Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯಶಿಕ್ಷಣ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ ಆನ್ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

by admin January 9, 2024
written by admin January 9, 2024 0 comments 2 minutes read
7FacebookTwitterPinterestEmail
272
ಏ.18, 19ರಂದು ಕೆಸಿಇಟಿ-24 ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ-24) ನಡೆಸುವ ದಿನಾಂಕವನ್ನು ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಆ ಪ್ರಕಾರ ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮುಂಚೆ ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್ 21ರಂದು ಎನ್ ಡಿ ಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಅದರಂತೆ, ಕೆಸಿಇಟಿ ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ.

ಫೆ. 10ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು

ವೃತ್ತಿಪರ ಕೋರ್ಸುಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅದಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ, ಕೆಸಿಇಟಿ-240 ಪರೀಕ್ಷೆ ತೆಗೆದುಕೊಳ್ಳುವುದಕ್ಕಾಗಿ ಜನವರಿ 10ರಿಂದ (ಬುಧವಾರ) ಫೆಬ್ರುವರಿ 10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಮೆಡಿಕಲ್ / ಡೆಂಟಲ್ / ಆಯುಷ್ / ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೇರಲು ಆಸಕ್ತಿ ಇರುವ ಅಭ್ಯರ್ಥಿಗಳೂ ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಯುಜಿನೀಟ್-2024 ಫಲಿತಾಂಶಗಳ ಪ್ರಕಟಣೆಯ ನಂತರ ಕೆಇಎ ನಲ್ಲಿ ನೋಂದಾಯಿಸಲಾಗಿರುವ ಅಭ್ಯರ್ಥಿಗಳಿಗೆ NEET ಸ್ಕೋರ್ ಮತ್ತು ರೋಲ್ ನಂಬರ್ ದಾಖಲಿಸಲು ಇಂಟರ್‌ಫೇಸ್ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು “ಅರ್ಜಿ ಹಾಗೂ ಪರಿಶೀಲನೆ” ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಲು ಈ ಮುಂಚೆ ಹಿಡಿಯುತ್ತಿದ್ದ ಹೆಚ್ಚಿನ ಸಮಯ ಉಳಿತಾಯವಾಗುತ್ತದೆ ಎಂದು ವಿವರಿಸಲಾಗಿದೆ.

ಹೊಸ ಮಾದರಿಯಲ್ಲಿ, ಅಭ್ಯರ್ಥಿಗಳ ವಿವರಗಳನ್ನು, ಅಂದರೆ, ಶಾಲೆಗಳ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ, ಆದಾಯ ಮುಂತಾದ ವಿವರಗಳನ್ನು SATS ಹಾಗೂ ಕಂದಾಯ ಇಲಾಖೆಯ ವೆಬ್‌ಸರ್ವೀಸ್ ಮುಖಾಂತರ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು.

ಅಭ್ಯರ್ಥಿಗಳು ಪ್ರತ್ಯೇಕವಾಗಿ ದಾಖಲೆಗಳ ಪರಿಶೀಲನೆಗೆ ಭೌತಿಕವಾಗಿ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಪ್ರತಿ ವರ್ಷವೂ ಸುಮಾರು ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ ಪರಿಶೀಲನೆಗಳ ಕಾರ್ಯಗಳು ಈಗ ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ನಡೆಯಲಿವೆ ಎಂದು ತಿಳಿಸಲಾಗಿದೆ.

ಹೀಗಾಗಿ, ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ಭರ್ತಿ ಮಾಡಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಲು ಸೂಚಿಸಲಾಗಿದೆ.

ಪ್ರಾಧಿಕಾರವು ಸುಮಾರು 250 ಕ್ಕೂ ಹೆಚ್ಚು ನುರಿತ ಉಪನ್ಯಾಸಕರುಗಳನ್ನು ಮಾಸ್ಟರ್ ಟ್ರೈನರ್ ಎಂದು ಗುರುತಿಸಿ ಅವರುಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ತರಬೇತಿಯನ್ನು ಈಗಾಗಲೇ ನೀಡಿದೆ.
ಈ ಮಾಸ್ಟರ್ ಟ್ರೈನರ್ ಗಳು, ಪ್ರತಿ ವಿಜ್ಞಾನ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ಗುರುತಿಸಿ ಅವರಿಗೆ “ಕಾಲೇಜು ಟ್ರೈನರ್” ತರಬೇತಿ ನೀಡಿ ಸಜ್ಜುಗೊಳಿಸಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಸಂದೇಹಗಳಿದ್ದಲ್ಲಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿನ ಕಾಲೇಜು ಟ್ರೈನರ್ ಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು ಎಂದೂ ಸೂಚಿಸಲಾಗಿದೆ.

ಮೊಬೈಲ್ ಆ್ಯಪ್ ಅಭಿವೃದ್ಧಿ

ಇದರ ಜೊತೆಗೆ, ಸುಧಾರಣೆಯ ಮತ್ತೊಂದು ಕ್ರಮವಾಗಿ ಕೆಇಎ ಮೊಬೈಲ್ ಆಪ್ ಅಭಿವೃದ್ಧಿಪಡಿಸಿದ್ದು ಇದನ್ನು ಕೆಇಎ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಇದರಿಂದಾಗಿ, ಪರೀಕ್ಷಾ ವೇಳಾಪಟ್ಟಿ, ಸೂಚನೆ, ಅರ್ಜಿ ಪ್ರಕ್ರಿಯೆಯ ಯಾವ ಹಂತದಲ್ಲಿದೆ ಇತ್ಯಾದಿ ಮಾಹಿತಿಯನ್ನು ವಾಟ್ಸಾಪ್ ಮೆಸೇಜ್ ಮೂಲಕವೇ ಪಡೆಯಬಹುದು.
ಇದು, ಅಭ್ಯರ್ಥಿಗಳು ಪದೇಪದೇ ವೆಬ್ಸೈಟ್ ಗೆ ಹೋಗಿ ಪರಿಶೀಲಿಸಬೇಕಾದ ಅಗತ್ಯವನ್ನು ತಪ್ಪಿಸುತ್ತದೆ. ಶುಲ್ಕ ಪಾವತಿ ಹಾಗೂ ಅರ್ಜಿಗೆ ಸಂಬಂಧಿಸಿದ ವಿವರಗಳು ಅಭ್ಯರ್ಥಿಗಳ ಪೋರ್ಟಲ್ (ಕ್ಯಾಂಡಿಡೇಟ್ ಪೋರ್ಟಲ್) ನಲ್ಲಿ ಲಭ್ಯವಿರುತ್ತದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
. on April 18&19from January 10KCET-24 exammobile app developmentonline applicationsubmission allowed
7 FacebookTwitterPinterestEmail
admin

previous post
ಸಚಿವರಿಗೆ ಲೋಕಸಭಾ ಟಾರ್ಗೆಟ್ ಫಿಕ್ಸ್
next post
ನಾಯಕರಿಲ್ಲದ ವಿರೋಧಿ ಒಕ್ಕೂಟ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ