ಸಿದ್ದರಾಮಯ್ಯಗೆ ಪೂರ್ಣಾವಧಿ ಅಧಿಕಾರ: ಡಾ.ಯತೀಂದ್ರ
ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಜಯ ತಂದುಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಅಧಿಕಾರದಲ್ಲಿ ಇರುತ್ತಾರೆ ಎಂದು ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ನೀಡಿರುವ ಹೇಳಿಕೆ ಪ್ರದೇಶ ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಠಿಸಿದೆ. ತಮ್ಮ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ನೀವು ನಮ್ಮ ತಂದೆಯವರಿಗೆ ಬೆನ್ನೆಲುಬಾಗಿ ನಿಂತಿದ್ದರಿಂದ ಎರಡು ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು.
ಕಾಂಗ್ರೆಸ್‌ಗೆ ಬೆಂಬಲ ನೀಡಿ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದೇ ರೀತಿ ಕಾಂಗ್ರೆಸ್‌ಗೆ ಬೆಂಬಲ ನೀಡಿ ನಮ್ಮ ತಂದೆಯವರ ಕೈಬಲಪಡಿಸಿ ಎಂದು ಮನವಿ ಮಾಡಿದ್ದಾರೆ. ಈ ಮನವಿಯೇ ಕಾಂಗ್ರೆಸ್‌ನಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ, ಇದುವರೆಗೂ ಕೆಲವು ಸಚಿವರು ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತಾರೆಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಅವರ ಪುತ್ರನೇ ಇಂತಹ ಹೇಳಿಕೆ ಸಾರ್ವಜನಿಕವಾಗಿ ನೀಡಿರುವುದು ಚುನಾವಣೆಯ ದೂರದೃಷ್ಟಿಯಿಂದಲೋ ಅಥವಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ಕೊಡಲೋ ಎಂಬ ಬಗ್ಗೆ ಚರ್ಚ ನಡೆದಿದೆ.
22 ಸಾವಿರ ಕೋಟಿ ರೂ. ಪ್ರಸ್ತಾವನೆಗೆ ಅಂಕಿತ
ಹೇಳಿಕೆ ತಿರುಚುವ ಅಗತ್ಯವಿಲ್ಲ
ಯತೀಂದ್ರ ನೀಡಿದ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಡಾ.ಯತೀಂದ್ರ ಅವರು ಜವಾಬ್ದಾರಿಯುತ ನಾಯಕ, ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ, ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ ಎಂದಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ, ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿ, ಅವರು ನಾಯಕರಾಗಿ, ನಾನು ಪಕ್ಷದ ಅಧ್ಯಕ್ಷನಾಗಿ ಇಬ್ಬರೂ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ, ಅದರಲ್ಲಿ ಅನುಮಾನವಿಲ್ಲ, ಆಸೆ ಪಡುವುದು ಸಹಜ, ಈ ಸಂದರ್ಭದಲ್ಲಿ ಜನರಿಗೆ ಶಕ್ತಿ ನೀಡುವಂತೆ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಶಕ್ತಿ ನೀಡುವಂತೆ ನಾನೂ ಕೇಳುತ್ತೇನೆ
ನಮ್ಮ ಭಾಗದಲ್ಲಿ ನಾನೂ ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ, ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ, ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದರು. ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಯತೀಂದ್ರ ತಮ್ಮ ತಂದೆಯ ಸಂಘಟನಾ ಶಕ್ತಿ, ಆಡಳಿತ ಚತುರತೆಯ ಬಗ್ಗೆ ಗುಣಗಾನ ಮಾಡಿದ್ದಾರೆ.
ಅವರು ಅಧಿಕಾರದಲ್ಲಿ ಇರುವುದಿಂದಲೇ ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ ಐದು ಭರವಸೆಗಳನ್ನು ಒಂದು ವರ್ಷದ ಆಡಳಿತಾವಧಿಗೂ ಮುನ್ನವೇ ಅನುಷ್ಟಾನಗೊಳಿಸಿ ಜನಸಮಾನ್ಯರ ಮನಸ್ಸನಲ್ಲಿ ಉಳಿದಿದ್ದಾರೆ, ಅಷ್ಟೇ ಅಲ್ಲ ನುಡಿದಂತೆ ನಡೆಯುವವರು ನಾವೇ ಎಂದು ಸಿದ್ಧ ಪಡಿಸಿದ್ದಾರೆ.
ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ
ಇವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲೆಲ್ಲಾ ಬಡವರಿಗೆ, ಶೋಷಿತರಿಗೆ ಕೆಲಸ ಮಾಡುತ್ತಾರೆ, ಇಂತಹವರ ಕೈಬಲಪಡಿಸುವುದು ನಿಮ್ಮ ಜವಾಬ್ದಾರಿ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದು ತಿಳಿಸಿದ್ದಾರೆ.
4 comments
[…] All ರಾಜಕೀಯ ರಾಜಕೀಯ […]
[…] All ರಾಜಕೀಯ Special Story […]
[…] Special Story […]
[…] Special Story […]