Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಕೊಡುಗೆ

by admin January 10, 2024
written by admin January 10, 2024 0 comments 1 minutes read
4FacebookTwitterPinterestEmail
191


ಲೋಕಸಭೆ ಚುನಾವಣೆಗೆ ಭಾರೀ ತಯಾರಿ

ಬೆಂಗಳೂರು:ಲೋಕಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರಪೂರ ಕೊಡುಗೆ ನೀಡಿದ್ದಾರೆ.

ಬರುವ ಮಾರ್ಚ್ ಅಂತ್ಯದ ವೇಳೆಗೆ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತಲಾ 25 ಕೋಟಿ ರೂ. ಅನುದಾನ, ಸರ್ಕಾರದ ವಿವಿಧ ಸಂಸ್ಥೆಗಳಿಗೆ ತಕ್ಷಣವೇ ಕಾರ್ಯಕರ್ತರ ನೇಮಕ ಮಾಡಲಿದ್ದು, ಸದಸ್ಯತ್ವದ ಆಡಳಿತಾವಧಿ ಎರಡು ವರ್ಷ ಇರಲಿದೆ.

ಗ್ಯಾರಂಟಿ ಅನುಷ್ಟಾನ ಸಮಿತಿ ರಚನೆ

ಗ್ಯಾರಂಟಿ ಯೋಜನೆಗಳಿಗೆ ಎದುರಾಗಿರುವ ಅಪಪ್ರಚಾರಕ್ಕೆ ಇತಿಶ್ರೀ ಹಾಡಿ ಕೆಳಹಂತದಲ್ಲಿ ಪ್ರಚಾರ ದೊರಕಿಸಲು ರಾಜ್ಯ, ಜಿಲ್ಲಾ ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ಯಾರಂಟಿಗಳ ಅನುಷ್ಟಾನ ಸಮಿತಿ ರಚಿಸಲಾಗುವುದು ಎಂದು ಘೋಷಿಸಿದ್ದಾರೆ.

ಕಾರ್ಯಕರ್ತರಿಗೆ ಆಡಳಿತದಲ್ಲೂ ಅಧಿಕಾರ

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಸಿದ್ಧತಾ ಸಭೆಯಲ್ಲಿ ಪಕ್ಷದ ವಿವಿಧ ಹಂತದ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕರ್ತರಿಗೆ ಆಡಳಿತದಲ್ಲೂ ಅಧಿಕಾರ ನೀಡುವ ಘೋಷಣೆ ಮಾಡಿದರು.

ಚುನಾವಣೆಯನ್ನು ಗಂಭಿರವಾಗಿ ತೆಗೆದುಕೊಳ್ಳಿ, 28 ಕ್ಷೇತ್ರಗಳ ಪೈಕಿ 26ರಲ್ಲಿ ಗೆಲ್ಲಲೇಬೇಕು ಎಂದು ತಾಕೀತು ಮಾಡಿದರು.

ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು, ಇವರೆಲ್ಲರೂ ಕಾರ್ಯಕರ್ತರೇ ಆಗಿರುತ್ತಾರೆ.

ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ, ಇವರಿಗೆ ಗೌರವಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಅಪಪ್ರಚಾರಗಳಿಗೆ ತಕ್ಕ ಉತ್ತರ

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ, ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

ಶಾಸಕರಲ್ಲದವರಿಗೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು, ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು.

ಕೆಲವು ಶಾಸಕರಿಗೆ, ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಸದಸ್ಯತ್ವ ಅವಧಿ ಎರಡು ವರ್ಷ ಇರಲಿದೆ. ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದರು.

26 ಸೀಟು ಗೆಲ್ಲಲೇಬೇಕು

ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟನ್ನಾದರೂ ಗೆಲ್ಲಬೇಕು.

ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ, ಅಪಪ್ರಚಾರಗಳಿಂದ ನಾವು ಯಾರೂ ಹತಾಶರಾಗಬಾರದು, ಸಕಾರಾತ್ಮಕವಾಗಿರಬೇಕು ಎಂದು ಮುಖ್ಯಮಂತ್ರಿ ಕಿವಿಮಾತು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres meetlokasabha election target 28 seatssiddaramaiah gift to party workers
4 FacebookTwitterPinterestEmail
admin

previous post
ನಾಯಕರಿಲ್ಲದ ವಿರೋಧಿ ಒಕ್ಕೂಟ
next post
ಚುನಾವಣಾ ರಣತಂತ್ರ: ಕೆಲವು ಸಚಿವರಿಗೆ ಸಿಂಹ ಸ್ವಪ್ನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ