Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಚಿವರಿಗೆ ಲೋಕಸಭಾ ಟಾರ್ಗೆಟ್ ಫಿಕ್ಸ್

by KM Shivaraju January 9, 2024
written by KM Shivaraju January 9, 2024 1 comment 1 minutes read
3FacebookTwitterPinterestEmail
260


ಬೇಡಿಕೆ ಬದಿಗಿರಿಸಿ, 26 ಲೋಕಸಭಾ ಕ್ಷೇತ್ರ ಗೆಲ್ಲಿಸಿ

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 28 ಸ್ಥಾನಗಳ ಪೈಕಿ 26 ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಲೇಬೇಕೆಂದು ಕಾಂಗ್ರೆಸ್ ವರಿಷ್ಠರು ಗುರಿ ನೀಡಿದ್ದಾರೆ.

ಚುನಾವಣೆ ಮುಗಿಯುವವರೆಗೂ ಉಪಮುಖ್ಯಮಂತ್ರಿ ಬೇಡಿಕೆ ಸೇರಿದಂತೆ ನಿಮ್ಮೆಲ್ಲಾ ಬೇಡಿಕೆಗಳನ್ನು ಬದಿಗಿರಿಸಿ ಗುರಿ ತಲುಪಲು ಕಾರ್ಯತಂತ್ರ ರೂಪಿಸಿ ಎಂದು ಆದೇಶ ಮಾಡಿದ್ದಾರೆ.

28 ಸಚಿವರಿಗೆ ಕ್ಷೇತ್ರ ಹೊಣೆಗಾರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಹೊರತುಪಡಿಸಿ ಉಳಿದ 28 ಸಚಿವರಿಗೆ ಒಂದೊಂದು ಕ್ಷೇತ್ರದ ಹೊಣೆಗಾರಿಕೆ ನೀಡಿದ್ದಾರೆ.

ಉಸ್ತುವಾರಿ ವಹಿಸಿಕೊಂಡಿರುವ 28 ಸಚಿವರನ್ನು ದೆಹಲಿಗೆ ಬರುವಂತೆ ವರಿಷ್ಠರು ಆದೇಶ ಮಾಡಿದ್ದು, ಇವರಿಗೆ ಚುನಾವಣೆ ಯಾವ ರೀತಿ ಗೆಲ್ಲಬೇಕು ಎಂಬ ಬಗ್ಗೆ ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜನವರಿ 11ರ ಬೆಳಗ್ಗೆ 9 ಗಂಟೆಗೆ ಸಚಿವರಿಗೆ ಪಾಠ ಮಾಡಲಿದ್ದಾರೆ.

ಸಂಪುಟ ಸಭೆ ಮುಂದೂಡಿಕೆ

ಸಚಿವರನ್ನು ವರಿಷ್ಠರು ದೆಹಲಿಗೆ ಕರೆಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಗುರುವಾರ ಬೆಳಗ್ಗೆ 11 ಗಂಟೆಗೆ ಕರೆದಿದ್ದ ಸಂಪುಟ ಸಭೆಯನ್ನು ಮುಂದೂಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಜಯಭೇರಿ ಭಾರಿಸಿದ ನಂತರ ಕಾಂಗ್ರೆಸ್‌ಗೆ ಬಂದ ಮತ ಪ್ರಮಾಣದ ಆಧಾರದ ಮೇಲೆ ಈ ಹಿಂದೆ ವರಿಷ್ಠರು ರಾಜ್ಯ ನಾಯಕರಿಗೆ ಕನಿಷ್ಟ 20 ಸ್ಥಾನಗಳನ್ನು ಗೆಲ್ಲಬೇಕೆಂದು ಗುರಿ ನೀಡಿದ್ದರು.

ಕರ್ನಾಟಕದ ಮಟ್ಟಿಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡು ಈಗಾಗಲೇ ಪ್ರಕ್ರಿಯೆ ಆರಂಭಿಸಿವೆ.

ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್

ಇದನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್ ವರಿಷ್ಠರು 26ರ ಗುರಿಯನ್ನು ರಾಜ್ಯ ನಾಯಕರಿಗೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಸಂಪನ್ಮೂಲದಲ್ಲಿ ಬಲಿಷ್ಠವಾಗಿರುವ ಸಚಿವರನ್ನೇ ಪ್ರತಿ ಕ್ಷೇತ್ರಕ್ಕೂ ನೇಮಕ ಮಾಡಿದ್ದಾರೆ.

ಮೂರು ಉಪಮುಖ್ಯಮಂತ್ರಿ ಬೇಡಿಕೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಗರಕ್ಕೆ ಧಾವಿಸಿದ ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಉಪಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾದ ಸಚಿವರಾದ ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಹಿರಿಯರನ್ನು ತಾವು ತಂಗಿದ್ದ ಹೋಟೆಲ್‌ಗೆ ಕರೆಸಿಕೊಂಡು ಸುದೀರ್ಘ ಚರ್ಚೆ ಮಾಡಿದ್ದಾರೆ.

ಬೇಡಿಕೆ ಸದ್ಯಕ್ಕೆ ಬಿಡಿ

ಬೇಡಿಕೆ ಮತ್ತು ಇತರ ವಿಚಾರಗಳನ್ನು ಸದ್ಯಕ್ಕೆ ಬಿಡಿ, ಬಿಜೆಪಿ-ಜೆಡಿಎಸ್ ಮಣಿಸಲು ಗಮನಹರಿಸಿ ಎಂದು ಕಿವಿಮಾತು ಹೇಳಿದ್ದಾರೆ.

ಅಷ್ಟೇ ಅಲ್ಲ, ಎಐಸಿಸಿ ಅಧ್ಯಕ್ಷರು ಮತ್ತು ಇತರ ಮುಖಂಡರ ಸಮ್ಮುಖದಲ್ಲೇ ಚುನಾವಣಾ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಹಾಗೂ ಉಳಿದ ವಿಚಾರಗಳ ಬಗ್ಗೆ ಮುಕ್ತವಾಗಿ ಸಮಾಲೋಚನೆ ಮಾಡೋಣ ಗುರುವಾರ ದೆಹಲಿಗೆ ಬನ್ನಿ ಎಂದು ಹೇಳಿದ್ದಾರೆ.

ವರಿಷ್ಠರು ನೀಡಿರುವ ಗುರಿಗೆ ಬಲ ನೀಡಲು ಸುರ್ಜೇವಾಲ ನಾಳೆ ಪ್ರದೇಶ ಕಾಂಗ್ರೆಸ್‌ನ ಎಲ್ಲಾ ಹಂತದ ಸಭೆ ಕರೆದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres targetlokasabha election 2024surjevala
3 FacebookTwitterPinterestEmail
KM Shivaraju

previous post
ರೈತರಿಗೆ ಪರಿಹಾರ ನೀಡಿ, ಇಲ್ಲವೇ ರಾಜೀನಾಮೆ ಕೊಡಿ
next post
ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ ಆನ್ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ