ಲಾಭದ ಹಾದಿಯಲ್ಲಿ ಸಂಸ್ಥೆ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ- ಕೆಎಸ್‌ಡಿಎಲ್ ಆವರಣದಲ್ಲಿ ಸುಸಜ್ಜಿತ ಸರ್ಕಾರಿ ಕಚೇರಿಗಳ ಸಂಕೀರ್ಣ ನಿರ್ಮಿಸಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.
ಸಂಸ್ಥೆ ಸಿಬ್ಬಂದಿ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 100 ವರ್ಷಗಳಿಗೆ ಕಾರ್ಖಾನೆ ವಿಸ್ತರಣೆಗೆ ಅಗತ್ಯವಿರುವ ಜಾಗ ಮೀಸಲಿಟ್ಟು ಸಂಕೀರ್ಣ ನಿರ್ಮಿಸಲಾಗುವುದು ಎಂದರು.
ಕೆಎಸ್‌ಡಿಎಲ್‌ನಿಂದಲೇ ಹಂತ ಹಂತವಾಗಿ ನಿರ್ಮಿಸಲಾಗುವುದು, ಇದರಿಂದ ಸಂಸ್ಥೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಲಿದೆ, ವಾರ್ಷಿಕವಾಗಿ 1,200 ಕೋಟಿ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ, 2030ರ ವೇಳೆಗೆ 5,000 ಕೋಟಿ ರೂ. ಮುಟ್ಟಬೇಕು.
ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ನೀಡಲಾಗುತ್ತಿದೆ, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆ ಸಂಸ್ಥೆಯ ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರಫ್ತು ಮಾಡಲಿದ್ದೇವೆ.