78
ಮುಂದೆ ಪಶ್ಚಾತ್ತಾಪ ಪಡುತ್ತಾರೆ
ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಆಹ್ವಾನವನ್ನು ಕಾಂಗ್ರೆಸ್ ಮುಖಂಡರು ತಿರಸ್ಕರಿಸಿರುವುದು ಅತ್ಯಂತ ದುರ್ದೈವದ ಸಂಗತಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಲುವನ್ನು ಖಂಡಿಸುತ್ತೇವೆ, ರಾಮ ರಾಜ್ಯ, ರಾಮನ ಕನಸು ನನಸು ಆಗಬೇಕಿದೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ, ಇದು ಅಕ್ಷಮ್ಯ ಅಪರಾಧ ಎಂದರು.
ರಾಮಮಂದಿರ ಉದ್ಘಾಟನೆಗೆ ಏಕೆ ಹೋಗುತ್ತಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಬೇಕು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ, ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದರು.