Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಷ್ಟ್ರಶಿಕ್ಷಣ

ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ

by admin January 3, 2024
written by admin January 3, 2024 0 comments 2 minutes read
3FacebookTwitterPinterestEmail
213
ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಆಯೋಜನೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ಬೆಂಗಳೂರು  ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು  ಏರ್ಪಡಿಸಲು  ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ  29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಿದ್ದು,  ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ದೇಶ-ವಿದೇಶಗಳಲ್ಲಿ ಮನ್ನಣೆ  ಪಡೆದಿರುವ ಚಿತ್ರೋತ್ಸವವಾಗಿದೆ.

ವಿದೇಶಿ ಚಿತ್ರಗಳನ್ನು  ಪ್ರದರ್ಶೀಸಲಾಗುವುದಲ್ಲದೆ,  ಕನ್ನಡ ಸೇರಿದಂತೆ  ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು.  ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು  ಅಂದು  ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ ಎಂದು ಅವರು ಹೇಳಿದರು.

ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶ-ವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವವು ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಸಮಿತಿ ಸಭೆಯ  ಮುಖ್ಯಾಂಶಗಳು

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ  (ಮುಖ್ಯಮಂತ್ರಿಗಳಿಂದ ಉದ್ಘಾಟನೆ) ನಡೆಯಲಿದೆ. ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ (ರಾಜ್ಯಪಾಲರಿಂದ ಪ್ರಶಸ್ತಿ ವಿತರಣೆ) ಜರುಗಲಿದೆ.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು.  ಸಮಾರೋಪ ಸಮಾರಂಭವನ್ನು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಕನ್ನಡ ಚಿತ್ರ ಪ್ರದರ್ಶನ

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ  ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bangalorecm siddaramaiahFebruary 29 to March 7Film FestivalInternationalMessages of humanityshould reach society
3 FacebookTwitterPinterestEmail
admin

previous post
ಮುಖ್ಯಮಂತ್ರಿ ಗಾದಿಗೆ ಡಿಕೆಶಿ ರಣತಂತ್ರ
next post
ಕುಂಟು ನೆಪ ಬಿಡಿ, ರೈತರಿಗೆ ಹಣ ಕೊಡಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ