Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಷ್ಟ್ರ

123.42 ಕೋಟಿ  ರೂಪಾಯಿಯ  852 ಟನ್ ಮಾರ್ಜಕ ಉತ್ಪಾದನೆ

by admin January 2, 2024
written by admin January 2, 2024 0 comments 1 minutes read
0FacebookTwitterPinterestEmail
373
ಕೆಎಸ್ ಡಿಎಲ್ ನಿಂದ ಸಾರ್ವಕಾಲಿಕ ದಾಖಲೆ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ  123.42 ಕೋಟಿ ರೂ. ಮೌಲ್ಯದ  852  ಟನ್  ಮಾರ್ಜಕಗಳನ್ನು ಉತ್ಪಾದಿಸಿದೆ. ಇದು  ಕಳೆದ 40 ವರ್ಷಗಳಲ್ಲಿ  ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ತಿಂಗಳು ಕೆಎಸ್ ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು ಎಂದಿದ್ದಾರೆ.

ಕೆಎಸ್ ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರ್ಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು

ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಉತ್ಪಾದನೆಯತ್ತಲೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ  ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಕೂಡ ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಕಳೆದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1171.07 ಕೋಟಿ ರೂ. ಮೊತ್ದದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
852 tonnesall India levelall time recordcompetitiondetergent productionKSDLmarketing network expansionprivate companiesworth Rs 123.42 crore
0 FacebookTwitterPinterestEmail
admin

previous post
ಲೋಕಸಭಾ ಸ್ಪರ್ಧೆಗೆ ಬಿಜೆಪಿಯಲ್ಲಿ ಪೈಪೋಟಿ
next post
ಧರ್ಮದ ಹೆಸರಲ್ಲಿ ಕ್ಷುಲ್ಲಕ ರಾಜಕೀಯ ಬಿಡಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ