ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು:ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿರ್ಬಂಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠ ನೀಡಿರುವ ಆದೇಶದಲ್ಲಿ, ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ, ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮ ಎದುರಾಗುವ ಸಾಧ್ಯತೆ ಇದೆ, ಅಣೆಕಟ್ಟೆಗೆ ಐತಿಹಾಸಿಕ ಮೌಲ್ಯವಿದೆ, ಮೈಸೂರು ಮಹಾರಾಜರು ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆ ಬಹಳಷ್ಟಿದೆ ಎಂದು ಅಭಿಪ್ರಾಯಪಟ್ಟಿದೆ.
ಯಾವುದೇ ಚಟುವಟಿಕೆಗಳಿಗೆ ಅವಕಾಶವಿಲ್ಲ
ಕೆಆರ್ಎಸ್ ಡ್ಯಾಂ ನಿರ್ಮಾಣಕ್ಕೆ ಜನರು ರಕ್ತ, ಬೆವರು ಹರಿಸಿದ್ದಾರೆ, ಸರ್.ಎಂ. ವಿಶ್ವೇಶ್ವರಯ್ಯ ಕುರಿತ ತೀ.ತಾ. ಶರ್ಮ ಅವರ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ, ಕೆಆರ್ಎಸ್ಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗಳಿಗೆ ಅವಕಾಶವಿಲ್ಲ.
ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ, ಆದರೆ ಕೆಆರ್ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ, ಅಣೆಕಟ್ಟೆಗೆ ತೊಂದರೆಯಾದರೆ ಆಗುವ ಅನಾಹುತಗಳ ಅರಿವಿದೆಯೇ, ಅಣೆಕಟ್ಟೆಗೆ ತೊಂದರೆಯಾದರೆ ಗಂಭೀರ ಆಪತ್ತು ಎದುರಾಗಲಿದೆಗೀ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
1 comment
[…] ರಾಜ್ಯ […]