Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಚುನಾವಣಾ ರಣತಂತ್ರ: ಕೆಲವು ಸಚಿವರಿಗೆ ಸಿಂಹ ಸ್ವಪ್ನ

by KM Shivaraju January 10, 2024
written by KM Shivaraju January 10, 2024 0 comments 1 minutes read
4FacebookTwitterPinterestEmail
380


10 ವರ್ಚಸ್ವಿ ಮತ್ತು ಪ್ರಭಾವಿಗಳು ಚುನಾವಣಾ ಕಣಕ್ಕೆ

ಬೆಂಗಳೂರು:ಚುನಾವಣಾ ರಣತಂತ್ರ ನಿಪುಣ ಸುನೀಲ್ ಕನಗೋಳು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರಿಗೆ ಸಿಂಹ ಸ್ವಪ್ನವಾಗಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಸ್ಥಾನ ಗಳಿಸಬೇಕೆಂದರೆ ಕನಿಷ್ಟ 10 ವರ್ಚಸ್ವಿ ಮತ್ತು ಪ್ರಭಾವೀ ಸಚಿವರನ್ನು ಚುನಾವಣಾ ಕಣಕ್ಕಿಳಿಸುವಂತೆ ಎಐಸಿಸಿಗೆ ಕನಗೋಳು ವರದಿ ನೀಡಿದ್ದಾರೆ.

ವರಿಷ್ಠರಿಗೆ ರಣತಂತ್ರ ಮಾಹಿತಿ

ಈಗಾಗಲೇ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೂರ‍್ನಾಲ್ಕು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧಿನಾಯಕ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ವರದಿ ಆಧಾರದ ಮೇಲೆ ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲ ಯಾವ ಸಚಿವರನ್ನು ಯಾವ ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದರೆ ಪಕ್ಷಕ್ಕೆ ಯಾವ ರೀತಿ ಲಾಭವಾಗುತ್ತದೆ ಎಂಬ ಪರಿಪೂರ್ಣ ಮಾಹಿತಿ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಕನಗೋಳು ನಡೆಸಿದ ಸಮೀಕ್ಷೆಗಳಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಲ್ಲದೆ ಇತ್ತೀಚೆಗೆ ತೆಲಂಗಾಣ ರಾಜ್ಯದಲ್ಲೂ ಕನಗೋಳು ತೆರೆಮರೆಯಲ್ಲಿ ಕೆಲಸ ಮಾಡಿದ್ದರು.

ಎಐಸಿಸಿಗೆ ಚುನಾವಣಾ ಪೂರ್ವ ವರದಿ

ಕರ್ನಾಟಕಕ್ಕೆ ಸೀಮಿತವಾಗಿ ಕನಗೋಳು ಅವರಿಂದಲೇ ಚುನಾವಣಾ ಪೂರ್ವ ವರದಿಯನ್ನು ಎಐಸಿಸಿ ಪಡೆದುಕೊಂಡಿದೆ.

ಕನಗೋಳು ವರದಿಗೆ ರಾಹುಲ್ ಗಾಂಧಿ ಹೆಚ್ಚು ಮಾನ್ಯತೆ ನೀಡುತ್ತಾರೆ, ವರದಿ ತಲುಪುತ್ತಿದ್ದಂತೆ ನಗರಕ್ಕೆ ಧಾವಿಸಿ ಕಳೆದ ಮೂರು ದಿನಗಳಿಂದ ಬಿಡಾರ ಹೂಡಿರುವ ಸುರ್ಜೇವಾಲ, ವರದಿಯಲ್ಲಿ ಹೆಸರಿಸಿರುವ ಸಚಿವರುಗಳನ್ನು ತಾವು ತಂಗಿದ್ದ ಹೋಟೆಲ್‌ಗೆ ಕರೆಸಿಕೊಂಡು ಚರ್ಚೆ ಮಾಡಿ, ನೀವು ಪಕ್ಷದ ತೀರ್ಮಾನಕ್ಕೆ ಯಾವುದೇ ತ್ಯಾಗಕ್ಕೂ ಸಿದ್ಧವಾಗಿರುವಂತೆ ತಿಳಿಸಿದ್ದಾರೆ.

ಚುನಾವಣಾ ತಂತ್ರ ಮಾಂತ್ರಿಕನ ವರದಿಯಂತೆ ಕೆಲವು ಸಚಿವರಿಗೆ ಒಳ್ಳೆ ಕೆಲಸ ಮಾಡುತ್ತಿದ್ದೀರಿ ಎಂದು ಶಹಬ್ಬಾಸ್‌ಗಿರಿಯೂ ನೀಡಿದ್ದಾರೆ.

ನಾಳೆ ದೆಹಲಿಯಲ್ಲಿ ಸಭೆ

ಚುನಾವಣಾ ಕಣಕ್ಕಿಳಿಯಬೇಕೆಂಬ ಸಂಭವನೀಯ ಸಚಿವರಿಗೆ ನಾಳೆ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ಬದ್ಧರಾಗಿ ಎಂದು ಹೇಳಿ ಕಳುಹಿಸಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಹೊರತುಪಡಿಸಿ ಉಳಿದ ಸಂಭವನೀಯ ಸಚಿವರಿಗೆ ಮಂತ್ರಿ ಸ್ಥಾನ ಬಿಡಲು ಕಿಂಚಿತ್ತೂ ಮನಸ್ಸಿಲ್ಲ. ಜೊತೆಗೆ ದೆಹಲಿ ರಾಜಕಾರಣವೂ ಬೇಡವಾಗಿದೆ.

ಕನಗೋಳು ನೀಡಿರುವ ವರದಿಯಂತೆ ನಮ್ಮನ್ನು ಚುನಾವಣಾ ಕಣಕ್ಕಿಳಿಯಲು ವರಿಷ್ಠರು ತಾಕೀತು ಮಾಡಿದರೆ ಅದರಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬ ಲೆಕ್ಕಾಚಾರ ಆರಂಭಿಸಿದ್ದಾರೆ. ಗ್ಯಾರಂಟಿ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದ ಕನಗೋಳು ನಮಗೇ ಮುಳುವಾಗಿದ್ದಾನೆ ಎಂದು ಪರಿತಪಿಸುತ್ತಿದ್ದಾರೆ.

ಸಭೆ ನಂತರ ಸಂಭವನೀಯರ ತೀರ್ಮಾನ

ನಾಳೆ ದೆಹಲಿ ಸಭೆ ನೋಡಿದ ನಂತರ ತೀರ್ಮಾನ ಕೈಗೊಳ್ಳಲು ಸಂಭವನೀಯರು ನಿರ್ಧರಿಸಿದ್ದಾರೆ.

ಉನ್ನತ ಮೂಲಗಳ ಪ್ರಕಾರ ವರದಿಯಲ್ಲಿ ಕೆ.ಎಚ್.ಮುನಿಯಪ್ಪ (ಕೋಲಾರ-ಮೀಸಲು), ಚಲುವರಾಯಸ್ವಾಮಿ(ಮಂಡ್ಯ), ಡಾ.ಎಚ್.ಸಿ. ಮಹದೇವಪ್ಪ (ಚಾಮರಾಜನಗರ-ಮೀಸಲು), ಕೆ.ಎನ್. ರಾಜಣ್ಣ (ಚಿತ್ರದುರ್ಗ-ಮೀಸಲು), ಈಶ್ವರ ಖಂಡ್ರೆ (ಬೀದರ್), ಸತೀಶ್ ಜಾರಕಿಹೊಳಿ (ಬೆಳಗಾವಿ), ಎಚ್.ಕೆ ಪಾಟೀಲ್ (ಹಾವೇರಿ) ಸೇರಿದಂತೆ 10 ಸಚಿವರನ್ನು ಹೆಸರಿಸಲಾಗಿದೆ.

ಅಲ್ಲದೆ, ಕೆಲವು ವರ್ಚಸ್ವಿ ಹಾಗೂ ಹಿರಿಯ ಶಾಸಕರನ್ನು ನಿರ್ದಿಷ್ಟ ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ವರದಿಯಲ್ಲಿ ಕನಗೋಳು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres plandelhi meetinglokasabha election 2024ministers to contest electionsujrevala
4 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಕೊಡುಗೆ
next post
ವರಿಷ್ಠರ ನಿರ್ಧಾರಕ್ಕೆ ಸಿದ್ದರಾಮಯ್ಯ ಬೆಂಬಲ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ