Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಆಸ್ತಿ ತೆರಿಗೆ ಕಡಿತಕ್ಕೆ ಚಿಂತನೆ

by admin January 16, 2024
written by admin January 16, 2024 1 comment 2 minutes read
5FacebookTwitterPinterestEmail
210

ಮನೆ ಬಾಗಿಲಿಗೇ ಸ್ವತ್ತಿನ ದಾಖಲೆ ಉಚಿತ ರವಾನೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ಬರುತ್ತಿದ್ದು, 30 x 40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

“ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಬಡವರಿಗೆ ಒಂದು ಲಕ್ಷ ಮನೆ ಕಟ್ಟಿಕೊಡುವುದಾಗಿ ಹೇಳಿದ್ದು, ಯಾರಿಗೂ ಮನೆ ಸಿಕ್ಕಿಲ್ಲ. ಈ ಬಗ್ಗೆ ಅನೇಕರು ಮನವಿ ಸಲ್ಲಿಸಿದ್ದು, ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ವಸತಿ ಹಂಚಿಕೆ ಮಾಡಲಾಗುವುದು, ಕೆಲವರು ಹಣ ಕಟ್ಟಿದ್ದು, ಮತ್ತೆ ಕೆಲವರು ಹಣ ಕಟ್ಟದೆ ವಿನಾಯಿತಿ ಕೇಳುತ್ತಿದ್ದಾರೆ ತಿಳಿಸಿದ್ದಾರೆ.

ದಂಡ ಎಷ್ಟು ಸಾಧ್ಯವೋ ಅಷ್ಟು ಕಡಿಮೆ

ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟೀಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲಾ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

2020ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಅದಕ್ಕೆ ತಿದ್ದುಪಡಿ ತರಬೇಕಿದೆ, ಕೆಲವೇ ದಿನಗಳಲ್ಲಿ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡಲಾಗುವುದು.

ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಯಾರು ಎಷ್ಟು ತೆರಿಗೆ ಕಟ್ಟುತ್ತಿರುವರೋ, ಅವರಿಂದ ಅಷ್ಟನ್ನೇ ಕಟ್ಟಿಸಿಕೊಳ್ಳಿ. ಯಾರಾದರೂ ಹೆಚ್ಚುವರಿ ತೆರಿಗೆ ಪಾವತಿ ಮಾಡಿದ್ದರೆ ಮುಂದಿನ ವರ್ಷ ಅದನ್ನು ಸರಿದೂಗಿಸಲು ಸೂಚಿಸಬೇಕಾಗಿದೆ.

ಜನರಿಗೂ ಅನುಕೂಲ, ಪಾಲಿಕೆಗೂ ಆದಾಯ

ಎಲ್ಲರೂ ಆಸ್ತಿ ತೆರಿಗೆ ವ್ಯಾಪ್ತಿಗೆ ಬರಬೇಕು, ಜನರಿಗೂ ಅನುಕೂಲ ಆಗಬೇಕು, ಪಾಲಿಕೆಗೂ ಆದಾಯ ಬರಬೇಕು, ತೆರಿಗೆ ಹಣವಿಲ್ಲದೆ ಬೆಂಗಳೂರು ಅಭಿವೃದ್ಧಿ ಅಸಾಧ್ಯ, ಇಷ್ಟು ದಿನ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ ಅಳವಡಿಸಿಕೊಂಡು ಬಂದಿದ್ದೇವೆ.

ಈ ವ್ಯವಸ್ಥೆಯಲ್ಲಿ ಆಸ್ತಿಗೆ ತಕ್ಕಂತೆ ಜನ ತೆರಿಗೆ ಪಾವತಿ ಮಾಡುತ್ತಿಲ್ಲ, ಮೂರು ಅಂತಸ್ತಿನ ಮನೆ ಇದ್ದರೆ ಒಂದು ಅಂತಸ್ತು ಎಂದು ತೋರಿಸಿ ಕಡಿಮೆ ತೆರಿಗೆ ಕಟ್ಟುತ್ತಿದ್ದಾರೆ, ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ.

ಅಧಿಕಾರಿಗಳು ತೆರಿಗೆದಾರರಿಗೆ ಸಹಕಾರ ನೀಡದ ಕಾರಣ ನಮ್ಮ ಬಳಿ ಬರುತ್ತೀರಿ, ನಿಮ್ಮ ವೈಯಕ್ತಿಕ ಸಮಸ್ಯೆ, ಪ್ರದೇಶದ ಸಮಸ್ಯೆ ಹೊತ್ತು ತಂದಿದ್ದೀರಿ. ಎಲ್ಲರ ಸಮಸ್ಯೆ ಆಲಿಸುತ್ತೇವೆ. ನಿಮ್ಮ ಅಹವಾಲುಗಳನ್ನು ನೋಂದಣಿ ಮಾಡಿಕೊಳ್ಳಿ. ನಿಮ್ಮ ಹೆಸರು, ಸಮಸ್ಯೆ ಹಾಗೂ ದೂರವಾಣಿ ಸಂಖ್ಯೆ ನಮೂದಿಸಿ.

ಅಹವಾಲು ಬಗೆಹರಿಸಲು ಪ್ರತ್ಯೇಕ ತಂಡ ರಚಿಸುತ್ತೇವೆ. ನಿಮ್ಮ ಅರ್ಜಿಗಳನ್ನು ವಿಂಗಡಿಸಿ, ಕಾನೂನು ವ್ಯಾಪ್ತಿಯಲ್ಲಿ ಬಗೆಹರಿಸುತ್ತೇವೆ, ನಿಮ್ಮ ದೂರವಾಣಿ ಸಂಖ್ಯೆಗೆ ಪಾಲಿಕೆ ಅಧಿಕಾರಿಗಳು ಸಂಪರ್ಕಿಸುತ್ತಾರೆ.

ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ರಸ್ತೆಗಳಿಗೆ ೨ ಸಾವಿರ ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನಲ್ಲಿ ನಿತ್ಯ 55 ಲಕ್ಷ ವಾಹನ ಸಂಚಾರ ಮಾಡುತ್ತಿವೆ.

ಆಸ್ತಿ ತೆರಿಗೆ ಮತ್ತು ಪಾದಚಾರಿ ಮಾರ್ಗ ವಿಚಾರವಾಗಿ ಹೈಕೋರ್ಟ್ ಆದೇಶ ಇದೆ, ಆದೇಶ ಪಾಲನೆ ಆಗದಿದ್ದರೆ ಪಾಲಿಕೆ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ.

ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಸಿಕೊಂಡು, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು. ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕಿಕೊಂಡರೆ ಜನ ಸಾಮಾನ್ಯರು ಎಲ್ಲಿ ಓಡಾಡಬೇಕು ಎಂದು ಪ್ರಶ್ನಿಸಿದರು.

ಹೊಸ ಜಾಹೀರಾತು ನೀತಿ

ಅನಧಿಕೃತ ಜಾಹೀರಾತು ಫ್ಲೆಕ್ಸ್ ವಿರುದ್ಧ ಪ್ರಕರಣ ದಾಖಲಿಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಯಾವುದೇ ಪಕ್ಷದವರಾಗಿರಲಿ, ಎಲ್ಲ ಅನಧಿಕೃತ ಫ್ಲೆಕ್ಸ್ ತೆರವು ಮಾಡಬೇಕು, ಮುಂದೆ ದಿನಗಳಲ್ಲಿ ಇದರ ನಿಯಂತ್ರಣಕ್ಕೆ ಹೊಸ ಜಾಹೀರಾತು ನೀತಿ ತರಲಾಗುವುದು.

ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಬದ್ಧರಾಗಿದ್ದೇವೆ, ಇದರ ಹಿಂದಿರುವ ಮಾಫಿಯಾವನ್ನು ಹತೋಟಿಗೆ ತರಬೇಕಿದೆ. ಕಸ ವಿಲೇವಾರಿ ಹಾಗೂ ಸಂಚಾರ ದಟ್ಟಣೆ ನಿಯಂತ್ರಣ ಮಾಡಿದರೆ ಎಲ್ಲವೂ ಹತೋಟಿಗೆ ಬರುತ್ತದೆ ಎಂದರು.

ಬಡವರಿಗೆ ವಸತಿ ನೀಡಲು ಸರ್ಕಾರ ಬದ್ಧವಾಗಿದೆ, ವಸತಿ ಕೋರಿ ಬಂದಿರುವ ಅರ್ಜಿಗಳನ್ನು ಲೆಕ್ಕ ಹಾಕಿ ಅರ್ಹರ ಬಗ್ಗೆ ಪರಿಶೀಲನೆ ಮಾಡಲಾಗುವುದು.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದವರು, ಈಗ ಅವರೇ ಗ್ಯಾರಂಟಿ ಪ್ರಚಾರ ಪಡೆಯುತ್ತಿದ್ದಾರೆ ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DCM DK Shivakumarguarentee scheemtax reduction
5 FacebookTwitterPinterestEmail
admin

previous post
ವರ್ಗಾವಣೆಗೆ ಜಾತಿ ಬಳಕೆ ಅತ್ಯಂತ ಕೆಟ್ಟದ್ದು
next post
ಫೆಬ್ರವರಿ 16ರಂದು ಮತದಾನ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ