Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾವೇರಿ ಜಲ ಸಂಕಷ್ಟ: ಪ್ರಧಾನಿಯಿಂದ ಮಾತ್ರ ಪರಿಹಾರ

by KM Shivaraju January 13, 2024
written by KM Shivaraju January 13, 2024 0 comments 3 minutes read
4FacebookTwitterPinterestEmail
237

ಲೋಕಸಭಾ ಚುನಾವಣಾ ನಂತರ ಇತ್ಯರ್ಥ: ದೇವೇಗೌಡ ವಿಶ್ವಾಸ

ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ, ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದಿಂದ ನೀರು ಕೊಡಿಸಿ ಎಂದು ಅರ್ಜಿ ಹಾಕುತ್ತಾರೆ, ನಮ್ಮ ಬಳಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದರೂ ಪ್ರಯೋಜನ ಆಗಿಲ್ಲ, ಕಾವೇರಿ ಪ್ರಾಧಿಕಾರದವರು ಯಾವತ್ತು ಕೂಡ ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತ ನೋಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ರಾಜಕೀಯ ಬಿಟ್ಟು ಹೋರಾಡಬೇಕು:

ಕಾವೇರಿ ಸಮಸ್ಯೆಗೆ ಪರಿಹಾರ ಇದೆ, ಪ್ರಧಾನಿ ಮೋದಿ ಅವರಿಗೆ ನಮಗೆ ಆಗಿರುವ ಅನ್ಯಾಯ ಮನ ಮುಟ್ಟುವಂತೆ ನಾವು ಒಟ್ಟಾಗಿ ಹೋರಾಡಬೇಕು, ಇದರಲ್ಲಿ ರಾಜಕೀಯ ಇರಬಾರದು, ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಬೇಕು, ನಾನು ಇನ್ನೂ ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ, ಹೊರಾಡುತ್ತೇನೆ, ನಾನು ಸಾಯುವವರೆಗೂ ಕಾವೇರಿ ಬಗ್ಗೆ ಹೋರಾಟ ಮಾಡುತ್ತೇನೆ, ರಾಜ್ಯದ ಜನರಿಗೆ ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ. ನನ್ನ ಕೊನೆಯುಸಿರು ಇರೋವರೆಗೂ ಹೋರಾಟ ಮಾಡ್ತೀನಿ ಎಂದು ಮಾಜಿ ಪ್ರಧಾನಿ ಗದ್ಗದಿತರಾದರು.

ನಾನು ಸಂಸತ್ ಅಧಿವೇಶನದಲ್ಲಿ ಭಾಗವಹಿಸುತ್ತೇನೆ. ಕಾವೇರಿ ವಿಚಾರವನ್ನು ನಾನು ಸಂಸತ್‌ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಕಾವೇರಿ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಬೇಕು ಅಂತ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇನೆ.

ನೀರು ಇಲ್ಲದಿದ್ದರೂ ನೀರು ಬಿಡಿ ಎನ್ನುವುದು ರಾಜ್ಯಕ್ಕೆ ಮರಣಶಾಸನ

ನಮ್ಮ ಜಲಾಶಯಗಳಲ್ಲಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅನ್ನೋದು ಕರ್ನಾಟಕಕ್ಕೆ ಮರಣಶಾಸನ, ತಮಿಳುನಾಡಿನವರಿಗೆ ರಾಜಕೀಯ ಶಕ್ತಿ ಇದೆ. ಹೀಗಾಗಿ ನೀರು ತೆಗೆದುಕೊಂಡು ಹೋಗ್ತಿದ್ದಾರೆ. ಆದರೆ, ನ್ಯಾಯ ಕೊಡಬೇಕಾದ ಕಾವೇರಿ ಪ್ರಾಧಿಕಾರ ನಮಗೆ ಅನ್ಯಾಯ ಮಾಡುತ್ತಿದೆ ಎಂದರು.

ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಪ್ರತಿಯೊಂದು ಅಂಶವನ್ನು ನಾನು ಮೋದಿ ಅವರ ಗಮನಕ್ಕೆ ತಂದಿದ್ದೇನೆ. ಮೋದಿ ಅವರು ಕೂಡಲೇ ಎಲ್ಲಾ ಮಾಡಲು ಆಗುವುದಿಲ್ಲ, ನಾವೆಲ್ಲರೂ ಈ ಬಗ್ಗೆ ಹೋರಾಟ ಮಾಡುತ್ತೇವೆ, ಮಳೆ ಇಲ್ಲದೆ ಹೋದರೂ ನೀರು ಬಿಡಿ ಎಂದು ಅದೇಶ ಮಾಡುವುದು ಸರಿಯಲ್ಲ. ನಮಗೆ ನಿರಂತರ ಅನ್ಯಾಯ ಆಗಿದೆ ಎಂದು ಅವರು ನೊಂದು ಹೇಳಿದರು.

ಜಲ ಸಂಪನ್ಮೂಲ ಸ್ಥಾಯಿ ಸಮಿತಿಗೆ ಮಾಹಿತಿ ಕೊಟ್ಟಿದ್ದೇನೆ

ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದೆ, ಹೈಡ್ರೋ ಪವರ್ ಜನರೇಷನ್, ಕುಡಿಯುವ ನೀರಿನ ಬಗ್ಗೆಯೂ ಚರ್ಚೆ ಮಾಡಿದ್ದೇವೆ, ಸಮಿತಿ ಅಧ್ಯಕ್ಷರು ಭುವನೇಶ್ವರದಿಂದ ಸಭೆ ಪ್ರಾರಂಭ ಮಾಡಿ ನಮ್ಮ ರಾಜ್ಯಕ್ಕೆ ಬಂದಿದ್ದರು, ನಮ್ಮ ರಾಜ್ಯದಿಂದ ನಾನು, ಡಿ.ಕೆ.ಸುರೇಶ್, ಶಿವಕುಮಾರ್ ಉದಾಸಿ ಸದಸ್ಯರು, ಮೊದಲ ಸಭೆಯಲ್ಲಿ ನಾನು, ಡಿ.ಕೆ.ಸುರೇಶ್, ಉದಾಸಿ ಭಾಗವಹಿಸಿದ್ದೆವು.

ಈ ಸಭೆಯಲ್ಲಿ ಕೊಡಗು ಸೇರಿ ಕಾವೇರಿ ಜಲಾಶಯದ ಹತ್ತು ಜಿಲ್ಲೆಗಳಲ್ಲಿ ರೈತರಿಗೆ ಉಂಟಾಗಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ನಮ್ಮ ರಾಜ್ಯಕ್ಕೆ 8 ಸಾವಿರ ಕೋಟಿ ರೂ. ಕೃಷ್ಣ ಜಲಾನಯನ ಪ್ರದೇಶದ ಯೋಜನೆಗಳಿಗೆ ಕೇಂದ್ರದಿಂದ ಬಂದಿತ್ತು. ಆದರೆ, ಕಾವೇರಿ ಜಲಾನಯನ ಯೋಜನೆಗೆ ಯಾವುದೇ ಹಣ ಬಂದಿಲ್ಲ. ಈ ಬಗ್ಗೆ ಸಮಿತಿ ಕೇಂದ್ರದ ಗಮನಕ್ಕೆ ತರಬೇಕು. ಇದರ ಬಗ್ಗೆ ನಾನು ಅವರ ಗಮನಕ್ಕೆ ತಂದಿದ್ದೇವೆ ಎಂದರು.

ಬೆಂಗಳೂರಿಗೆ ಕಾದಿದೆ ಜಲ ಸಂಕಟ

ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ದೇಶದ ಎಲ್ಲ ಜನರಿಗೆ ಉದ್ಯೋಗ, ಜೀವನೋಪಾಯ ನೀಡಿ ಸಲಹುತ್ತಿದೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ತಂದರೆ ಮಾತ್ರ ನಗರದ ನೀರಿನ ಬವಣೆ ತಪ್ಪಿಸಬಹುದು. ಇಲ್ಲವಾದರೆ, ಬೆಂಗಳೂರು ನಗರ ಅತಿ ದೊಡ್ಡ ಜಲ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದೆ ಎಂದು ಮಾಜಿ ಪ್ರಧಾನಿ ತೀವ್ರ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಜನಸಂಖ್ಯೆ ಸದ್ಯಕ್ಕೆ 135 ಲಕ್ಷವಿದ್ದು, 2044ರ ವೇಳೆ ಈ ಪ್ರಮಾಣ 3 ಕೋಟಿ ಮೀರಲಿದೆ. ಇಷ್ಟು ದೊಡ್ಡ ಪ್ರಮಾಣದ ಜನಸಂಖ್ಯೆಗೆ 64 ಟಿಎಂಸಿ ನೀರಿನ ಅಗತ್ಯ ಇದೆ.

ತಮಿಳುನಾಡಿಗೆ ದೈತ್ಯ ರಾಜಕೀಯ ಶಕ್ತಿ ಇದೆ. ಅವರಿಗೆ ಎಷ್ಟು ನೀರು ಕೊಟ್ಟರು ಸಾಲದು. ತಮಿಳುನಾಡಿನಲ್ಲಿ ಎಲ್ಲಾ ಕಡೆ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ. ಅವರಿಗೆ ಸಮೃದ್ಧವಾಗಿ ಮಳೆ ಬಂದರೂ ನೀರು ಬೇಕು ಎಂದು ಕೇಳುತ್ತಾರೆ.

ತಮಿಳುನಾಡಿನ ನೀರಾವರಿ ಬಗ್ಗೆ ಕೃಷಿ ವಿಜ್ಞಾನಿ ಸ್ವಾಮಿನಾಥನ್ ವರದಿ ಕೊಟ್ಟಿದ್ದಾರೆ, ಅವರು ವಾರ್ಷಿಕ 3 ಬೆಳೆ ಅರಾಮವಾಗಿ ಬೆಳೆಯುತ್ತಾರೆ, ನಮಗೆ ಒಂದು ಬೆಳೆ ಬೆಳೆಯುವುದಕ್ಕೆ ಕೂಡ ಆಗುತ್ತಿಲ್ಲ.

ತಮಿಳುನಾಡಿನಲ್ಲಿ ಕುರುವೈ, ಸಾಂಬಾ, ತಾಲಾಡಿ ಹಾಗೂ ಇನಾ ಬೇಸಾಯ ಸೇರಿದಂತೆ ಒಟ್ಟು 24.71 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅದೇ ಕರ್ನಾಟಕಕ್ಕೆ ಬಂದರೆ, ಎಲ್ಲಾ ರೀತಿಯ ಬೆಳೆಗಳನ್ನು ಸೇರಿಸಿದರೂ 18.85 ಲಕ್ಷ ಎಕರೆ ಮೀರುವುದಿಲ್ಲ ಎಂದು ಮಾಜಿ ಪ್ರಧಾನಿ ಅಂಕಿ ಅಂಶಗಳ ಸಮೇತ ವಿವರಣೆ ನೀಡಿದರು.

ಕಾವೇರಿ ಜಲ ವಿವಾದ ಮಂಡಳಿ ಏಕಪಕ್ಷೀಯವಾಗಿ 1991ರಲ್ಲಿ ಮಧ್ಯಂತರ ಆದೇಶ ನೀಡಿ, ಕರ್ನಾಟಕ ರಾಜ್ಯ ತನ್ನ ನೀರಾವರಿ ಅಚ್ಚುಕಟ್ಟನ್ನು 11.20 ಲಕ್ಷ ಹೆಕ್ಟೇರ್‌ಗೆ ಸೀಮಿತಗೊಳಿಸುವಂತೆ ಮತ್ತು ತಮಿಳುನಾಡಿನ 205 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಆದೇಶಿಸಿರುವುದರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ.

ಕಾವೇರಿ ಕಣಿವೆಯಲ್ಲಿ ಕೃಷ್ಣರಾಜ ಸಾಗರ, ಹಾರಂಗಿ, ಕಬಿನಿ, ಹೇಮಾವತಿ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿವರ್ಷ ಜೂನ್ ತಿಂಗಳಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 177.25 ಟಿಎಂಸಿ ನೀರು ಬಿಡಬೇಕು ಎನ್ನುವ ಆದೇಶದಿಂದ ಕ್ಲಿಷ್ಟ ಮತ್ತು ಬರಗಾಲದಲ್ಲಿ ಕರ್ನಾಟಕ ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ ಬಗ್ಗೆಯೂ ಸಮಿತಿ ಗಮನಕ್ಕೆ ತರಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hd devegowdapmo
4 FacebookTwitterPinterestEmail
KM Shivaraju

previous post
ಸಂಚಾರ ನಿಯಂತ್ರಣಕ್ಕೆ ಜಾಗತಿಕ ತಂತ್ರಜ್ಞಾನ
next post
ಕೆಮ್ಮು, ಕಫ ನಿವಾರಣೆಗೆ ‘ವನತುಳಸಿ’ ರಾಮಬಾಣ!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ