Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನೈಸ್ ಯೋಜನೆ ವಶಪಡಿಸಿಕೊಳ್ಳಿ

by admin January 5, 2024
written by admin January 5, 2024 0 comments 4 minutes read
2FacebookTwitterPinterestEmail
517

ಸರ್ಕಾರಕ್ಕೆ ದೇವೇಗೌಡರ ಒತ್ತಾಯ

ಬೆಂಗಳೂರು:ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಪಡಿಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು, ಕಂಪನಿ ವಶದಲ್ಲಿರುವ 13,404 ಎಕರೆ ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು.

ಈ ಬಗ್ಗೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ, ಈವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂದು ಮಾಜಿ ಪ್ರಧಾನಿ ಅತೀವ ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆ

ಸಿದ್ದರಾಮಯ್ಯ ಅವರಿಗೆ ಏನು ಕಷ್ಟ ಇದೆಯೋ ಗೊತ್ತಿಲ್ಲ. ಅವರು ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಮುಖ್ಯಮಂತ್ರಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಅತ್ಯಂತ ಖಾರವಾಗಿ ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ಧ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ ಎಂದರು. ಈ ವಿಷಯದಲ್ಲಿ ರೈತರ ಪರ ನಿಲ್ಲುವುದಕ್ಕೆ ಮೀನಾಮೇಷ ಎಣಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನೈಸ್ ರಸ್ತೆ ಯೋಜನೆಯಲ್ಲಿ ನಡೆದಿರುವುದು ಎಲ್ಲರಿಗೂ ಗೊತ್ತಿದೆ

ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ, ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ, ಬಡವರಿಗೆ ಇದರಿಂದ ಅನ್ಯಾಯ ಆಗಿದೆ, ನಮ್ಮ ಪಕ್ಷ ಇದರ ವಿರುದ್ಧ ದನಿ ಎತ್ತಿದೆ, ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ.

ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು, ಸದನ ಸಮಿತಿ ವರದಿ ಕೊಟ್ಟಿದೆ ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಅಂತ ವರದಿ ಕೊಟ್ಟಿದೆ. ಆದರೆ ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

2023 ಅಕ್ಟೋಬರ್ 19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ, ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹ ಮಾಡಿದ್ದೆ, ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ದೇವೇಗೌಡ ಅವರು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

13,404 ಎಕರೆ ಮರು ವಶಪಡಿಸಿಕೊಳ್ಳಬೇಕು

13,404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್‌ನಿಂದ ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ, ಈ ಯೋಜನೆಯ ಮೌಲ್ಯ ೭ ಸಾವಿರ ಕೋಟಿ ರೂ. ಅಂತ ಸದನ ಸಮಿತಿಯೇ ವರದಿ ಕೊಟ್ಟಿದೆ. ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ.

ಹಿಂದೆ ಸೋನಿಯಾ ಗಾಂಧಿ ಅವರ ಬಳಿಯೂ ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು ಎಂದು ಮಾಜಿ ಪ್ರಧಾನಿ ಹೇಳಿದರು.

ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ, ಒಳ್ಳೆಯ ರಸ್ತೆ ಆಗುತ್ತದೆ ಅಂತ ಮಹಾತ್ವಕಾಂಕ್ಷೆಯಿಂದ ಮಾಡಿದೆ, ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಅಂತ ಇದನ್ನು ಮಾಡಿದೆ, ಆದರೆ ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವರು, ಸಿದ್ದರಾಮಯ್ಯ ಅವರು ಇದನ್ನು ಸರಿ ಮಾಡಲಿ ಎಂದರು.

ನೈಸ್ ವಿಷಯದಲ್ಲಿ ರಾಜಿ ಇಲ್ಲ

ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ, ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ.

ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಹೆಚ್ಚುವರಿ ಭೂಮಿ ಕೊಡಲು ಆಗುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸಲಾಗಿತ್ತು. ನೈಸ್ ಯೋಜನೆಗೆ ಹೆಚ್ಚುವರಿ ಭೂಮಿ ಕೊಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಯಡಿಯೂರಪ್ಪ ಅವರ ಸರಕಾರ ಪ್ರಮಾಣಪತ್ರ (ಅಫಿಡವಿಟ್) ಸಲ್ಲಿಸಿದ್ದರು.

ಈ ಯೋಜನೆ ದೊಡ್ಡ ವಂಚನೆ ಎಂದು ಯಡಿಯೂರಪ್ಪ ಅವರೇ ಅಫಿಡವಿಟ್ ಹಾಕಿದ್ದರು. ಕುಮಾರಸ್ವಾಮಿ ಈಗಾಗಲೇ ಬಿಜೆಪಿ ಜತೆ ಚರ್ಚೆ ಮಾಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡುತ್ತಾರೆ ಎಂದು ದೇವೇಗೌಡ ವಿವರಿಸಿದರು.

ಸರ್ಕಾರ ಎಷ್ಟು ಹಣ, ಎಲ್ಲಿಗೆ ತೆಗೆದುಕೊಂಡು ಹೋಗಿದೆ

ಪಂಚರಾಜ್ಯ ಚುನಾವಣೆಯಲ್ಲಿ ಈ ಸರಕಾರ ಎಷ್ಟು ಹಣ ಎಲ್ಲಿಗೆ ತೆಗೆದುಕೊಂಡು ಹೋಗಿದೆ ಎನ್ನುವ ಮಾಹಿತಿ ಎಲ್ಲರಿಗೂ ಗೊತ್ತಿದೆ. ಇದು ಕರ್ನಾಟಕ ಜನರ ಸಂಪತ್ತು. ಉಪಮುಖ್ಯಮಂತ್ರಿ ಅವರ ಉದ್ಧಟತನ, ಅವರು ಎಲೆಲ್ಲಿ ಹೋಗಿದ್ದಾರೆ. ಎಷ್ಟು ಹಣ ಸಾಗಿಸಿದ್ದಾರೆ. ಎಷ್ಟು ಹಣವನ್ನು ಚುನಾವಣಾ ಆಯೋಗ ಸೀಜ್ ಮಾಡಿದೆ. ಈ ಹಣ ಹೋಗಿರೋದು ಬೆಂಗಳೂರಿನಿಂದ ಎನ್ನುವುದು ಜನರಿಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ ಕಿಡಿಕಾರಿದರು.

ನೈಸ್ ಮಾತ್ರ ಅಲ್ಲ, ಬೆಂಗಳೂರಿನ ಎಲ್ಲಾ ಸಂಸ್ಥೆಗಳು ಹಾಗೂ ಜಲ ಸಂಪನ್ಮೂಲ ಇಲಾಖೆ ಅವರ ಬಳಿಯೇ ಇದೆ. ಏನೇನು ಆಗುತ್ತಿದೆ ಎಂದು ಹೇಳಿದರೆ ನಾಚಿಕೆ ಆಗುತ್ತದೆ. ದೇಶದ ಬಗ್ಗೆ, ಬಡವರ ಬಗ್ಗೆ ಉಪದೇಶ ಮಾಡುವ ಮುಖ್ಯಮಂತ್ರಿ ಅವರು ಈ ಯೋಜನೆ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ, ನಾನು ಬಡವರ ಪರ ಅಂತಾರೆ, ಅಹಿಂದಾ ಅಂತಾರೆ, ಇದನ್ನು ಯಾಕೆ ಇವರು ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದರು.

ರಾಮನನ್ನು ಪೂಜೆ ಮಾಡುತ್ತೇವೆ, ನಮಗೆ ಭಕ್ತಿ ಇದೆ

ತೆಲಂಗಾಣದಲ್ಲಿ ಮುಸ್ಲಿಂಮರಿಗೆ ಬಜೆಟ್ ಘೋಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಜತೆ ಮಂತ್ರಿ ಅಗಿದ್ದೋರು ನಿತ್ಯ ಏನೋ ಮಾತಾಡ್ತಾರೆ. ಟಿಪ್ಪು ಬಿಟ್ಟು ಬೇರೆ ಏನು ಅಂತ ಮಾತಾಡ್ತಾರೆ ಅವರು, ನಾವು ರಾಮನನ್ನು ಪೂಜೆ ಮಾಡುತ್ತೇವೆ. ಅದರಲ್ಲಿ ನಮಗೇನು ಸಂಕೋಚ ಇಲ್ಲ. ನಮಗೆ ಭಕ್ತಿ ಇದೆ. ದೇವರಲ್ಲಿ ನಂಬಿಕೆ ಇದೆ. ರಾಮನ ಪೂಜೆ ಮಾಡಿದಾಕ್ಷಣ ಬೇರೆ ಸಮುದಾಯಕ್ಕೆ ಅಪಾಯ ಆದರೆ ನಾವು ಅಧಿಕಾರದಲ್ಲಿ ಇದ್ದರೆ ಅದಕ್ಕೆ ರಕ್ಷಣೆ ಕೊಡೋದು ನಮ್ಮ ಜವಾಬ್ದಾರಿ ಎಂದರು.

ಈದ್ಗಾ ಗಲಾಟೆಯಲ್ಲಿ ನನ್ನ ಕೆಲಸ ನಾನು ಮಾಡಿದ್ದೇನೆ. ನಾನು ದರ್ಗಾಗೆ ಹೋಗಿದ್ದೇನೆ, ತಿರುಪತಿಗೆ ಹೋಗಿದ್ದೇನೆ. ಬಿಜೆಪಿ ಜತೆ ಹೋದಾಗ ಸೇಡಿನ ರಾಜಕೀಯ ಸರಿಯಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ನಾವು ಹೇಳಿದ್ದೇವೆ.

ಎನ್‌ಡಿಎ ಮಿತ್ರ ಪಕ್ಷವಾಗಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ, ನಮ್ಮ ಮಿತ್ರ ಪಕ್ಷದ ಬಗ್ಗೆ ಮಾತನಾಡುತ್ತಿದ್ದೇವೆ. ಮುಂದೆಯೂ ಹೇಳುತ್ತೇವೆ ಎಂದು ಮಾಜಿ ಪ್ರಧಾನಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರ ಮೇಲೆ ಹಿಂದಿನ ಕೇಸ್ ರೀ-ಓಪನ್ ಮಾಡಿ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ. ಕಾಂಗ್ರೆಸ್‌ನವರು ಸೇಡಿನ ರಾಜಕೀಯ ಮಾಡಿದ್ದಾರೆ. ಎನ್‌ಡಿಎ ಜತೆ ಇರೋ ನಾವು ಈ ಸಮಯದಲ್ಲಿ ನಮ್ಮ ಅಭಿಪ್ರಾಯ ಹೇಳುವ ಸ್ವಾತಂತ್ರ್ಯ ಇದೆ. ಸೇಡಿನ ರಾಜಕೀಯ ಮೂಲಕ ಇವರು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇಂಥ ಸಮಯದಲ್ಲಿ ನಾವು ಮಾತನಾಡುವ ಅವಶ್ಯಕತೆ ಇದೆ ಎಂದು ಮಾಜಿ ಪ್ರಧಾನಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ

60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳುತ್ತಿದ್ದೇನೆ, ಕರ್ನಾಟಕದಲ್ಲಿ ಇವರು ಅಂತ್ಯ ಕಾಣುತ್ತಿದ್ದಾರೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ. ಈ ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಭವಿಷ್ಯ ನುಡಿದರು.

ಅಲ್ಲಿ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿ ಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ ಎನ್‌ಡಿಎ ಸೋಲಿಸಿ 20 ಸೀಟು ಗೆಲ್ಲುತ್ತೇವೆ ಅಹಂನಿಂದ ಇವೆಲ್ಲ ಸೃಷ್ಟಿ ಮಾಡ್ತಿದ್ದಾರೆ. 20 ಸೀಟು ಗೆಲ್ಲೋದು ಎಂದರೆ ಕನಸು ಮಾತ್ರ.

ಈ ಬಾರಿ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ ಜನರು ಎನ್‌ಡಿಎ ಮೈತ್ರಿಗೆ ಅಭೂತಪೂರ್ವ ತೀರ್ಪು ಕೊಡುತ್ತಾರೆ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres will see the end under siddaramaiah rulehd devegowdaletter to cmmodi will get massive support from karnatakatake back nise road land
2 FacebookTwitterPinterestEmail
admin

previous post
ಕೆಎಸ್‌ಡಿಎಲ್‌ನಲ್ಲಿ ಕಚೇರಿ ಸಂಕೀರ್ಣ
next post
ಸಿಎಂ ಸ್ಥಾನಕ್ಕೆ ಪೈಪೋಟಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ