Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೆಡಿಎಸ್ ಶಾಸಕರಿಗೆ ಸಿಎಂ-ಡಿಸಿಎಂ ಆಮಿಷ

by admin January 7, 2024
written by admin January 7, 2024 2 comments 2 minutes read
3FacebookTwitterPinterestEmail
167
ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ದೇವೇಗೌಡರ ಬಗ್ಗೆ ಮುಖ್ಯಮಂತ್ರಿ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು  ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಆ ಇಬ್ಬರು ನಾಯಕರ ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರು ಇವರ ಮನೆ ಬಾಗಿಲು ತಟ್ಟುತಿದ್ದಾರೆ ಎಂದರು.

31 ಮೀ. ಉದ್ದದ ಯು-ಗರ್ಡರ್ ಸಿದ್ಧ

ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ. ಏನ್ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡ್ತೀವಿ, ಪಕ್ಷಕ್ಕೆ ಬನ್ನಿ ಅಂತಾರೆ.

ಜೆಡಿಎಸ್ ಮುಗಿಸುವುದೇ ಅಜೆಂಡಾ

ಯಾವ ಕಾರಣಕ್ಕೆ ಇದನ್ನು ಮಾಡುತ್ತೀರಿ? ವಿರೋಧ ಪಕ್ಷ ಉಳಿಸೋಕೆ ಮಾಡ್ತಿರೋದಾ? ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಅಡಕತ್ತಿನಲ್ಲಿ ಕಾಂಗ್ರೆಸ್ ಹೈಕಮಾಂಡ್

ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಅನ್ನುವುದು ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ದೇವೇಗೌಡರು ಈಗ ರಾಜ್ಯದಲ್ಲಿ ನಡೆಯುತ್ತಿರುವ  ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡ್ತಾರೆ ಅಂತ ಹೇಳಿದ್ದಾರೆ ಅಷ್ಟೆ. ಡಿಕೆಶಿ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ‌.


ಅತಿಥಿ ಉಪನ್ಯಾಸಕರಿಗೆ ಸಿಎಂ ಬಂಪರ್ ಗಿಫ್ಟ್

 ಗಾಂಧಿಜೀ‌ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ. ಇವರು ಮಾಡ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಹಂಚಿಕೆ ಚರ್ಚೆ ಆಗಿಲ್ಲ

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮುಂದೆ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಉದ್ದೇಶ ಮಾತ್ರ ಇದೆ. ಅದರ ಬಗ್ಗೆ ಚರ್ಚೆ ಆಗಿದೆ. ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಗತ್ಯ ಬಿದ್ದರೆ ಸುಮಲತಾ ಅವರನ್ನೂ ಭೇಟಿ ಆಗುತ್ತೇನೆ

ಮಂಡ್ಯ ಸಂಸದರಾದ ಸುಮಲತಾ ಅವರ ಬೆಂಬಲಿಗ ಸಚ್ಚಿದಾನಂದ ಅವರ ಭೇಟಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಭೇಟಿ ಮಾಡುವ ಅವಶ್ಯಕತೆ ಬಂದರೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ. ತಪ್ಪೇನಿದೆ? ಎಂದರು ಕುಮಾರಸ್ವಾಮಿ.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು‌ ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದ್ರೆ ಕೊಟ್ಟು ನಿಲ್ಲಬೇಕು ಅಂತಾನೂ ಇದ್ದೀವಾ? ಖಂಡಿತಾ ಇಲ್ಲ.

ಸಿಎಂ ಸ್ಥಾನಕ್ಕೆ ಪೈಪೋಟಿ

ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇವೆಲ್ಲಾ ಪ್ರಾರಂಭಿಕ ಹಂತದಲ್ಲಿ ‌ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದರು.

 ಲೋಕಸಭೆಗೆ ಕುಮಾರಸ್ವಾಮಿ ನಿಲ್ಲುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು; ನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CM-DCM lurehd kumaraswamyif necessaryJDS MLAsmeet Sumalathaserious allegation
3 FacebookTwitterPinterestEmail
admin

previous post
31 ಮೀ. ಉದ್ದದ ಯು-ಗರ್ಡರ್ ಸಿದ್ಧ
next post
ಫೆಬ್ರವರಿ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ?

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ