ಫೆ.12ಕ್ಕೆ ವಿಧಾನಮಂಡಲದ ಜಂಟಿ ಅಧಿವೇಶನ
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೂರು ರಾಜಕೀಯ ಪಕ್ಷಗಳು ಚುನಾವಣಾ ಸಿದ್ಧತೆ ಮಾಡಿಕೊಂಡಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನವೇ 2024-25ರ ಮುಂಗಡಪತ್ರ ಮಂಡಿಸಲಿದ್ದಾರೆ. ರಾಜ್ಯ ವಿಧಾನಮಂಡಲದ ಅಧಿವೇಶನವನ್ನು ಫೆಬ್ರವರಿ 12 ರಂದು ಕರೆಯಲು ಸರ್ಕಾರ ತೀರ್ಮಾನಿಸಿದ್ದು, ಅಂದೇ ರಾಜ್ಯಪಾಲರು ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಮುಖ್ಯಮಂತ್ರಿ ಅವರು, ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್ ತಿಂಗಳ ಮಧ್ಯೆ ಭಾಗದಲ್ಲಿ ಕೇಂದ್ರ ಚುನಾವಣಾ ಆಯೋಗ ದೇಶದ 543ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೆ ತರಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮಾರ್ಚ್‌ನಲ್ಲಿ ಮಂಡಿಸಬೇಕಿದ್ದ ಮುಂಗಡಪತ್ರವನ್ನು ಫೆಬ್ರವರಿಯಲ್ಲೇ ಮಂಡಿಸಿ ಲೇಖಾನುದಾನ ಪಡೆಯಲಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಗಳಿಸಲು ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಈಗಿನಿಂದಲೇ ಚುನಾವಣಾ ತಯಾರಿ ನಡೆಸಿವೆ.
ಕೆಆರ್‌ಎಸ್ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ
ಚುನಾವಣಾ ಸಿದ್ಧತೆಗೆ ಬಿಜೆಪಿ ಹಾಗೂ ಜೆಡಿಎಸ್ ಇಂದು ಮುಖಂಡರ ಸಭೆ ನಡೆಸಿದರೆ, ಕಾಂಗ್ರೆಸ್ ಜನವರಿ 10 ರಿಂದ ಮೂರು ದಿನಗಳ ಕಾಲ ಸರಣಿ ಸಭೆ ಹಮ್ಮಿಕೊಂಡಿದೆ. 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಮೂರೂ ಪಕ್ಷಗಳು ಪ್ರತ್ಯೇಕ ಸಮೀಕ್ಷೆ ನಡೆಸಿ, ಸಮರ್ಥ ಅಭ್ಯರ್ಥಿಗಳ ಆಯ್ಕೆ ಮತ್ತು ಮತದಾರರನ್ನು ಓಲೈಸಿಕೊಳ್ಳಲು ಕಾರ್ಯಕ್ರಮ ರೂಪಿಸುತ್ತಿವೆ.
ಇದರ ಮಧ್ಯೆ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ವಿಶ್ವಾಸ ಪಡೆದುಕೊಳ್ಳಲು ಮುಖಂಡರುಗಳು ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ.
ಜೆಡಿಎಸ್ ಜೊತೆಗೂಡಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿರುವ ಬಿಜೆಪಿ ಇಂದು ಇಡೀ ದಿನ ರಾಜ್ಯ ಮುಖಂಡರುಗಳ ಸಭೆ ನಡೆಸಿತು. ಅಭ್ಯರ್ಥಿಗಳ ಆಯ್ಕೆ, ಜೆಡಿಎಸ್ ಜೊತೆ ಹೊಂದಾಣಿಕೆ ಹಾಗೂ ಚುನಾವಣಾ ಪ್ರಚಾರಕ್ಕಾಗಿ ಸಭೆ ಮತ್ತು ರ‍್ಯಾಲಿಗಳನ್ನು ನಡೆಸುವ ಸಂಬಂಧ ಸಭೆ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ಸೀಮಿತ ಸ್ಥಾನಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವ ಜೆಡಿಎಸ್, ತಾವು ಸ್ಫರ್ಧಿಸಬಹುದಾದ ಸಂಭವನೀಯ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಮುಖಂಡರ ಜೊತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಇಡೀ ದಿನ ಸಭೆ ನಡೆಸಿದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಮತಗಳ ಜೊತೆಗೆ ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಆಯಾ ಸಮಾಜಗಳಿಗೆ ಸೇರಿದ ಬೃಹತ್ ಸಮಾವೇಶ ನಡೆಸುವ ತಯಾರಿಯಲ್ಲಿ ಮಗ್ನರಾಗಿದ್ದರು. ಎರಡೂ ಸಮಾವೇಶಗಳನ್ನು ಪಕ್ಷದ ವೇದಿಕೆಯಿಂದ ದೂರವಿಟ್ಟು ಸಮಾವೇಶ ಮಾಡುತ್ತಿರುವುದು ವಿಶೇಷವಾಗಿದೆ.