Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ

by admin December 30, 2023
written by admin December 30, 2023 0 comments 3 minutes read
2FacebookTwitterPinterestEmail
120
ರಾಜಕೀಯ ಗಂಜಿ ಕೇಂದ್ರ ಸೃಷ್ಟಿಗೆ ದುಡ್ಡಿದೆ ಎಂದು ತರಾಟೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಆದರೆ ʼರಾಜಕೀಯ ಗಂಜಿ ಕೇಂದ್ರʼಗಳನ್ನು ಯಥೇಚ್ಚವಾಗಿ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಬರದ ನಡುವೆಯೂ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ರಮವನ್ನು ಅವರು ತರಾಟೆಗೆ ತೆಗೆದುಕೊಂಡರು. ಈ ಸರ್ಕಾರ ರೈತರನ್ನು ಬಹಳ ಕೇವಲವಾಗಿ ನಡೆಸಿಕೊಳ್ಳುತ್ತಿದೆ. ಆದರೆ, ಅಧಿಕಾರನ್ನು ಭರ್ಜರಿಯಾಗಿ ಅನುಭವಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಸಲಹೆಗಾರರಿಗೆ ಸಂಪುಟ ದರ್ಜೆ ಕರುಣಿಸಿದ ಸಿದ್ದರಾಮಯ್ಯ

ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವ ಸಿಎಂಗೆ ಹ್ಯಾಟ್ಸಾಫ್ ಎಂದ ಹೆಚ್ಡಿಕೆ ಅವರು; ಸಿಎಂ ಅವರು ಬಿ.ಆರ್.ಪಾಟೀಲ್ ಅವರನ್ನು ಸಲಹೆಗಾರರನ್ನಾಗಿ ನೆಮಕ ಮಾಡಿಕೊಂಡಿದ್ದಾರೆ. ಬಸವರಾಜ ರಾಯರೆಡ್ಡಿ ಅವರಿಗೆ ಆರ್ಥಿಕ ಸಲಹೆಗಾರರನ್ನಾಗಿ  ಮಾಡಿ ಸಂಪುಟ ದರ್ಜೆ ನೀಡಿದ್ದಾರೆ. ಹಾಗೆಯೇ, ರಾಜ್ಯದ  3ನೇ ಆಡಳಿತ ಸುಧಾರಣಾ ಆಯೋಗಕ್ಕೆ ಆರ್.ವಿ.ದೇಶಪಾಂಡೆ ಅವರಿಗೆ ಅವಕಾಶ ನೀಡಿ ಅವರಿಗೂ ಸಂಪುಟ ದರ್ಜೆ ಭಾಗ್ಯ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ

ಆತನ್ಯಾರೋ ಚುನಾವಣೆ ಮತ್ತು ಗ್ಯಾರಂಟಿ ತಂತ್ರಗಾರಿಕೆ ಮಾಡಿದ ಎಂದು ಆತನಿಗೂ ಸಲಹೆಗಾರ ಹುದ್ದೆ ಕೊಟ್ಟು ಸಂಪುಟ ದರ್ಜೆ ಕರುಣಿಸಿದ್ದಾರೆ. ಇನ್ನೊಬ್ಬರನ್ನು ಮಾಧ್ಯಮ ಸಲಹೆಗಾರ ಅಂತ ಮಾಡಿಕೊಂಡು ಅವರಿಗೂ ಸಂಪುಟ ದರ್ಜೆ ನೀಡಿದ್ದಾರೆ. ಹೀಗೆ ಸುತ್ತಲೂ ಸಲಹೆಗಾರರು, ಕಾರ್ಯದರ್ಶಿಗಳನ್ನು ಇಟ್ಟುಕೊಟಂಡು ಜನರ ತೆರಿಗೆ ದುಡ್ಡಿನಲ್ಲಿ ಗೂಟದ ಕಾರು, ಸರಕಾರಿ ಕಚೇರಿ, ಸಿಬ್ಬಂದಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ದಾಖಲೆ 14 ಬಜೆಟ್‌ ಮಂಡಿಸಿದವರಿಗೆ ಸಲಹೆಗಾರರಾ!

ನಾಡು ಕೊಳ್ಳೆ ಹೋಗುತ್ತಿದ್ದರೂ ಈ ಸರ್ಕಾರದಲ್ಲಿ ಅಧಿಕಾರ ಲಾಲಸೆಗೇನೂ ಕೊರತೆ ಇಲ್ಲ. 14 ಬಜೆಟ್ʼಗಳನ್ನು ಮಂಡಿಸಿ ದಾಖಲೆ ಮಾಡಿದವರು ತಮಗೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಕಠಿಣ ಶಬ್ದಗಳಲ್ಲಿ ಟೀಕಿಸಿದರು ಕುಮಾರಸ್ವಾಮಿ ಅವರು.

ಅವರೇ ವಿಶ್ವ ವಿಖ್ಯಾತ ಆರ್ಥಿಕ ತಜ್ಞರು. ಹಣಕಾಸು ಸಚಿವರಾಗಿ ಅನೇಕ ಸಿಎಂಗಳ ಜತೆ ಕೆಲಸ ಮಾಡಿದವರು. ಡಿಸಿಎಂ, ಸಿಎಂ ಹಾಗೂ ಪ್ರತಿಪಕ್ಷ ನಾಯಕರಾಗಿದ್ದವರು. ಅವರು ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದರೆ ಅಚ್ಚರಿ ಆಗುತ್ತಿದೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

ಇನ್ನು, ಆರ್.ವಿ.ದೇಶಪಾಂಡೆ ಅವರು 25 ವರ್ಷಗಳ ಕಾಲ ಮಂತ್ರಿ ಆಗಿದ್ದವರು.  ವಿವಿಧ ಸಿಎಂಗಳ ಜತೆ ಹತ್ತಾರು ಇಲಾಖೆಗಳಲ್ಲಿ ಕೆಲಸ ಮಾಡಿದ್ದವರು. ಬಹಳ ಹಿರಿಯರು. ಈಗ ಅವರನ್ನು ಮೂರನೇ ಆಡಳಿತ  ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ವರ್ಗಾವಣೆ ದಂಧೆ

ಹಿಂದೆ ಹಾರನಹಳ್ಳಿ ರಾಮಸ್ವಾಮಿ, ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಅವರುಗಳು ಇದೇ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿ ಆಡಳಿತ ಸುಧಾರಣೆಗೆ ತಲಾ ಒಂದೊಂದು ವರದಿ ನೀಡಿದ್ದಾರೆ. ಆ ವರದಿಗಳು ಏನಾಗಿವೆ? ಆ ವರದಿಗಳ ಸಲಹೆಗಳನ್ನ ಸ್ವೀಕಾರ ಮಾಡಿ ಎಷ್ಟು ಆಡಳಿತ ಸುಧಾರಣೆ ಮಾಡಿದ್ದೀರಾ? ಎಂಬುದನ್ನು ಜನರಿಗೆ ತಿಳಿಸಲಿ ಎಂದು ಒತ್ತಾಯಿಸಿದರು.

ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ಮಾಡಿಕೊಂಡು ಏನು ಆಡಳಿತ ಸುಧಾರಣೆ ಮಾಡುತ್ತಾರೆ ಇವರು? ಮೇಯುವುದಕ್ಕೆ ಎಲ್ಲರಿಗೂ ಮುಕ್ತ ಅವಕಾಶ ಕೊಟ್ಟಿದ್ದಾರೆ. ಬಿ.ಆರ್‌‌.ಪಾಟೀಲ್ ಅವರನ್ನು ಸಿಎಂ ತಮ್ಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ.

ಮನುಷ್ಯತ್ವ ಅಂತಿಮ ಗುರಿಯಾಗಬೇಕು

ಸಿಎಂಗಿಂತ ಸಲಹೆಗಾರ ಬೇಕಾ? ಅಹಿಂದ ಐಕಾನ್ ಅವರು. ಮಲ್ಲಿಕಾರ್ಜುನ ಖರ್ಗೆಯರನ್ನೇ ದೆಹಲಿಗೆ ಎತ್ತಿಹಾಕಿದ ರಾಜಕೀಯ ಅನುಭವ ಅವರದ್ದು. ಅಂಥವರಿಗಿಂತ ಹೆಚ್ಚು ಅನುಭವ ಬಿ.ಆರ್.ಪಾಟೀಲ್ ಅವರಿಗೆ ಇದೆಯಾ? ಎಂದು ಲೇವಡಿ ಮಾಡಿದರು.

2009ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿಯೂ ಸೋತಿತ್ತು. ಅಂತಹ ಹೀನಾಯ ಸೋಲಿಗೆ ಕಾರಣರಾದ ನಾಯಕನಿಗೆ ಸಲಹೆಗಾರರ ಅಗತ್ಯ ಇದೆಯಾ? ದೇವರಾಜು ಅರಸು ನಂತರ ಎರಡು ಬಾರಿ ಸಿಎಂ, ವಿರೋಧ ಪಕ್ಷದ ನಾಯಕರಾಗಿ, ಡಿಸಿಎಂ ಆಗಿ ಅನುಭವ ಪಡೆದಿರುವ ಸಿದ್ದರಾಮಯ್ಯ ಅವರೇ ಬಿ.ಆರ್.ಪಾಟೀಲ್ ಅವರರಿಂದ ಪಡೆಯುವ ಸಲಹೆಯಾದರೂ ಇರುತ್ತದಾ? ಇದೆಂಥಾ ವಿಪರ್ಯಾಸ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

2 ಸಾವಿರ ರೂಪಾಯಿ ಪರಿಹಾರ ಕೊಡಲು ಮೀನಾಮೇಷ

ಈ ಸರ್ಕಾರ ಏನು ಮಾಡುತ್ತಿದೆ? ಕೆಲ ಸಚಿವರು ರೈತರ ಬಗ್ಗೆ ಏನೆಲ್ಲಾ ಮಾತನಾಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಅನ್ನ ಬೆಳೆದುಕೊಡುವ ರೈತರ ಬಗ್ಗೆ ಇಷ್ಟು ನಿರ್ದಯವಾಗಿ ಸರ್ಕಾರ ವರ್ತಿಸಬಾರದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಫ್ರೂಟ್ ತಂತ್ರಾಂಶದ ಮೂಲಕ ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ಕೊಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ಇಲ್ಲಿಯವರೆಗೆ ರೈತರಿಗೆ ಬಿಡಿಗಾಸನ್ನೂ ಕೊಟ್ಟಿಲ್ಲ. ಇದು ಸರ್ಕಾರದ ಏಳು ತಿಂಗಳ ಸಾಧನೆ. ನುಡಿದಂತೆ ನಡೆಯುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಇವರು. ನುಡಿದಂತೆ ನಡೆಯುವುದು ಎಂದರೆ ಹೀಗೆನಾ ಎಂದು ಅವರು ಸರ್ಕಾರದ ಮೇಲೆ ತೀವ್ರ ಪ್ರಹಾರ ನಡೆಸಿದರು.

ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

ಕೆಲ ದಿನಗಳ ಹಿಂದೆ ಹೋಗಿ ಪ್ರಧಾನಿಗಳು ಸೇರಿದಂತೆ ಕೇಂದ್ರದ ವಿವಿಧ ನಾಯಕರನ್ನು ಸಿಎಂ, ಡಿಸಿಎಂ ಮತ್ತು ಸಚಿವರು ಭೇಟಿ ಮಾಡಿದ್ದರು. ಕೇಂದ್ರವೂ ಕೂಡ ವರದಿಯನ್ನು ಸಿದ್ಧ ಮಾಡಿಕೊಂಡಿದೆ. NDRF ಅಡಿ ಹಣ ಶೀಘ್ರವೇ ಬಿಡುಗಡೆ ಆಗಬಹುದು. ಆದರೆ, ರಾಜ್ಯದಲ್ಲಿಯೂ ಸರ್ಕಾರ ಎನ್ನುವುದು ಇದೆಯಲ್ಲ. ಕೇಂದ್ರದಿಂದ ಹಣ ಬರುವುದರೊಳಗೆ ರೈತರಿಗೆ ತಾನೇ ಹೇಳಿದಂತೆ 2 ಸಾವಿರ ರೂಪಾಯಿ ಕೊಡಬಹುದಿತ್ತು. ಯಾಕೆ ಈ ಹಣವನ್ನು ಕೊಡಲಿಲ್ಲ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ರೈತರು ಕಷ್ಟದಲ್ಲಿದ್ದರೆ, ಇವರು ಮೂವರು ಡಿಸಿಎಂಗಳ ಗುಂಗಿನಲ್ಲಿ ಇದ್ದಾರೆ!

ರಾಜ್ಯದಲ್ಲಿ ಇಂಥ ಭೀಕರ ಬರದ ಪರಿಸ್ಥಿತಿ ಇದ್ದರೂ ಇವರ ಮೋಜು ಮಸ್ತಿ ಏನು ಕಡಿಮೆ ಆಗಿಲ್ಲ. ಈಗಾಗಲೇ ರೈತರ ಆತ್ಮಹತ್ಯೆಗಳು ಆರಂಭವಾಗಿದೆ. ಬೆಳೆ ಉಳಿಸಿಕೊಳ್ಳಲು ನಾರಾಯಣಪುರ ಡ್ಯಾಮ್ ಬಳಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಈ ಸರ್ಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯದ  ಚಿಂತೆ. ಇವರು ಮೂವರು ಡಿಸಿಎಂಗಳನ್ನು ಮಾಡುವ ಗುಂಗಿನಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ  ತರಾಟೆಗೆ ತೆಗೆದುಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2 FacebookTwitterPinterestEmail
admin

previous post
ಬೆಂಗಳೂರಿನಲ್ಲಿ ಸುರಂಗ ಯೋಜನೆ: ಇಬ್ಬರು ಸಚಿವರ ನಡುವೆ ಫೈಟ್
next post
ಖರ್ಗೆ ಬದಲು ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದ ಸಿದ್ದರಾಮಯ್ಯ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ