
ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆ ನೀಗಿಸದೇ ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದು ಡಾ.ಅಂಬೇಡ್ಕರ್ ಪ್ರತಿಪಾದಿಸಿದ್ದರು.
ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ, ಈ ಅಂಶವನ್ನು ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ.
ನಿಡುಮಾಮಿಡಿ ಶ್ರೀಮಠವು ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಸೀಮಿತವಾಗದೆ ಜಾತ್ಯತೀತ ಮಾನವ ಧರ್ಮ ಪೀಠ ಎನಿಸಿದೆ, ಈ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ಸಹಕಾರ ನೀಡಲಿದೆ ಎಂದರು.
1 comment
[…] ರಾಜ್ಯ […]