ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆ
ಬೆಂಗಳೂರು: ಭಾರತದ ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಿದ್ದು, ಫೆಬ್ರವರಿ 16ರಂದು ಮತದಾನ ನಡೆಯಲಿದೆ.
ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರಾಗಿದ್ದ ಮಾಜಿ ಉಪ ಸಭಾಪತಿ ಪುಟ್ಟಣ್ಣಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆಯ ವೇಳಾಪಟ್ಟಿಯನ್ನು ಆಯೋಗ ಪ್ರಕಟಿಸಿದೆ.
ವೇಳಾಪಟ್ಟಿ ಈ ಕೆಳಕಂಡಂತಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜನವರಿ 23ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕಿಯೆ ಆರಂಭವಾಗಲಿದೆ. ಜನವರಿ 30 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಜನವರಿ 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆಬ್ರವರಿ 2ರಂದು ನಾಮಪತ್ರಗಳನ್ನು ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ.
ಫೆಬ್ರವರಿ 16ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಫೆ.20ರಂದು ನಡೆಯಲಿದೆ. ಫೆ.23ರಂದು ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1 comment
[…] ಶಿಕ್ಷಣ […]