ಎನ್‌ಡಿಎ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ
ಬೆಂಗಳೂರು: ಎನ್‌ಡಿಎ ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸುವ ವಿಪಕ್ಷಗಳ ‘ಐ.ಎನ್.ಡಿ.ಐ.ಎ’ ಒಕ್ಕೂಟ ತನ್ನ ಸಂಚಾಲಕರನ್ನೇ ಆಯ್ಕೆ ಮಾಡಲಾಗುತ್ತಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಇಂದಿಲ್ಲಿ ವ್ಯಂಗ್ಯವಾಡಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಥಾನ ಹಂಚಿಕೆಯೇ ವಿಪಕ್ಷಗಳ ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ ಎಂದರು.
ಜಿಡಿಪಿ ದರ ಶೇ 7.6ಕ್ಕೆ ಏರಿಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದು, ಜಿಡಿಪಿ ದರ ಶೇ 7.6 ಮೀರಿದೆ.
ಮೇ ವೇಳೆಗೆ 45 ಸಾವಿರ ಬ್ಯಾರೆಲ್ ಕಚ್ಚಾ ತೈಲ ಹಾಗೂ ಶೇ. 7ರಷ್ಟು ಗ್ಯಾಸ್ ಉತ್ಪಾದನೆ ಮಾಡಲಿದೆ, 2016ರಲ್ಲಿ ಆರಂಭವಾದ ಉಜ್ವಲ ಯೋಜನೆಯಡಿ 10.50 ಕೋಟಿ ಕುಟುಂಬಕ್ಕೆ ಉಚಿತ ಅಡುಗೆ ಅನಿಲ (ಎಲ್‌ಪಿಜಿ) ಸಂಪರ್ಕ ಒದಗಿಸಲಾಗಿದೆ, ದೇಶದಲ್ಲಿ 2014ರಲ್ಲಿದ್ದ 14 ಕೋಟಿ ಅಡುಗೆ ಅನಿಲ ಸಂಪರ್ಕ ಇಂದು 32 ಕೋಟಿಗೆ ಏರಿಕೆಯಾಗಿದೆ, ಕಂಪ್ರೆಸ್ಡ್ ಬಯೋಗ್ಯಾಸ್ ಸೌಲಭ್ಯವನ್ನೂ ನೀಡಲಾಗಿದೆ.
ಪೆಟ್ರೋಲಿಯಂ ಉತ್ಪನ್ನಗಳ ಎಕ್ಸೈಸ್ ಸುಂಕ ಕಡಿತ
ಜಾಗತಿಕ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಾಗುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಳೆದ 2 ವರ್ಷಗಳಲ್ಲಿ ಕಡಿಮೆ ಆಗಿದೆ, ಪೆಟ್ರೋಲಿಯಂ ಉತ್ಪನ್ನಗಳ ಎಕ್ಸೈಸ್ ಸುಂಕ ಕಡಿಮೆ ಮಾಡಲಾಗಿದೆ.
11 ಕೋಟಿ ಶೌಚಾಲಯ ನಿರ್ಮಿಸಲಾಗಿದೆ, ಆವಾಸ್ ಯೋಜನೆಯಡಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ, ಮಹಿಳೆಯರಿಗೆ ಶೇ. 33 ರಾಜಕೀಯ ಮೀಸಲಾತಿ ಕೊಡುವ ನಿರ್ಧಾರವನ್ನು ಎನ್‌ಡಿಎ ಸರ್ಕಾರ ಕೈಗೊಂಡಿದೆ ಎಂದರು.